ಶಿವಮೊಗ್ಗ : ಸಾಲಬಾಧೆಯಿಂದ ಮನನೊಂದು ರೈತ ಆತ್ಮಹತ್ಯೆ

ಹಂಚಿಕೊಳ್ಳಿ
WhatsApp Facebook X Telegram
Farmer Suresh Commits Suicide in Shivamogga
Farmer Suresh Commits Suicide in Shivamogga
dasrara add shivamogga

ಸುದ್ದಿಯ ಸ್ಥಳ: Shivamogga district, Karnataka

ಮಲೆನಾಡು ಟುಡೆ ಸುದ್ದಿ / ಶಿವಮೊಗ್ಗ : ಮಳೆಯ ಅಭಾವದಿಂದ ಬೆಳೆ ನಷ್ಟ ಉಂಟಾಗಿ, ಸಾಲ ಮರುಪಾವತಿಸಲಾಗದೆ ಆರ್ಥಿಕ ಸಂಕಷ್ಟಕ್ಕೆ ಸಿಲುಕಿದ್ದ ರೈತರೊಬ್ಬರು ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ರಿಪ್ಪನ್‌ಪೇಟೆ ಸಮೀಪದ ಅರಸಾಳು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಬಸವಾಪುರ ಗ್ರಾಮದಲ್ಲಿ ಸಂಭವಿಸಿದೆ.

shivamogga dasara add
dasrara add shivamogga
dasrara add shivamogga

ಬಸವಾಪುರ ಗ್ರಾಮದ ಸುರೇಶ್ ಟಿ. (59) ಮೃತಪಟ್ಟ ರೈತರಾಗಿದ್ದಾರೆ. ಇವರು ತಮ್ಮ 3.3 ಎಕರೆ ಜಮೀನಿನಲ್ಲಿ ಬೆಳೆದಿದ್ದ ಅಡಿಕೆ, ಭತ್ತ ಹಾಗೂ ಕಬ್ಬಿನ ಬೆಳೆಗಳು ಮಳೆ ಕೊರತೆಯಿಂದ ಒಣಗಿ ಹೋಗಿದ್ದವು. ಕೃಷಿಗಾಗಿ ಅರಸಾಳು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದಲ್ಲಿ 75 ಸಾವಿರ ರೂಪಾಯಿ ಸಾಲ ಹಾಗೂ ಸ್ಥಳೀಯವಾಗಿ 5 ರಿಂದ 6 ಲಕ್ಷ ರೂಪಾಯಿ ಕೈಸಾಲ ಮಾಡಿಕೊಂಡಿದ್ದ ಸುರೇಶ್, ಆದಾಯವಿಲ್ಲದೆ ಆತಂಕದಲ್ಲಿದ್ದರು.

ಈ ಹಿನ್ನೆಲೆ ನವೆಂಬರ್ 5ರಂದು ಜಮೀನಿನಲ್ಲಿ ಕಳೆನಾಶಕ ಸೇವಿಸಿದ್ದ ಅವರನ್ನು ತಕ್ಷಣ ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಲಾಯಿತಾದರೂ, ಚಿಕಿತ್ಸೆ ಫಲಿಸದೆ ಅವರು ಮೃತಪಟ್ಟಿದ್ದಾರೆ. ಪ್ರಕರಣದ ಸಂಬಂಧ ರಿಪ್ಪನ್‌ಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

shivamogga dasara add
shivamogga dasara add
ವಿಷಯಗಳು:
ಹಂಚಿಕೊಳ್ಳಿ
WhatsApp Facebook X Telegram
Prathapa thirthahalli
ಲೇಖಕರ ಬಗ್ಗೆ

Prathapa thirthahalli

Malenadu Today Contributor