Shivamogga Feb 19, 2024 ಹುಂಡೈ ಶೋರೂಂನಲ್ಲಿ ಬೆಂಕಿ ಕಾಣಿಸಿದ ಘಟನೆ ಬೆನ್ನಲ್ಲೆ ಶಿವಮೊಗ್ಗದ ಮತ್ತೂರು ಮತ್ತೊಂದು ಅಗ್ನಿ ಆಕಸ್ಮಿಕದ ಘಟನೆ ಬಗ್ಗೆ ವರದಿಯಾಗಿದೆ. ಘಟನೆಯಲ್ಲಿ ಸ್ಥಳೀಯ ಗೋಡೌನ್ ಒಂದರಲ್ಲಿ ಬೆಂಕಿ ಕಾಣಿಸಿಕೊಂಡಿದ್ದು ಬೆಲೆ ಬಾಳುವ ವಸ್ತುಗಳು ಸುಟ್ಟುಹೋಗಿವೆ.
ಇಲ್ಲಿನ ನಿವಾಸಿ ಬಾಬಯ್ಯ ಎಂಬುವರಿಗೆ ಸೇರಿ ಗೋದಾಮಿನಲ್ಲಿ ಬೆಂಕಿ ಕಾಣಿಸಿಕೊಂಡಿತ್ತು. ಪರಿಣಾಮ ಅಲ್ಲಿ ನಿಲ್ಲಿಸಿದ್ದ ಸ್ವಿಫ್ಟ್ ಕಾರು, ಅಡಿಕೆ ಚೀಲಗಳು ಮತ್ತು ತೆಂಗಿನ ಕಾಯಿಗಳು ಬೆಂಕಿಗೆ ಆಹುತಿಯಾಗಿದೆ. ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದ ಹೀಗಾಗಿದೆ ಎಂದು ಹೇಳಲಾಗುತ್ತಿದೆ.
ಘಟನೆ ಬೆನ್ನಲ್ಲೆ ಸ್ಥಳಕ್ಕೆ ಬಂದ ಅಗ್ನಿಶಾಮಕ ಸಿಬ್ಬಂದಿ ಬೆಂಕಿ ನಂದಿಸಿದ್ದಾರೆ. ಸದ್ಯ ಈ ಸಂಬಂಧ ತುಂಗಾನಗರ ಪೊಲೀಸ್ ಸ್ಟೇಷನ್ ನಲ್ಲಿ ಪ್ರಕರಣ ದಾಖಲಾಗಿದೆ.