SHIVAMOGGA NEWS TODAY

ರೈತರೇ ಗಮನಿಸಿ, ಇನ್ಮುಂದೆ ಯೂರಿಯಾ ರಸಗೊಬ್ಬರ ಖರೀದಿಗೆ ಈ ಸಂಖ್ಯೆ ಕಡ್ಡಾಯ 

Prathapa thirthahalli ಅಥಾರಿಟಿ: ಮಲೆನಾಡು ಟುಡೆ ಡೆಸ್ಕ್

Farmers Alert ಶಿವಮೊಗ್ಗ: ಜಿಲ್ಲೆಯ ರೈತರು ಯೂರಿಯಾ ರಸಗೊಬ್ಬರವನ್ನು ಖರೀದಿಸಲು ಇನ್ನು ಮುಂದೆ ಫಾರ್ಮರ್ ಐಡಿ (ಎಫ್‌ಐಡಿ) ಸಂಖ್ಯೆಯನ್ನು ಹೊಂದಿರುವುದು ಕಡ್ಡಾಯವಾಗಿದೆ ಎಂದುಕೃಷಿ ಇಲಾಖೆಯ ಜಂಟಿ ನಿರ್ದೇಶಕರಾದ ಕಿರಣ್ ಕುಮಾರ್ ತಿಳಿಸಿದ್ದಾರೆ.

ಶಿವಮೊಗ್ಗ ವಿಮಾನ ನಿಲ್ದಾಣಶಿವಮೊಗ್ಗ ಏರ್​ಪೋರ್ಟ್​ ವಿಶ್ವೇಶ್ವರ್​ ಭಟ್​ Facebook post ,ಷೇರ್ ಮಾಡಿ ರಿಪ್ಲೆ ನೀಡಿದ ಸಂಸದ

2026-27ನೇ ಸಾಲಿನ ಮುಂಗಾರು ಹಂಗಾಮಿನಿಂದ  ಈ ಹೊಸ ನಿಯಮ ಜಾರಿಗೆ ಬರಲಿದ್ದು, ರಸಗೊಬ್ಬರ ವಿತರಣೆಯಲ್ಲಿ ಪಾರದರ್ಶಕತೆ ತರಲು ಮತ್ತು ಕಾಳಸಂತೆಯಲ್ಲಿ ಗೊಬ್ಬರ ಮಾರಾಟವಾಗುವುದನ್ನು ತಡೆಗಟ್ಟಲು ಈ ಕ್ರಮ ಕೈಗೊಳ್ಳಲಾಗಿದೆ.

ಕೆ-ಕಿಸಾನ್ ತಂತ್ರಾಂಶದ ಬಳಕೆ 

ರೈತರು ತಮ್ಮ ಜಮೀನಿನ ವಿಸ್ತೀರ್ಣ ಮತ್ತು ಬೆಳೆದ ಬೆಳೆಗೆ ಅನುಗುಣವಾಗಿ ಎಷ್ಟು ಪ್ರಮಾಣದ ಗೊಬ್ಬರ ಅಗತ್ಯವಿದೆಯೋ ಅಷ್ಟನ್ನು ಮಾತ್ರ ಕೆ-ಕಿಸಾನ್ ತಂತ್ರಾಂಶದ ಮೂಲಕ ವಿತರಿಸಲಾಗುವುದು.

ಹೊಸ ಎಫ್‌ಐಡಿ ನೋಂದಣಿ 

ಇದುವರೆಗೆ ಫಾರ್ಮರ್ ಐಡಿ ಹೊಂದಿರದ ರೈತರು ತಕ್ಷಣವೇ ತಮ್ಮ ದಾಖಲೆಗಳಾದ ಪಹಣಿ, ಬ್ಯಾಂಕ್ ಪಾಸ್ ಬುಕ್ ಮತ್ತು ಆಧಾರ್ ಕಾರ್ಡ್ನೊಂದಿಗೆ ಹತ್ತಿರದ ರೈತ ಸಂಪರ್ಕ ಕೇಂದ್ರ, ತೋಟಗಾರಿಕೆ ಇಲಾಖೆ ಅಥವಾ ಸಾಮಾನ್ಯ ಸೇವಾ ಕೇಂದ್ರಗಳಿಗೆ ಭೇಟಿ ನೀಡಿ ನೋಂದಾಯಿಸಿಕೊಳ್ಳಬೇಕು.

ಸರ್ವೆ ನಂಬರ್ ಜೋಡಣೆ 

ಈಗಾಗಲೇ ಎಫ್‌ಐಡಿ ಹೊಂದಿರುವ ರೈತರು ತಮ್ಮ ಎಲ್ಲಾ ಸರ್ವೆ ನಂಬರ್‌ಗಳನ್ನು ಅದಕ್ಕೆ ಜೋಡಣೆ ಮಾಡಿಸಿಕೊಳ್ಳಲು ಅವಕಾಶ ಕಲ್ಪಿಸಲಾಗಿದೆ.

ಮಾರಾಟಗಾರರಿಗೆ ಎಚ್ಚರಿಕೆ

 ಅಧಿಕೃತ ರಸಗೊಬ್ಬರ ಮಾರಾಟಗಾರರು ಕಡ್ಡಾಯವಾಗಿ ಕೆ-ಕಿಸಾನ್ ತಂತ್ರಾಂಶದಲ್ಲಿ ರೈತರ ಎಫ್‌ಐಡಿ ನಮೂದಿಸಿಯೇ ಗೊಬ್ಬರ ಮಾರಾಟ ಮಾಡಬೇಕು. ಈ ಸಂಬಂಧ ಇಲಾಖಾಧಿಕಾರಿಗಳಿಗೆ ತರಬೇತಿ ಹಾಗೂ ಮಾಹಿತಿ ನೀಡಲಾಗಿದೆ. ಚಿಲ್ಲರೆ ರಸಗೊಬ್ಬರ ಮಾರಾಟಗಾರರು ತಮ್ಮ ಎಲ್ಲ ಓ ಫಾರಂ ನವೀಕರಣಗೊಳಿಸಿಕೊಳ್ಳಬೇಕು. ಒಂದು ವೇಳೆ ಮಾರಾಟಗಾರರು ಓ ಫಾರಂ ಗಳ ನೋಂದಣಿ ಇಲ್ಲದೇ ಮಾರಾಟ ಮಾಡಿದಲ್ಲಿ, ನಿಯಮ ಮೀರಿ ಹೆಚ್ಚಿನ ಬೆಲೆಗೆ ಮಾರಾಟ ಮಾಡಿದರೆ ಅಥವಾ ಕೃಷಿಯೇತರ ಉದ್ದೇಶಕ್ಕೆ ಗೊಬ್ಬರ ನೀಡಿದರೆ ಅಂತಹ ಮಾರಾಟಗಾರರ ಪರವಾನಗಿಯನ್ನು ರದ್ದುಗೊಳಿಸಲಾಗುವುದು ಎಂದು ಎಚ್ಚರಿಕೆ ನೀಡಲಾಗಿದೆ ಎಂದು ತಿಳಿಸಿದ್ದಾರೆ.

Farmers Alert No Urea Without FID in Shimoga

Farmers Alert New Income Tax Rules Financial Changes From April 1 Karnataka Police Shimoga Kote Marikamba Jatre 2026Shivamogga Health Dept Shimoga-Thirthahalli Road Traffic Diversion Shimoga APMC License Renewal Deadline set for February 28 ವರ್ತಕರೇ ಗಮನಿಸಿ: ಲೈಸೆನ್ಸ್ ನವೀಕರಣಕ್ಕೆ ಫೆಬ್ರವರಿ 28 ರವರೆಗೆ ಮಾತ್ರ ಅವಕಾಶ
Farmers Alert
shivamogga car decor sun control house
shivamogga car decor sun control house

Related News

🔔 Breaking News Alerts

ತಾಜಾ ಸುದ್ದಿಗಳನ್ನು ಮೊದಲು ಪಡೆಯಲು ನಮ್ಮ ನೋಟಿಫಿಕೇಶನ್ ಸೇವೆಯನ್ನು ಸಬ್‌ಸ್ಕ್ರೈಬ್ ಮಾಡಿ.

END OF STORY
ಮಲೆನಾಡು ಟುಡೆ ಫಾಲೋ ಮಾಡಿ

ತಾಜಾ ಸ್ಥಳೀಯ ಸುದ್ದಿಗಳಿಗಾಗಿ ನಮ್ಮ ಅಧಿಕೃತ ಚಾನೆಲ್‌ಗಳಿಗೆ ಸೇರಿ.

Prathapa thirthahalli

Prathapa thirthahalli - Malenadu Today : ತೀರ್ಥಹಳ್ಳಿ ತಾಲ್ಲೂಕು ಗಬಡಿ ಮೂಲದ ಪತ್ರಕರ್ತ ಪ್ರತಾಪ್ ತೀರ್ಥಹಳ್ಳಿ ಕಳೆದ ಮೂರು ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಸದ್ಯ ಮಲೆನಾಡು ಟುಡೆಯಲ್ಲಿ content producer ಆಗಿ ಕಾರ್ಯ ನಿರ್ವಹಿಸುತ್ತಿದ್ದಾರೆ.