farmers protest :  ಭದ್ರಾ ಡ್ಯಾಂ ಬಳಿ ರೈತರ ಬೃಹತ್ ಪ್ರತಿಭಟನೆ | ಎಂಪಿ ರೇಣುಕಾಚಾರ್ಯ ಸೇರಿ ಹಲವರು ವಶಕ್ಕೆ

ಹಂಚಿಕೊಳ್ಳಿ
WhatsApp Facebook X Telegram
farmers protest
farmers protest

farmers protest ಶಿವಮೊಗ್ಗ :  ಭದ್ರಾ ಜಲಾಶಯದ ಬಲದಂಡೆ ಕಾಲುವೆಯಲ್ಲಿ ನಡೆಯುತ್ತಿರುವ ಅವೈಜ್ಞಾನಿಕ ಕಾಮಗಾರಿಯನ್ನು ವಿರೋಧಿಸಿ ಇಂದು ಭದ್ರಾವತಿ ತಾಲೂಕಿನ ಬಿ.ಆರ್.ಪಿ ಬಳಿ ಮಾಜಿ ಶಾಸಕ ಎಂಪಿ ರೇಣುಕಾಚಾರ್ಯ ನೇತೃತ್ವದಲ್ಲಿ ಬೃಹತ್ ರೈತ ಪ್ರತಿಭಟನೆ ನಡೆಯಿತು. ಈ ವೇಳೆ ಸಾವಿರಾರು ರೈತರು ಜಲಾಶಯಕ್ಕೆ ಮುತ್ತಿಗೆ ಹಾಕಲು ಯತ್ನಿಸಿದರು.

ಜಲಜೀವನ್ ಯೋಜನೆಯಡಿ ಜಾಕ್‌ವೆಲ್‌ಗೆ ಭದ್ರಾ ಜಲಾಶಯದ ಬಲದಂಡೆಯಿಂದ ನೀರು ಪೂರೈಸಲು ನಡೆಯುತ್ತಿರುವ ಕಾಮಗಾರಿಗೆ ರೈತರು ತೀವ್ರ ವಿರೋಧ ವ್ಯಕ್ತಪಡಿಸಿದ್ದಾರೆ. ಬಲದಂಡೆಯನ್ನು ಸೀಳಿ ಈ ಕಾಮಗಾರಿ ನಡೆಸಲಾಗುತ್ತಿದ್ದು, ಇದು ಅವೈಜ್ಞಾನಿಕವಾಗಿದೆ ಮತ್ತು ಡ್ಯಾಂ ಸುರಕ್ಷತೆಗೆ ಅಪಾಯಕಾರಿ ಎಂದು ರೈತರು ಆತಂಕ ವ್ಯಕ್ತಪಡಿಸಿದ್ದಾರೆ. ಕೂಡಲೇ ಈ ಕಾಮಗಾರಿಯನ್ನು ಸ್ಥಗಿತಗೊಳಿಸುವಂತೆ ಅವರು ಆಗ್ರಹಿಸಿದ್ದಾರೆ..

farmers protest :  ಪೊಲೀಸರಿಂದ ಬಿಗಿ ಬಂದೋಬಸ್ತ್, ಎಂಪಿ ರೇಣುಕಾಚಾರ್ಯ ವಶಕ್ಕೆ

ಪ್ರತಿಭಟನೆಯ ಹಿನ್ನೆಲೆಯಲ್ಲಿ ಭದ್ರಾ ಜಲಾಶಯದ ಸುತ್ತಮುತ್ತ ಭಾರಿ ಪೊಲೀಸ್ ಬಂದೋಬಸ್ತ್ ಮಾಡಲಾಗಿತ್ತು. ಕಾಮಗಾರಿ ಸ್ಥಳಕ್ಕೆ ರೈತರು ತೆರಳದಂತೆ ಬ್ಯಾರಿಕೇಡ್ ಹಾಕಿ ಪೊಲೀಸರು ನಿರ್ಬಂಧಿಸಿದರು. ದಾವಣಗೆರೆಯಿಂದ ಆಗಮಿಸಿದ್ದ ಸಾವಿರಾರು ರೈತರನ್ನು ಶಿವಮೊಗ್ಗದ ಗಡಿ ಭಾಗದಲ್ಲೇ ಬ್ಯಾರಿಕೇಡ್ ಹಾಕಿ ಪೊಲೀಸರು ತಡೆದರು. ಶಿವಮೊಗ್ಗ ಹಾಗೂ ಚಿಕ್ಕಮಗಳೂರು ಜಿಲ್ಲಾ ಪೊಲೀಸರು ಜಂಟಿ ಕಾರ್ಯಾಚರಣೆ ನಡೆಸಿ, ಪ್ರತಿಭಟನಾಕಾರರನ್ನು ನಿಯಂತ್ರಿಸಿದರು. ಪ್ರತಿಭಟನೆಯು ತೀವ್ರ ಸ್ವರೂಪ ಪಡೆದುಕೊಳ್ಳುತ್ತಿದ್ದಂತೆ, ಮಾಜಿ ಸಚಿವ ಎಂ.ಪಿ. ರೇಣುಕಾಚಾರ್ಯ ಸೇರಿದಂತೆ ಹಲವಾರು ಪ್ರಮುಖ ಹೋರಾಟಗಾರರನ್ನು ಪೊಲೀಸರು ವಶಕ್ಕೆ ಪಡೆದರು.

 

farmers protest
farmers protest ರೈತರ ಪ್ರತಿಭಟನೆ

 

ಹಂಚಿಕೊಳ್ಳಿ
WhatsApp Facebook X Telegram
Prathapa thirthahalli
ಲೇಖಕರ ಬಗ್ಗೆ

Prathapa thirthahalli

Malenadu Today Contributor