Former MLA KB Ashok Naik /ಮಲೆನಾಡು ಟುಡೆ ಸುದ್ದಿ / ಶಿವಮೊಗ್ಗ / ಮಾಜಿ ಶಾಸಕ ಕೆ.ಬಿ.ಅಶೋಕ್ ನಾಯ್ಕ್ ಶಿವಮೊಗ್ಗ ಜಿಲ್ಲಾ ಬಂಜಾರ ಸಂಘದ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಇದೇ ಮಾರ್ಚ್ 2 ರಿಂದ ಅನ್ವಯವಾಗುವಂತೆ ರಾಜೀನಾಮೆ ಸಲ್ಲಿಸಿದ್ದಾರೆ.
Former MLA KB Ashok Naik
ಅವರು ತಮ್ಮ ರಾಜೀನಾಮೆ ಪತ್ರದಲ್ಲಿ ನಾಲ್ಕು ವರ್ಷ ನಿಮ್ಮೆಲ್ಲರ ಹಾಗೂ ಸಮಾಜದ ಸೇವೆಯನ್ನು ಯಶಸ್ವಿಯಾಗಿ ನಿರ್ವಹಿಸಲು ಅನುವು ಮಾಡಿಕೊಟ್ಟಿದ್ದೀರಿ. ಈ ಸಂದರ್ಭಗಳಲ್ಲಿ ಹತ್ತು ಹಲವಾರು ಸಮಸ್ಯೆಗಳನ್ನು ಅರ್ಥಮಾಡಿಕೊಳ್ಳಲು ಮತ್ತು ಯಶಸ್ವಿಯಾಗಿ ನಿಭಾಯಿಸಲು ಶಕ್ತಿ ಹಾಗೂ ಸಹಕಾರ ನೀಡಿರುವುದು ನನ್ನ ಜೀವನದ ಅಮೂಲ್ಯ ಕ್ಷಣ ಎಂದು ಭಾವಿಸುವೆ.

21 ವರ್ಷದ ಯುವಕನಿಗೆ 20 ವರ್ಷ ಜೈಲು, 50 ಸಾವಿರ ದಂಡ! ಶಿವಮೊಗ್ಗ ಕೋರ್ಟ್ ಆದೇಶ
ತಮ್ಮೆಲ್ಲರ ಸಹಕಾರ ಮತ್ತು ಬೆಂಬಲದಿಂದ ಜಿಲ್ಲೆಯನ್ನು ರಾಜ್ಯಮಟ್ಟದಲ್ಲಿ ಗುರುತಿಸುವಂತೆ ಅವಕಾಶ ಮಾಡಿಕೊಟ್ಟಿದ್ದು ನನ್ನ ಸೌಭಾಗ್ಯ, ನನ್ನ ಕರ್ತವ್ಯವನ್ನು ಶ್ರದ್ಧೆ, ನಿಷ್ಠೆ ಹಾಗೂ ಪ್ರಾಮಾಣಿಕತೆಯಿಂದ ನಿರ್ವಹಿಸಿರುವ ತೃಪ್ತಿ ನನಗಿದೆ.
ಪ್ರಸಕ್ತ ಸನ್ನಿವೇಶದಲ್ಲಿ ನಾನು ನನ್ನ ಕುಟುಂಬ ಮತ್ತು ವೈಯಕ್ತಿಕ ಕಾರ್ಯಗಳಿಗೆ ಹೆಚ್ಚಿನ ಗಮನ ಹರಿಸಬೇಕಿದೆ. ಎರಡನೇ ತಲೆಮಾರಿನ ಸಮಾಜದ ಬಂಧುಗಳು ಜವಾಬ್ದಾರಿಯನ್ನು ನಿರ್ವಹಿಸಲು ಅನುವು ಮಾಡಿಕೊಡುತ್ತಾ ರಾಜೀನಾಮೆ ನೀಡುತ್ತಿದ್ದೇನೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.ಈ ಮಧ್ಯೆ ಅಶೋಕ್ ನಾಯ್ಕ್ರವರ ರಾಜೀನಾಮೆ ವಿಚಾರ ಸಾಕಷ್ಟು ಚರ್ಚೆಯಾಗುತ್ತಿದೆ.

Former MLA KB Ashok Naik Resigns as Shimoga District Banjara Sangha President ಶಿವಮೊಗ್ಗ ಜಿಲ್ಲಾ ಬಂಜಾರ ಸಂಘದ ಅಧ್ಯಕ್ಷ ಸ್ಥಾನಕ್ಕೆ ಮಾಜಿ ಶಾಸಕ ಕೆ.ಬಿ. ಅಶೋಕ್ ನಾಯ್ಕ್ ಅವರು ವೈಯಕ್ತಿಕ ಕಾರಣ ನೀಡಿ ರಾಜೀನಾಮೆ ಸಲ್ಲಿಸಿದ್ದಾರೆ. ಸಂಪೂರ್ಣ ಮಾಹಿತಿ ಇಲ್ಲಿದೆ.
ಮಲೆನಾಡು ಟುಡೆ ಡಿಜಿಟಲ್ ನ್ಯೂಸ್ ಮೀಡಿಯಾ ದ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಸುದ್ದಿಗಳಿಂದ ಸ್ತಳೀಯ ವಿಶೇಷ ವಿಡಿಯೋ ಸುದ್ದಿಗಳನ್ನು ನೀವು ನೋಡಬಹುದು…ಇಲ್ಲಿದೆ ಅವುಗಳ ಲಿಂಕ್ Facebook , whatsapp , whatsapp chanel instagram, youtube, telegram , ನಮ್ಮದು ಅಧಿಕೃತವಾದ ಮತ್ತು ಉತ್ಪ್ರೇಕ್ಷೆಗಳಲ್ಲಿದ ನೈಜ ಸುದ್ದಿಯ ಸಂಸ್ಥೆ. ನಮ್ಮ ಬಗ್ಗೆ google business, ನಲ್ಲಿ ಮಾಹಿತಿ ಪಡೆಯಬಹುದು. ಅಲ್ಲದೆ malenadu today epaper malenadutoday web ನಲ್ಲಿ ಆಯಾ ದಿನದ ಈ ಪೇಪರ್ಗಳನ್ನು ಕ್ಲಿಕ್ ಮಾಡಿ ಓದಬಹುದು.
