flower show : ಶಿವಮೊಗ್ಗದಲ್ಲಿ ನಾಲ್ಕು ದಿನ ಫಲಪುಷ್ಪ ಪ್ರದರ್ಶನ| ಈ ಸಲದ ವಿಶೇಷ ಅಚ್ಚರಿ ಏನು ಗೊತ್ತಾ?

flower showi : Four-day flower show in Shivamogga begins on Jan. 26 :The Horticulture Department will conduct a four-day flower show at Dr. B.R. Ambedkar Bhavan in Shivamogga beginning on January 26 to mark the Republic Day celebrations.

flower show  : ಶಿವಮೊಗ್ಗದಲ್ಲಿ ನಾಲ್ಕು ದಿನ ಫಲಪುಷ್ಪ ಪ್ರದರ್ಶನ|  ಈ ಸಲದ ವಿಶೇಷ ಅಚ್ಚರಿ ಏನು ಗೊತ್ತಾ?
flower show : ಶಿವಮೊಗ್ಗದಲ್ಲಿ ನಾಲ್ಕು ದಿನ ಫಲಪುಷ್ಪ ಪ್ರದರ್ಶನ| ಈ ಸಲದ ವಿಶೇಷ ಅಚ್ಚರಿ ಏನು ಗೊತ್ತಾ?

flower show in Shivamogga  : ಜ.26 ರಿಂದ 29 ರವರೆಗೆ ಶಿವಮೊಗ್ಗದಲ್ಲಿ ಫಲಪುಷ್ಪ ಪ್ರದರ್ಶನ ಹಮ್ಮಿಕೊಳ್ಳಲಾಗಿದೆ. ಗಣರಾಜ್ಯೋತ್ಸವದ ಪ್ರಯುಕ್ತ .26 ರಿಂದ 29 ರವರೆಗೆ ನಾಲ್ಕು ದಿನಗಳ ಕಾಲ ನಗರದ ತೋಟಗಾರಿಕೆ ಇಲಾಖೆ ಹಾಗೂ ಡಾ.ಬಿ.ಆರ್.ಅಂಬೇಡ್ಕರ್ ಭವನದ ಆವರಣದಲ್ಲಿ ಫಲ-ಪುಷ್ಪ ಪ್ರದರ್ಶನವನ್ನು ಆಯೋಜಿಸಲಾಗಿದೆ ಎಂದು ತೋಟಗಾರಿಕೆ ಇಲಾಖೆ ಉಪ ನಿರ್ದೇಶಕ ಪ್ರಕಾಶ್ ತಿಳಿಸಿದರು.  61 ನೇ ಫಲ-ಪುಷ್ಪ ಪ್ರದರ್ಶನದ ಕುರಿತು ಮಾಹಿತಿ ನೀಡಲು ಕರೆಯಲಾಗಿದ್ದ ಪತ್ರಿಕಾಗೋಷ್ಟಿಯನ್ನುದ್ದೇಶಿಸಿ ಅವರು ಮಾತನಾಡಿದರು.

ತೋಟಗಾರಿಕೆ ಇಲಾಖೆ, ಜಿಲ್ಲಾ ಉದ್ಯಾನ ಕಲಾ ಸಂಘ, ಕೃಷಿ ಸಂಬಂಧಿತ ಅಭಿವೃದ್ಧಿ ಇಲಾಖೆಗಳು ಶಿವಮೊಗ್ಗ ಇವರ ಸಂಯುಕ್ತ ಆಶ್ರಯದಲ್ಲಿ ಫಲ-ಪುಷ್ಪ ಪ್ರದರ್ಶನವನ್ನು ಏರ್ಪಡಿಸಲಾಗಿದೆ. ಬಾರಿಯ ಫಲ-ಪುಷ್ಪ ಪ್ರದರ್ಶನದ ವಿಶೇಷತೆಗಳೆಂದರೆ ಜಿಲ್ಲೆಯ ಸಸ್ಯ ಸಂಪತ್ತು ಮತ್ತು ವನ್ಯಜೀವಿ ಆಕೃತಿಗಳು ಹಾಗೂ ಕರ್ನಾಟಕ ರತ್ನ ಡಾ.ಪುನೀತ್ ರಾಜ್ ಕುಮಾರ್ರವರ ಹೂವಿನ ಕಲಾಕೃತಿ ಗಂಧದ ಗುಡಿಶಿವಮೊಗ್ಗ ವಿಮಾನ ನಿಲ್ದಾಣ ಮಾದರಿ, 'ಶಿವಮೊಗ್ಗ, ಸ್ಮಾರ್ಟ್ ಸಿಟಿ' ಮಾದರಿ, ಹೂವಿನ ಫೋಟೋ ಫ್ರೇಮ್ ಹಾಗೂ  ಮಕ್ಕಳನ್ನು ಆಕರ್ಷಿಸಿಸುವ ಹೂವಿನ ಗೊಂಬೆಗಳು.

*#SAVEVISL : ಭದ್ರಾವತಿ ವಿಐಎಸ್​ಎಲ್​ ಉಳಿಸಲು ಪ್ರಧಾನಿ ಮೋದಿಗೆ ದೇವೇಗೌಡರ ಪತ್ರ!

ಫಲ-ಪುಷ್ಪ ಪ್ರದರ್ಶನದಲ್ಲಿ ರೈತರಿಗಾಗಿ ತೋಟಗಾರಿಕೆ ಉತ್ಪನ್ನಗಳ ಪ್ರದರ್ಶಿಕೆಗಳ ಸ್ಪರ್ಧೆ, ಮಹಿಳೆಯರಿಗಾಗಿ ಹೂವಿನ ರಂಗೋಲಿ ಸ್ಪರ್ಧೆ(ವಿವಿಧ ಸಸ್ಯ ಭಾಗಗಳನ್ನು, ಹೂ, ಮೊಗ್ಗು, ಎಲೆ, ಹಣ್ಣು, ಬೀಜ, ಧಾನ್ಯಗಳನ್ನು ಬಳಸಿ ರಂಗೋಲಿ ರಚನೆ)ಮನೆ/ಶಾಲೆ/ಅಂಗನವಾಡಿ ಕಚೇರಿ/ಖಾಸಗಿ ಸಂಸ್ಥೆಗಳಿಗೆ ಕೈತೋಟ, ತಾರಸಿ ತೋಟ ಮತ್ತು ಉದ್ಯಾನ ವನಗಳ ಸ್ಪರ್ಧೆ ಏರ್ಪಡಿಸಲಾಗಿದೆ.ಜಿಲ್ಲೆಯ ಎಲ್ಲಾ ತಾಲೂಕುಗಳ ರೈತರು ಬೆಳೆದ ವಿಶೇಷ ರೀತಿಯ ಹೂ, ಹಣ್ಣು, ತರಕಾರಿ ಮತ್ತಿತರ ತೋಟಗಾರಿಕೆ ಉತ್ಪನಗಳ ಪ್ರದರ್ಶನ ಮತ್ತು ಸ್ಪರ್ಧೆಯನ್ನು ಏರ್ಪಡಿಸಲಾಗಿದೆ . ಜಿಲ್ಲಾ ಪಂಚಾಯತ್ ವತಿಯಿಂದ ರಾಷ್ಟ್ರೀಯ ಗ್ರಾಮೀಣ ಜೀವನೋಪಾಯ ಮಿಷನ್(ಎನ್ಆರ್ಎಲ್ಎಂ)-ಸಂಜೀವಿನಿ ಯೋಜನೆಯಡಿ ಮಹಿಳಾ ಸ್ವಸಹಾಯ ಸಂಘಗಳ ವೈವಿಧ್ಯಮಯ ಉತ್ಪನ್ನಗಳ ವಸ್ತು ಪ್ರದರ್ಶನ ಮತ್ತು ಮಾರಾಟ ಮೇಳವನ್ನು ಇಲ್ಲಿ ಆಯೋಜಿಸಲಾಗಿದೆ. 

Soraba : ಅಚ್ಚರಿಯಾದರೂ ಸತ್ಯ! 14 ತಹಶೀಲ್ದಾರ್​ಗಳ ವರ್ಗಾವಣೆಯ ನಡುವೆ, ಸೊರಬದಲ್ಲಿ ಮತ್ತೆ ಮೂವರ ಟ್ರಾನ್ಸ್​ಫರ್​! ಕಾರಣ ?

ಕೃಷಿ, ಪಶುಸಂಗೋಪನೆ, ರೇಷ್ಮೆ, ಮೀನುಗಾರಿಕೆ, ಕೃಷಿ ಮತ್ತು ತೋಟಗಾರಿಕೆ ವಿಶ್ವವಿದ್ಯಾಲಯ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ಮಹಾನಗರ ಪಾಲಿಕೆ, ಸ್ತ್ರೀ ಶಕ್ತಿ ಸಂಘಗಳು, ಕೃಷಿ ಮತ್ತು ತೋಟಗಾರಿಕೆ ಯಂತ್ರೋಪಕರಣಗಳು, ಹನಿನೀರಾವರಿ ಉಪಕರಣಗಳು, ಅಲಂಕಾರಿಕ ಹೂ ಗಿಡಗಳ ನರ್ಸರಿ ಇತ್ಯಾದಿ ಒಟ್ಟು ವಿವಿಧ ರೀತಿಯ 80 ಮಳಿಗೆಗಳು ಪ್ರದರ್ಶನದಲ್ಲಿರುತ್ತವೆ.ಅರಣ್ಯ ಇಲಾಖೆ ಮತ್ತು ಮೃಗಾಲಯ ಪ್ರಾಧಿಕಾರದ ಹುಲಿ ಮತ್ತು ಸಿಂಹಧಾಮದ ವತಿಯಿಂದ ವಿವಿಧ ವನ್ಯಜೀವಿ ಲೋಕದ ಪರಿಚಯ ಹಾಗೂ ವಿವಿಧ ಪ್ರಾತ್ಯಕ್ಷಿಕೆಗಳಾದ ಕೈತೋಟದ ಪ್ರಾತ್ಯಕ್ಷತೆ, ವಿವಿಧ ಅಲಂಕಾರಿಕೆ ಹೂಗಳು, ಕುಬ್ಜಗಿಡಗಳು(ಬೋನ್ಸಾಯ್), ಅಣಬೆ ಪ್ರಾತ್ಯಕ್ಷತೆ ಹಾಗೂ ಜೇನು ಕೃಷಿ ಕುರಿತಾದ ಪ್ರಾತ್ಯಕ್ಷತೆ ಹಾಗೂ ಸುಮಾರು 5 ಸಾವಿರ ವಿವಿಧ ಜಾತಿಯ ಆಕರ್ಷಕ ಹೂ ಕುಂಡಗಳ ಪ್ರದರ್ಶನ ಏರ್ಪಡಿಸಲಾಗಿದೆ.

ಫಲ-ಪುಷ್ಪ ಪ್ರದರ್ಶನದ ವೀಕ್ಷಣೆಗೆ ಬರುವ ಸಾರ್ವಜನಿಕರ ಅನುಕೂಲಕ್ಕಾಗಿ ಶುಚಿಯಾದ ಮತ್ತು ರುಚಿಯಾದ ಆಹಾರೋತ್ಪನ್ನಗಳ ಆಹಾರ ಮೇಳವನ್ನು ಸಹ ಏರ್ಪಡಿಸಲಾಗಿದೆ. ಪ್ರವೇಶ ಶುಲ್ಕ ವಯಸ್ಕರಿಗೆ ರೂ.10 ಮತ್ತು ಮಕ್ಕಳಿಗೆ ರೂ.5 ನಿಗದಿಗೊಳಿಸಿದ್ದು ಶಿಕ್ಷಕರ ಜೊತೆ ಬರುವ ಶಾಲಾ ಮಕ್ಕಳಿಗೆ ಉಚಿತ ಪ್ರವೇಶ ಉಚಿತವಾಗಿರುತ್ತದೆ.  .27 ಮತ್ತು 28 ರಂದು ಸಂಜೆ 6 ರಿಂದ 8 ರವರೆಗೆ ಶಾಲಾ ಮಕ್ಕಳಿಂದ ಸಾಂಸ್ಕೃತಿಕ ಕಾರ್ಯಕ್ರಮವಿರುತ್ತದೆ. .29 ರಂದು ಸಮಾರೋಪ ಸಮಾರಂಭವಿದ್ದು ಫಲ-ಪುಷ್ಪ ಪ್ರದರ್ಶನದ ವಿವಿಧ ಸ್ಪರ್ಧೆಗಳನ್ನು ವಿಜೇತರಾದವರಿಗೆ ಬಹುಮಾನ ವಿತರಣೆ ಮತ್ತು ಭಾಗವಹಿಸಿದ ಎಲ್ಲಾ ಸರ್ಕಾರಿ/ಸರ್ಕಾರೇತರ ಸಂಘ ಸಂಸ್ಥೆಗಳಿಗೆ ಅಭಿನಂದಿಸಲಾಗುವುದು ಎಂದು ಮಾಹಿತಿ ನೀಡಿದರು.     

ನಮ್ಮ ವಾಟ್ಸ್ಯಾಪ್ ಗ್ರೂಪ್ ಲಿಂಕ್ ಇದು  ಕ್ಲಿಕ್ ಮಾಡಿ

Facebook ನಲ್ಲಿ ನಮ್ಮ ಪೇಜ್​ ನೋಡಿ : Malenadutoday.com

Twitter ನಲ್ಲಿ ನಾವಿದ್ದೇವೆಫಾಲೋ ಮಾಡಿ : Malenadutoday.com

Instagram ನಲ್ಲಿ ಕ್ಲಿಕ್​ ಮಾಡಿ : Malenadutoday.com

Telegram ನಲ್ಲಿ ಸುದ್ದಿ ಪಡೆಯಲು ಲಿಂಕ್ ಒತ್ತಿ : Malenadutoday.com