ಶಿವಮೊಗ್ಗದ ಇಬ್ಬರು ಪೊಲೀಸ್ ಸಿಬ್ಬಂದಿ ವಿರುದ್ಧ ಹೊರಜಿಲ್ಲೆಗಳಲ್ಲಿ ಪ್ರತ್ಯೇಕ ಎಫ್‌ಐಆರ್

ಹಂಚಿಕೊಳ್ಳಿ
WhatsApp Facebook X Telegram
Lightning Strike Trading advertisement Current shock : Rippon pete Dasara Sports cyber crimeThreat case
Lightning Strike Trading advertisement Rippon pete Dasara Sports cyber crime Threat case

Police from Shivamogga ಮಲೆನಾಡು ಟುಡೆ ಸುದ್ದಿ / ಶಿವಮೊಗ್ಗ / ಲೈಂಗಿಕ ಕಿರುಕುಳ ನೀಡಿದ ಆರೋಪದ ಅಡಿಯಲ್ಲಿ ಶಿವಮೊಗ್ಗ ಜಿಲ್ಲೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಇಬ್ಬರು ಪೊಲೀಸ್ ಸಿಬ್ಬಂದಿ (Police from Shivamogga) ವಿರುದ್ಧ ಪ್ರತ್ಯೇಕವಾಗಿ ಎಫ್‌ಐಆರ್ ದಾಖಲಾಗಿದೆ. ಕಾನ್‌ಸ್ಟೆಬಲ್ ಒಬ್ಬರ ವಿರುದ್ಧ ದಾವಣಗೆರೆ ಜಿಲ್ಲೆಯಲ್ಲಿ ಹಾಗೂ ಸಬ್ ಇನ್‌ಸ್ಪೆಕ್ಟರ್ ಒಬ್ಬರ ವಿರುದ್ಧ ಚಿತ್ರದುರ್ಗ ಜಿಲ್ಲೆಯಲ್ಲಿ ದೂರು ದಾಖಲಾಗಿದೆ.

ಮೊದಲನೇ ಪ್ರಕರಣದಲ್ಲಿ, ಲೈಂಗಿಕವಾಗಿ ಸಹಕರಿಸುವಂತೆ ಮಹಿಳೆಯೊಬ್ಬರಿಗೆ ಕಿರುಕುಳ ನೀಡಿದ ಆರೋಪದ ಮೇರೆಗೆ ಕಾನ್​ಸ್ಟೇಬಲ್​ ವಿರುದ್ಧ ಸಂತ್ರಸ್ತ ಮಹಿಳೆ ಜೂನ್ 16ರಂದು ದೂರು ನೀಡಿದ್ದರು. ಮರುದಿನ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ. ಆರೋಪಿಯ ವಿರುದ್ಧ ಬೆದರಿಕೆ ಹಾಕುತ್ತಿರುವ ಬಗ್ಗೆಯು ದೂರಿನಲ್ಲಿ ಉಲ್ಲೇಖಿಸಲಾಗಿದೆ. ಅಲ್ಲದೆ ವೈಯಕ್ತಿಕ ಚಿತ್ರಗಳನ್ನು ಸೋಶಿಯಲ್ ಮೀಡಿಯಾದಲ್ಲಿ ಹರಿಬಿಡುವ ಬಗ್ಗೆಯು ಬೆದರಿಕೆ ಹಾಕಿದ್ದರು ಎಂದು ದೂರಲಾಗಿದೆ. (ವೈಯಕ್ತಿಕ ವಿವರಗಳು ಗೌಪ್ಯವಾಗಿರಿಸಲಾಗಿದೆ.)

ನಿಮ್ಮ ವಾಟ್ಸಾಪ್​ಗೆ ಸುದ್ದಿ ಕಳುಹಿಸಲು ಕ್ಲಿಕ್​ ಮಾಡಿ ಗ್ರೂಪ್​ಗೆ ಜಾಯಿನ್ ಆಗಿ :  Whatsapp / https://chat.whatsapp.com/JrsZ8He4nN600n0r3tJItz

ಎರಡನೇ ಪ್ರಕರಣದಲ್ಲಿ, ಶಿವಮೊಗ್ಗ ಜಿಲ್ಲೆಯ ಠಾಣೆಯೊದರ ಸಬ್‌ ಇನ್‌ಸ್ಪೆಕ್ಟರ್ (ಎಸ್‌ಐ) ಒಬ್ಬರ ವಿರುದ್ಧ ಬೆಂಗಳೂರು ಮೂಲದ ಯುವತಿಯೊಬ್ಬರು ಚಿತ್ರದುರ್ಗ ಜಿಲ್ಲೆಯಲ್ಲಿ ದೂರು ನೀಡಿದ್ದು, ಈ ಸಂಬಂಧ ಎಫ್​ಐಆರ್​ ಆಗಿದೆ ಈ ಹಿಂದೆ ಜಿಲ್ಲೆಯಲ್ಲಿ ಸೇವೆ ಸಲ್ಲಿಸ್ತಿದ್ದ ಸಂದರ್ಭದಲ್ಲಿ ಎಸ್​ಐ ಸಂತ್ರಸ್ತೆ ಗೆ ಮದುವೆಯಾಗುವುದಾಗಿ ನಂಬಿಸಿ ಲೈಂಗಿಕ ದೌರ್ಜನ್ಯವೆಸಗಿದ್ದರು ಎಂದು ಆರೋಪಿಸಲಾಗಿದೆ. ಎರಡು ಪ್ರಕರಣಗಳು ಸೂಕ್ಷ್ಮವಾಗಿರುವ ಹಿನ್ನೆಲೆಯಲ್ಲಿ ವೈಯಕ್ತಿಕ ವಿವರಗಳನ್ನ ಉಲ್ಲೇಖಿಸಲಾಗಿಲ್ಲ.

ಹಂಚಿಕೊಳ್ಳಿ
WhatsApp Facebook X Telegram
ajjimane ganesh
ಲೇಖಕರ ಬಗ್ಗೆ

ajjimane ganesh

Malenadu Today Contributor