ಲಕ್ಷಾಂತರ ಮಂದಿಗೆ ಬದುಕು ಕೊಟ್ಟಿದ್ದ ಭದ್ರಾವತಿ ಕಬ್ಬಿಣ ಮತ್ತು ಉಕ್ಕಿನ ಕಾರ್ಖಾನೆಯನ್ನುಉಳಿಸಿಕೊಳ್ಳುವ ಪ್ರಯತ್ನಗಳೆಲ್ಲವೂ ವಿಫಲವಾಗಿದೆ. ಈ ಸಂಬಂಧ ದೆಹಲಿಯಲ್ಲಿ ಇತ್ತೀಚೆಗೆ ನಡೆದ ಸ್ಟೀಲ್ ಅಥಾರಿಟಿ ಆಫ್ ಇಂಡಿಯಾ (ಸೈಲ್) ಆಡಳಿತ ಮಂಡಳಿಯಲ್ಲಿ ಕಾರ್ಖಾನೆಯನ್ನು ಮುಚ್ಚುವ ಪ್ರಸ್ತಾವನೆಗೆ ಅಂಗೀಕಾರ ದೊರಕಿದೆ. ಇದರಿಂದಾಗಿ ಕಾರ್ಖಾನೆಯನ್ನು ಮುಚ್ಚುವುದು ಅಧಿಕೃತವಾಗುತ್ತಿದೆ.
ಈ ಸಂಬಂಧ ಶಿವಮೊಗ್ಗದಲ್ಲಿ ಮಾತನಾಡಿದ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ, ಬಹಳ ಹಿಂದೇಯೇ ಈ ಬಗ್ಗೆ ಬಹಳಷ್ಟು ಚರ್ಚೆ ನಡೆದಿದೆ. ದೇಶದಲ್ಲಿ ಹೂಡಿಕೆ ಹಿಂತೆಗತ ಬಗ್ಗೆ ಹಲವು ನಿರ್ಣಯಗಳನ್ನು ಕೈಗೊಳ್ಳಲಾಗಿದೆ. ನಷ್ಟದಲ್ಲಿರುವ ಕಾರ್ಖಾನೆಗಳಲ್ಲಿ ಹೂಡಿಕೆ ಹಿಂತೆಗೆತ ರಾಷ್ಟ್ರ ಮಟ್ಟದ ತೀರ್ಮಾನವಾಗಿದೆ. ಈ ನಿಟ್ಟಿನಲ್ಲಿ ಕಾರ್ಖಾನೆಯನ್ನು ಉಳಿಸುವ ಸಲುವಾಗಿ ಸಂಸದ ಬಿ.ವೈ ರಾಘವೇಂದ್ರರವರು ಸಾಕಷ್ಟು ಪ್ರಯತ್ನ ಪಟ್ಟಿದ್ದರು. ಆದರೆ ಸಮಯ ಈಗ ಕೈ ಮೀರಿ ಹೋಗಿದೆ ಎಂದಿದ್ದಾರೆ.
ನಮ್ಮ ವಾಟ್ಸ್ಯಾಪ್ ಗ್ರೂಪ್ ಲಿಂಕ್ ಇದು ಕ್ಲಿಕ್ ಮಾಡಿ
Facebook ನಲ್ಲಿ ನಮ್ಮ ಪೇಜ್ ನೋಡಿ : Malenadutoday.com
Twitter ನಲ್ಲಿ ನಾವಿದ್ದೇವೆ, ಫಾಲೋ ಮಾಡಿ : Malenadutoday.com
Instagram ನಲ್ಲಿ ಕ್ಲಿಕ್ ಮಾಡಿ : Malenadutoday.com
Telegram ನಲ್ಲಿ ಸುದ್ದಿ ಪಡೆಯಲು ಲಿಂಕ್ ಒತ್ತಿ : Malenadutoday.com