ಮೊದಲ ದಿನವೇ 400 ಮಂದಿ ಪ್ರಯಾಣ! ಏರ್​ಪೋರ್ಟ್​ನಲ್ಲಿ ಸಂಸದರು ನೀಡಿದರು ಮತ್ತೊಂದು ಗುಡ್ ನ್ಯೂಸ್!

ಹಂಚಿಕೊಳ್ಳಿ
WhatsApp Facebook X Telegram

SHIVAMOGGA NEWS / ONLINE / Malenadu today/ Nov 21, 2023 NEWS KANNADA

Shivamogga| Malnenadutoday.com |  ಶಿವಮೊಗ್ಗ ವಿಮಾನ ನಿಲ್ದಾಣದಿಂದ ಗೋವಾ, ಹೈದರಾಬಾದ್, ಹಾಗೂ ತಿರುಪತಿಗೆ ವಿಮಾನ ಹಾರಾಟಕ್ಕೆ ಚಾಲನೆ ನೀಡಿದ ಸಂಸದ ಬಿ.ವೈ. ರಾಘವೇಂದ್ರ. ರವರು ಇನ್ನಷ್ಟು ಮಾಹಿತಿಯನ್ನು ನೀಡಿದ್ದಾರೆ. 

ಶಿವಮೊಗ್ಗದ ಸರ್ವಾಂಗೀಣ ಅಭಿವೃದ್ಧಿಗೆ ಮತ್ತೊಂದು ವಿಮಾನ ಸಂಸ್ಥೆ ಸೇರ್ಪಡೆಗೊಂಡಿದ್ದು,  ಈ ಸಂಬಂಧ  ಪ್ರಧಾನಿ ನರೇಂದ್ರ ಮೋದಿ ಹಾಗೂ ಮಾಜಿ ಸಿಎಂ ಯಡಿಯೂರಪ್ಪ ಅವರಿಗೆ ಅಭಿನಂದನೆ ಸಲ್ಲಿಸುತ್ತೇನೆ ಎಂದಿದ್ದಾರೆ. 

ತಿರುಪತಿ, ಹೈದರಾಬಾದ್, ಗೋವಾ ನಡುವಿನ ವಿಮಾನ ಸಂಚಾರ ಉಡಾನ್ ಯೋಜನೆಯಡಿ ಆರಂಭವಾಗಿದ್ದು,  ಒಂದೇ ದಿನ 400 ಜನ ಈ ಹೊಸ ವಿಮಾನದಲ್ಲಿ ಸಂಚರಿಸುತ್ತಿದ್ದಾರೆ ಎಂದು ತಿಳಿಸಿದ್ದಾರೆ. . 

ಕೈಗಾರಿಕೆ ಹಾಗೂ ಪ್ರವಾಸೋದ್ಯಮದ ಅಭಿವೃದ್ಧಿಗೆ ಈ ಏರ್​ಪೋರ್ಟ್​  ಸಹಕಾರಿಯಾಗಲಿದೆ ಎಂದ ಸಂಸದರು ಸ್ಪೈಸ್​ ಜೆಟ್​ ಸೇರಿದಂತೆ ಇನ್ನು ಹಲವು ವಿಮಾನಯಾನ ಸಂಸ್ಥೆಗಳು ಶಿವಮೊಗ್ಗದಲ್ಲಿ ಹಾರಾಟ ನಡೆಸಲು ಉತ್ಸುಕರಾಗಿದ್ದಾರೆ ಎಂದು ತಿಳಿಸಿದರು

READ : ದಿನವಿಡಿ ಶಿವಮೊಗ್ಗದ ಈ ಪ್ರಮುಖ ಪ್ರದೇಶಗಳಲ್ಲಿ POWER CUT ! ಎಲ್ಲೆಲ್ಲಿ? ವಿವರ ಇಲ್ಲಿದೆ

ಇನ್ನೂ ನಿಲ್ದಾಣದಲ್ಲಿ ಮಂಜಿನ ಕಾರಣಕ್ಕೆ ವಿಮಾನಗಳ ಲ್ಯಾಂಡಿಂಗ್ ಸಮಸ್ಯೆಯಾಗುತ್ತಿರುವ ಬಗ್ಗೆ ಪ್ರತಿಕ್ರಿಯಿಸಿದ ಅವರು, ಮಂಜು ಕವಿದ ವಾತಾವರಣ ತಿಳಿಗೊಳಿಸಲು ಕ್ರಮ ತೆಗೆದುಕೊಳ್ಳಲಾಗಿದೆ. ಎಲ್ಲಾ ತಾಂತ್ರಿಕ ತೊಂದರೆಗಳು ಕಡಿಮೆಯಾಗುವಂತೆ ಮಾಡಲು ಕ್ರಮ ವಹಿಸಲಾಗಿದೆ ಎಂದು ತಿಳಿಸಿದ್ದಾರೆ

ಏರ್ಪೋರ್ಟ್ ಮತ್ತಷ್ಟು ಅಭಿವೃದ್ಧಿ ಆಗಬೇಕಿದೆ ಎಂದ ಅವರು,  ಈ ನಿಟ್ಟಿನಲ್ಲಿ ಅಧಿಕಾರಿಗಳೊಂದಿಗೆ ಚರ್ಚಿಸಲಾಗಿದೆ ಎಂದರು, ಅಲ್ಲದೆ  ನೈಟ್ ಲ್ಯಾಂಡಿಂಗ್ ವ್ಯವಸ್ಥೆ ಕೂಡ ಡಿಸೆಂಬರ್ ವೇಳೆಗೆ ಮುಗಿಯಲಿದೆ ಎಂದು ಮಾಹಿತಿ ನೀಡಿದರು. 


ವಿಷಯಗಳು:
ಹಂಚಿಕೊಳ್ಳಿ
WhatsApp Facebook X Telegram
Malenadu Today
ಲೇಖಕರ ಬಗ್ಗೆ

Malenadu Today

Malenadu Today Contributor