ಮನೆಯ ಮುಂದೆ ಲಾಂಗ್ ಹಿಡಿದು ಗಲಾಟೆ, ದಾಖಲಾಯ್ತು ಕೇಸ್!

ಹಂಚಿಕೊಳ್ಳಿ
WhatsApp Facebook X Telegram
bhdaravati news image
Bhadravathi Court Sentences Man to 2 Years Jail Bhadravati news Basaveshwara Statue 25

ಮಲೆನಾಡು ಟುಡೆ ಸುದ್ದಿ / ಭದ್ರಾವತಿ / ಭದ್ರಾವತಿ (Bhadravathi) ನಗರದ ಹೊಸಮನೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ, ರಾತ್ರಿ ವೇಳೆ ಕೈಯಲ್ಲಿ ಲಾಂಗ್ ಹಿಡಿದು ಸಾರ್ವಜನಿಕರಲ್ಲಿ ಭಯ ಹುಟ್ಟಿಸಿದ ವ್ಯಕ್ತಿಯ ವಿರುದ್ಧ ಪೊಲೀಸರು ಕೇಸ್​ ಮಾಡಿದ್ದಾರೆ. ಇದನ್ನ ಪ್ರಶ್ನಿಸಿದ ವ್ಯಕ್ತಿಯನ್ನು ತಳ್ಳಿ ಬೀಳಿಸಿ ಜೀವ ಬೆದರಿಕೆ ಹಾಕಿದ ಘಟನೆ ಕೂಡ ನಡೆದಿದೆ.

ಆಗಸ್ಟ್ 24ರಂದು ಈ ಘಟನೆ ನಡೆದಿದೆ. ಇಲ್ಲಿನ ನಿವಾಸಿಯೊಬ್ಬ ಇಲ್ಲಿನ ಮನೆಯೊಂಧರ ಮುಂದೆ ಲಾಂಗ್ ಹಿಡಿದು ಗಲಾಟೆ ಮಾಡಿದ್ದಾನೆ. ಇದನ್ನ ಪ್ರಶ್ನಿಸಿದ್ದಕ್ಕೆ, ಅವರನ್ನ ನಿಂದಿಸಿ ಕೈಯಿಂದ ಹೊಡೆದು ತಳ್ಳಿ ಬೀಳಿಸಿದ್ದಾನೆ ಎಂದು ದೂರಿನಲ್ಲಿ ತಿಳಿಸಲಾಗಿದೆ. ಅಲ್ಲದೆ, ಸುಮ್ಮನೆ ಮನೆಯೊಳಗೆ ಹೋಗದಿದ್ದರೆ ಕೈಯಲ್ಲಿರುವ ಲಾಂಗ್‌ನಿಂದ ಜೀವ ತೆಗೆಯುವುದಾಗಿ ಬೆದರಿಕೆ ಹಾಕಿರುವುದಾಗಿಯೂ ಆರೋಪಿಸಲಾಗಿದೆ.

ಅಲ್ಲದೆ ಸುತ್ತಮುತ್ತಲಿನ ಜನರಿಗೂ ಹೆದರಿಸಿದ ಆರೋಪ ಕೇಳಿಬಂದಿದ್ದು, ಜೀವ ಬೆದರಿಕೆ ಹಾಕಿದ ಆರೋಪ ಕೇಳಿಬಂದಿದೆ. ಸದ್ಯ ಘಟನೆ ಸಂಬಂಧ ಹೊಸಮನೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದ್ದು, ಸಾರ್ವಜನಿಕ ಸ್ಥಳದಲ್ಲಿ ಮಾರಕಾಸ್ತ್ರ ಹಿಡಿದು ಭಯ ಹುಟ್ಟಿಸುವ ರೀತಿಯಲ್ಲಿ ವರ್ತಿಸಿರುವುದು, ಹಲ್ಲೆ ನಡೆಸಿರುವುದು, ಅವಾಚ್ಯವಾಗಿ ನಿಂದಿಸಿರುವುದು ಹಾಗೂ ಜೀವ ಬೆದರಿಕೆ ಹಾಕಿರುವ ಆರೋಪಗಳ ಸಂಬಂಧ ಪೊಲೀಸರು ಬಿಎನ್‌ಎಸ್ 115(2), 352, 351(2) ಹಾಗೂ ಭಾರತೀಯ ಶಸ್ತ್ರಾಸ್ತ್ರ ಕಾಯ್ದೆ 1959ರ 25(1)(A) ಅಡಿಯಲ್ಲಿ ಎಫ್‌ಐಆರ್ ದಾಖಲಿಸಿದ್ದಾರೆ.

ವಿಷಯಗಳು:
ಹಂಚಿಕೊಳ್ಳಿ
WhatsApp Facebook X Telegram
ajjimane ganesh
ಲೇಖಕರ ಬಗ್ಗೆ

ajjimane ganesh

Malenadu Today Contributor