ಮಾಜಿ ಸಿಎಂ ಬಿಎಸ್‌ ಯಡಿಯೂರಪ್ಪರವರ ವಿರುದ್ಧ CID ಚಾರ್ಜ್‌ಶೀಟ್‌

Former Chief Minister BS Yediyurappa and three others have been charged by CID officials

ಮಾಜಿ ಸಿಎಂ ಬಿಎಸ್‌ ಯಡಿಯೂರಪ್ಪರವರ ವಿರುದ್ಧ CID ಚಾರ್ಜ್‌ಶೀಟ್‌
Former Chief Minister BS Yediyurappa

SHIVAMOGGA | MALENADUTODAY NEWS | Jun 28, 2024  ಮಲೆನಾಡು ಟುಡೆ 

ಅಪ್ರಾಪ್ತೆಗೆ ಲೈಂಗಿಕ ಕಿರುಕುಳ ನೀಡಿದ್ದ ಆರೋಪದ ಪ್ರಕರಣದಲ್ಲಿ ಮಾಜಿ ಸಿಎಂ ಬಿಎಸ್‌ ಯಡಿಯೂರಪ್ಪ ಸೇರಿದಂತೆ ನಾಲ್ವರ ವಿರುದ್ಧ  ಸಿಐಡಿ ಅಧಿಕಾರಿಗಳು ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ (ಚಾರ್ಜ್‌ಶೀಟ್) ಸಲ್ಲಿಸಿದ್ದಾರೆ ಎಂದು ರಾಜ್ಯಮಟ್ಟದ ಮಾಧ್ಯಮಗಳು ವರದಿ ಮಾಡಿವೆ. ಇತ್ತೀಚೆಗಷ್ಟೇ ಯಡಿಯೂರಪ್ಪ ಅವರನ್ನು ವಿಚಾರಣೆಗೆ ಒಳಪಡಿಸಿದ್ದ ಅಧಿಕಾರಿಗಳು ಈ ಸಂಬಂದ ಇದೀಗ ಕೋರ್ಟ್‌ಗೆ ಚಾರ್ಜ್‌ಶೀಟ್‌ ಸಲ್ಲಿಸಿದ್ದಾರೆ ಎಂದು ಹೇಳಲಾಗಿದೆ. ಚಾರ್ಜ್‌ಶೀಟ್‌ನಲ್ಲಿನ ಆರೋಪಗಳ ಬಗ್ಗೆ ಇನ್ನಷ್ಟೆ ಮಾಹಿತಿ ಲಭ್ಯವಾಗಬೇಕಿದೆ. 

ಕಳೆದ ಫೆಬ್ರವರಿ ತಿಂಗಳಿನಲ್ಲಿ ನಡೆದಿದೆ ಎನ್ನಲಾದ ಘಟನೆ ಸಂಬಂಧ ಮಾರ್ಚ್‌ನಲ್ಲಿ ಪ್ರಕರಣ ದಾಖಲಾಗಿತ್ತು.  ಆನಂತರ ಬಿಎಸ್‌ವೈಗೆ ಬಂಧನದ ಭೀತಿ ಎದುರಾಗಿತ್ತು. ಅಂತಿಮವಾಗಿ ಕೋರ್ಟ್‌ ಮಾಜಿ ಸಿಎಂ ಬಂಧನಕ್ಕೆ ತಡೆ ನೀಡಿ, ಪ್ರಕರಣದ ವಿಚಾರಣೆಗೆ ಹಾಜರಾಗುವಂತೆ ಸೂಚನೆ ನೀಡಿತ್ತು. ಬಿಎಸ್‌ವೈ ಇತ್ತೀಚೆಗೆ ವಿಚಾರಣೆಗೆ ಹಾಜರಾಗಿದ್ದರು. 

Former Chief Minister BS Yediyurappa and three others have been charged by CID officials in connection with a case of alleged sexual harassment of a minor, according to state media reports. The officials recently questioned Yediyurappa and have now filed a chargesheet in court. The details of the charges are yet to be revealed.