ಶಿವಮೊಗ್ಗದಲ್ಲಿ ಈ ಹಿಂದೆ ಎಸಿಯಾಗಿದ್ದ ಜಿ.ಹೆಚ್. ಸತ್ಯನಾರಾಯಣ ಈಗ ಸಾಗರಕ್ಕೆ ವರ್ಗಾವಣೆ! ರಾಜ್ಯ ಸರ್ಕಾರದಿಂದ ಅಧಿಕೃತ ಆದೇಶ

ಹಂಚಿಕೊಳ್ಳಿ
WhatsApp Facebook X Telegram
Former Shivamogga AC GH Satyanarayana Transferred as Sagar Assistant Commissioner
Former Shivamogga AC GH Satyanarayana Transferred as Sagar Assistant Commissioner

ಸುದ್ದಿಯ ಸ್ಥಳ: Sagara, Shivamogga, Karnataka

ಮಲೆನಾಡು ಟುಡೆ ಸುದ್ದಿ / ಶಿವಮೊಗ್ಗ / ಶಿವಮೊಗ್ಗ ಉಪವಿಭಾಗಾಧಿಕಾರಿಯಾಗಿ (ಎಸಿ) ಕಾರ್ಯನಿರ್ವಹಿಸಿದ್ದ ಜಿ.ಹೆಚ್. ಸತ್ಯನಾರಾಯಣ ಅವರನ್ನು ಇದೀಗ ಸಾಗರ ಉಪವಿಭಾಗಾಧಿಕಾರಿಯಾಗಿ ನೇಮಕ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ನವೆಂಬರ್ 13ರಂದು ರಾಜ್ಯ ಸರ್ಕಾರ ಹೊರಡಿಸಿರುವ ಕೆಎಎಸ್ ಅಧಿಕಾರಿಗಳ ವರ್ಗಾವಣೆ ಆದೇಶದಲ್ಲಿ ಸತ್ಯನಾರಾಯಣ ಅವರಿಗೆ ಸಾಗರ ಉಪವಿಭಾಗದ ಜವಾಬ್ದಾರಿ ನೀಡಲಾಗಿದೆ.

ಈ ಹಿಂದೆ ಶಿವಮೊಗ್ಗ ಉಪವಿಭಾಗಾಧಿಕಾರಿಯಾಗಿದ್ದ ಸತ್ಯನಾರಾಯಣ ಅವರು ವರ್ಗಾವಣೆಗೊಂಡ ನಂತರ ಅವರ ಸ್ಥಾನಕ್ಕೆ ಡಾ. ಮೈತ್ರಿ ಅವರನ್ನು ನೇಮಕ ಮಾಡಲಾಗಿತ್ತು. ಇದೀಗ ಮತ್ತೊಮ್ಮೆ ಶಿವಮೊಗ್ಗ ಜಿಲ್ಲೆಗೆ ಮರಳಿರುವ ಸತ್ಯನಾರಾಯಣ ಅವರಿಗೆ ಸಾಗರ ಉಪವಿಭಾಗಾಧಿಕಾರಿ ಹುದ್ದೆ ನೀಡಲಾಗಿದೆ.

ಸತ್ಯನಾರಾಯಣ ಅವರು ಪ್ರಸ್ತುತ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ಬೆಂಗಳೂರು ಬಿಸಿನೆಸ್ ಕಾರಿಡಾರ್-07 ಯೋಜನೆಯ ವಿಶೇಷ ಭೂಸ್ವಾಧೀನಾಧಿಕಾರಿಯಾಗಿ ಕಾರ್ಯನಿರ್ವಹಿಸುತ್ತಿದ್ದರು. ಈ ಹುದ್ದೆಯಿಂದ ಅವರನ್ನು ಸಾಗರ ಉಪವಿಭಾಗಾಧಿಕಾರಿಯಾಗಿ ವರ್ಗಾಯಿಸಲಾಗಿದೆ.ಸಾಗರ ಉಪವಿಭಾಗಾಧಿಕಾರಿಯಾಗಿದ್ದ ವೀರೇಶ್ ಕುಮಾರ್ ಅವರ ಸ್ಥಾನಕ್ಕೆ ಸತ್ಯನಾರಾಯಣ ಅವರನ್ನು ನೇಮಿಸಲಾಗಿದೆ ಎಂದು ಸರ್ಕಾರದ ಆದೇಶದಲ್ಲಿ ಸ್ಪಷ್ಟಪಡಿಸಲಾಗಿದೆ.

ಇದೇ ವರ್ಗಾವಣೆ ಆದೇಶದಲ್ಲಿ ತುಮಕೂರು ಉಪವಿಭಾಗಾಧಿಕಾರಿಯಾಗಿದ್ದ ಶ್ರೀಮತಿ ನಹೀದಾ ಜಮ್ ಜಮ್ ಅವರನ್ನು ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ಬೆಂಗಳೂರು ಬಿಸಿನೆಸ್ ಕಾರಿಡಾರ್-07 ಯೋಜನೆಯ ವಿಶೇಷ ಭೂಸ್ವಾಧೀನಾಧಿಕಾರಿ ಹುದ್ದೆಗೆ ವರ್ಗಾಯಿಸಲಾಗಿದೆ. ಈ ಮೂಲಕ ಸತ್ಯನಾರಾಯಣ ಅವರು ಈವರೆಗೆ ನಿರ್ವಹಿಸುತ್ತಿದ್ದ ಹುದ್ದೆಗೆ ನಹೀದಾ ಜಮ್ ಜಮ್ ಅವರನ್ನು ನಿಯೋಜಿಸಲಾಗಿದೆ.

ಕರ್ನಾಟಕ ಸರ್ಕಾರದ ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆಯು ನವೆಂಬರ್ 13ರಂದು ಹೊರಡಿಸಿರುವ ಅಧಿಸೂಚನೆಯ ಮೊದಲ ಭಾಗದಲ್ಲಿ 8 ಅಧಿಕಾರಿಗಳ ವರ್ಗಾವಣೆ ಹಾಗೂ ಸ್ಥಳ ನಿಯುಕ್ತಿಗೆ ಆದೇಶಿಸಿದೆ. ಎರಡನೇ ಭಾಗದಲ್ಲಿ ಅಕ್ಟೋಬರ್ 28ರಂದು ಹೊರಡಿಸಿದ್ದ ಅಧಿಸೂಚನೆಯಲ್ಲಿನ ವರ್ಗಾವಣೆಗಳನ್ನು ಆಡಳಿತಾತ್ಮಕ ಹಿತದೃಷ್ಟಿಯಿಂದ ಮಾರ್ಪಡಿಸಿ 12 ಅಧಿಕಾರಿಗಳಿಗೆ ಸಂಬಂಧಿಸಿದಂತೆ ಪರಿಷ್ಕೃತ ಆದೇಶ ನೀಡಲಾಗಿದೆ. ವರ್ಗಾವಣೆಗೊಂಡ ಅಧಿಕಾರಿಗಳು ಮುಂದಿನ ಸ್ಥಳ ನಿಯುಕ್ತಿಗಾಗಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆಯಲ್ಲಿ ಕಾರ್ಯವರದಿ ಮಾಡಿಕೊಳ್ಳುವಂತೆ ಸೂಚಿಸಲಾಗಿದೆ.

ಹಂಚಿಕೊಳ್ಳಿ
WhatsApp Facebook X Telegram
Ajjimane Ganesh
ಲೇಖಕರ ಬಗ್ಗೆ

Ajjimane Ganesh

Malenadu Today Contributor