ಸಿಕ್ಕ ಚಿನ್ನದ ಸರಕ್ಕಾಗಿ ಮಾರಾಮಾರಿ, ನಾಲ್ವರ ಮೇಲೆ ಹಲ್ಲೆ, ಚಾಕು ಇರಿತ

ಹಂಚಿಕೊಳ್ಳಿ
WhatsApp Facebook X Telegram
Pregnant Woman Injured in Rajiv Gandhi Layout

Rajiv Gandhi Layout / ಮಲೆನಾಡು ಟುಡೆ ಸುದ್ದಿ / ಶಿವಮೊಗ್ಗ / ನಗರದ ರಾಜೀವ್ ಗಾಂಧಿ ಬಡಾವಣೆಯಲ್ಲಿ ಚಿನ್ನದ ಸರ ಸಿಕ್ಕ ವಿಚಾರಕ್ಕೆ ಸಂಬಂಧಿಸಿದಂತೆ ಯುವಕರ ಗುಂಪೊಂದು ಗರ್ಭಿಣಿ ಸೇರಿದಂತೆ ನಾಲ್ವರ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿದೆ.

ಘಟನೆಯಲ್ಲಿ ಗಾಯಗೊಂಡವನ್ನು ಶಿವಮೊಗ್ಗ ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಲಾಗಿದೆ. ನಿನ್ನೆ ರಾತ್ರಿ ಈ ಘಟನೆ ನಡೆದಿದ್ದು, ನಾಲ್ವರು ಗಂಭೀರವಾಗಿ ಗಾಯಗೊಂಡಿದ್ದಾರೆ. ರಾಜೀವ ಗಾಂಧಿ ಬಡಾವಣೆಯಲ್ಲಿ ಬಂಗಾರದ ಚೈನ್ ಸಿಕ್ಕಿದ್ದ ವಿಚಾರವಾಗಿ ಎರಡು ಗುಂಪುಗಳ ನಡುವೆ ಈ ಮೊದಲೇ ಗಲಾಟೆಯಾಗಿತ್ತು.

ಇದೇ ದ್ವೇಷದ ಹಿನ್ನೆಲೆಯಲ್ಲಿ ನಿನ್ನೆ ರಾತ್ರಿ ಏಕಾಏಕಿ ನಾಲ್ವರು ಯುವಕರು ಮನೆ ಬಳಿ ಆಗಮಿಸಿ ಚಾಕು ಹಾಗೂ ಮಾರಕಾಸ್ತ್ರಗಳಿಂದ ಮನಬಂದಂತೆ ಹಲ್ಲೆ ಮಾಡಿದ್ದಾರೆ ಎಂದು ಸಂತ್ರಸ್ತರು ಆರೋಪಿಸಿದ್ದಾರೆ. ಅಬ್ಬು ಮತ್ತು ಯಾಸಿನ್ ಗುಂಪು ಈ ಮಾರಣಾಂತಿಕ ಹಲ್ಲೆ ನಡೆಸಿದೆ ಎಂದಿರುವ ಸಂತ್ರಸ್ತರು ಪೊಲೀಶಸರಿಗೆ ದೂರು ನೀಡಿದ್ದಾರೆ.

ಇನ್ನೂ ಘಟನೆಯಲ್ಲಿ ಗಾಯಗೊಂಡವರು 27 ವರ್ಷದ ಹಸೀನಾ, 21 ವರ್ಷದ ಗರ್ಭಿಣಿ ಉಜ್ಮಾ, 35 ವರ್ಷದ ಸಲ್ಮಾ ಹಾಗೂ 25 ವರ್ಷದ ಸೈಯದ್ ಶೇರು. ಇವರನ್ನು ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಒದಗಿಸಲಾಗಿದೆ. ಇನ್ನೂ ಸ್ಥಳಕ್ಕೆ ತೆರಳಿದ್ದ ಪೊಲೀಸರು ಪರಿಶೀಲನೆ ನಡೆಸಿದ್ದಾರೆ.

ನಿಮ್ಮ ವಾಟ್ಸಾಪ್​ಗೆ ಸುದ್ದಿ ಕಳುಹಿಸಲು ಕ್ಲಿಕ್​ ಮಾಡಿ ಗ್ರೂಪ್​ಗೆ ಜಾಯಿನ್ ಆಗಿ :  Whatsapp / https://chat.whatsapp.com/JrsZ8He4nN600n0r3tJItz

ಹಂಚಿಕೊಳ್ಳಿ
WhatsApp Facebook X Telegram
ajjimane ganesh
ಲೇಖಕರ ಬಗ್ಗೆ

ajjimane ganesh

Malenadu Today Contributor