Free Country Chicken Chicks ಶಿವಮೊಗ್ಗ: ಗ್ರಾಮೀಣ ಭಾಗದ ರೈತ ಮಹಿಳೆಯರನ್ನು ಪ್ರೋತ್ಸಾಹಿಸುವ ನಿಟ್ಟಿನಲ್ಲಿ ಶಿಕಾರಿಪುರ ಪಶುಪಾಲನಾ ಮತ್ತು ಪಶುವೈದ್ಯ ಸೇವಾ ಇಲಾಖೆಯು ಮಹತ್ವದ ಯೋಜನೆಯೊಂದನ್ನು ಜಾರಿಗೆ ತರುತ್ತಿದೆ. 2025-26ನೇ ಸಾಲಿನ ಕರ್ನಾಟಕ ಸಹಕಾರ ಕುಕ್ಕುಟ ಮಹಾಮಂಡಳಿಯ ವತಿಯಿಂದ, ಶಿಕಾರಿಪುರ ತಾಲೂಕಿನ ಗ್ರಾಮೀಣ ಪ್ರದೇಶದ ಒಟ್ಟು 99 ಜನ ರೈತ ಮಹಿಳೆಯರಿಗೆ ಐದು ವಾರದ 20 ನಾಟಿ ಕೋಳಿಮರಿಗಳನ್ನು ಉಚಿತವಾಗಿ ವಿತರಿಸಲು ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಈ ಯೋಜನೆಯು ತಾಲೂಕಿನ ಎಲ್ಲಾ ವರ್ಗದ ರೈತ ಮಹಿಳೆಯರಿಗೂ ಲಭ್ಯವಿದ್ದು, ಇದರ ಸದುಪಯೋಗ ಪಡೆದುಕೊಳ್ಳುವಂತೆ ಇಲಾಖೆ ಕೋರಿದೆ.
ಆಸಕ್ತ ರೈತ ಮಹಿಳೆಯರು ತಮ್ಮ ಹತ್ತಿರದ ಪಶುಪಾಲನಾ ಮತ್ತು ಪಶುವೈದ್ಯ ಸೇವಾ ಇಲಾಖೆಯ ಸಂಸ್ಥೆಗಳಿಗೆ ಭೇಟಿ ನೀಡಿ ನಿಗದಿತ ಅರ್ಜಿ ನಮೂನೆಯನ್ನು ಪಡೆಯಬಹುದು. ಭರ್ತಿ ಮಾಡಿದ ಅರ್ಜಿಯೊಂದಿಗೆ ಅಗತ್ಯ ದಾಖಲೆಗಳನ್ನು ಲಗತ್ತಿಸಿ ನವೆಂಬರ್ 20, 2025 ರೊಳಗಾಗಿ ಸಲ್ಲಿಸಬೇಕು ಎಂದು ಶಿಕಾರಿಪುರದ ಮುಖ್ಯ ಪಶುವೈದ್ಯಾಧಿಕಾರಿ ಡಾ. ರವಿ ಎಂ. ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

