fire : ನಡು ರಸ್ತೆಯಲ್ಲಿ ಧಗಧಗ ಹೊತ್ತಿ ಉರಿದ ಕಾರು!

ಹಂಚಿಕೊಳ್ಳಿ
WhatsApp Facebook X Telegram
ಶಿವಮೊಗ್ಗ ಜಿಲ್ಲೆ ಭದ್ರಾವತಿ ತಾಲ್ಲೂಕಿನ ಬೈಪಾಸ್​ ರಸ್ತೆಯಲ್ಲಿ ನಿನ್ನೆ ಕಾರೊಂದು ನಡು ರಸ್ತೆಯಲ್ಲಿಯೇ ಹೊತ್ತಿ ಉರಿದಿದೆ. ರಸ್ತೆಯಲ್ಲಿ ಹೋಗುತ್ತಿದ್ಧಾಗಲೇ ಕಾರಿನಲ್ಲಿ ಹೊಗೆ ಕಾಣಿಸಿಕೊಂಡಿದೆ. ನೋಡನೋಡುತ್ತಿದ್ದಂತೆ  ಬೆಂಕಿ (Sudden Fire) ಭುಗಿಲೆದ್ದಿದೆ. ತಕ್ಷಣ ಕಾರಿನಲ್ಲಿದ್ದವರು ಅದರಿಂದ ಕೆಳಕ್ಕೆ ಇಳಿದಿದ್ದಾರೆ.
ಇನ್ನೂ ಸ್ಥಳೀಯರು ಅಗ್ನಿಶಾಮಕ ಸಿಬ್ಬಂದಿಗೆ ತಕ್ಷಣವೇ ಫೋನಾಯಿಸಿ ಕರೆಸಿಕೊಂಡಿದ್ದಾರೆ. ಸ್ಥಳಕ್ಕೆ ಬಂದ ಅಗ್ನಿಶಾಮಕ ಸಿಬ್ಬಂದಿ ಬೆಂಕಿ ನಂದಿಸಿದ್ರು. ಅಷ್ಟರಲ್ಲಿ ಕಾರಿನ ಮುಂಭಾಗ ಬಹುತೇಕ ಸುಟ್ಟು ಕರಕಲಾಗಿತ್ತು. ಎಂಪಿಎಂ ಸಮೀಪ ಹಾದು ಹೋಗುವ ಬೈಪಾಸ್ ರಸ್ತೆಯಲ್ಲಿ ಘಟನೆ ಸಂಭವಿಸಿದ್ದು,  ಹಳೇನಗರದ ನಿವಾಸಿ ಶ್ರೀಕಾಂತ್ ಎಂಬುವರಿಗೆ ಸೇರಿದ ಹೊಂಡಾ ಸಿಟಿ ಕಾರು ಅಗ್ನಿಗೆ ಆಹುತಿಯಾಗಿತ್ತು. ಈ ಸಂಬಂಧ  ಪೇಪರ್‌ಟೌನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Facebook ನಲ್ಲಿ ನಮ್ಮ ಪೇಜ್​ ನೋಡಿ : Malenadutoday.com

Twitter ನಲ್ಲಿ ನಾವಿದ್ದೇವೆಫಾಲೋ ಮಾಡಿ : Malenadutoday.com

Instagram ನಲ್ಲಿ ಕ್ಲಿಕ್​ ಮಾಡಿ : Malenadutoday.com

Telegram ನಲ್ಲಿ ಸುದ್ದಿ ಪಡೆಯಲು ಲಿಂಕ್ ಒತ್ತಿ : Malenadutoday.com

ಹಂಚಿಕೊಳ್ಳಿ
WhatsApp Facebook X Telegram
Malenadu Today
ಲೇಖಕರ ಬಗ್ಗೆ

Malenadu Today

Malenadu Today Contributor