ಶಿವಮೊಗ್ಗ ಜಿಲ್ಲೆ ಭದ್ರಾವತಿ ತಾಲ್ಲೂಕು ದೊಣಬಘಟ್ಟದಲ್ಲಿ ಅಗ್ನಿ ಆಕಸ್ಮಿಕವೊಂದು ಸಂಭವಿಸಿದೆ. ಇಲ್ಲಿನ ಸ್ಥಳೀಯೊಬ್ಬರಿಗೆ ಸೇರಿದ ಹುಲ್ಲಿನ ಬಣವವೆಯೊಂದಕ್ಕೆ ಬೆಂಕಿಬಿದ್ದು ಸಂಪೂರ್ಣ ಸುಟ್ಟು ನಷ್ಟವಾಗಿದೆ.
ಇದನ್ನು ಸಹ ಓದಿ : ಶಿವಮೊಗ್ಗಕ್ಕೆ ಭ್ರಷ್ಟರು ಎಸಿ ಆಗುವುದು ಬೇಡ/ ರಾಜ್ಯ ಸರ್ಕಾರಕ್ಕೆ ಒತ್ತಾಯ/ ಏನಿದು ಬೇಡಿಕೆ ವಿವರ ಇಲ್ಲಿದೆ ಓದಿ
ದೊಣಬಘಟ್ಟ ಗ್ರಾಮದ ನಿವಾಸಿ ನಾಸೀರ್ ಎಂಬವರ ಜಮೀನಿನ ಕಣದಲ್ಲಿದ್ದ ಹುಲ್ಲಿನ ಬಣವೆಗೆ ಬೆಂಕಿ ಬಿದ್ದಿದೆ. ಈ ಸಂಬಂಧ ಮಾಹಿತಿ ತಿಳಿದ ತಕ್ಷಣ ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ಇಲಾಖೆ ಸಿಬ್ಬಂದಿಗಳು ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ. ಘಟನೆಯಲ್ಲಿ ಲಕ್ಷಾಂತರ ರೂಪಾಯಿ ನಷ್ಟ ಉಂಟಾಗಿದೆ ಎನ್ನಲಾಗುತ್ತಿದೆ.
ಇನ್ನಷ್ಟು ಸುದ್ದಿಗಳಿಗಾಗಿ : ನಮ್ಮ ವಾಟ್ಸ್ಯಾಪ್ ಗ್ರೂಪ್ಗೆ ಕ್ಲಿಕ್ ಮಾಡಿ : Whatsapp link