ಮಲೆನಾಡು ಟುಡೆ ಸುದ್ದಿ, ಸೆಪ್ಟೆಂಬರ್ 16, 2025 : ಶಿವಮೊಗ್ಗ.ನಗರದ ಸಹ್ಯಾದ್ರಿ ನಾರಾಯಣ ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆಯು ಸೆಪ್ಟೆಂಬರ್ 17ರಂದು ಕುವೆಂಪು ರಸ್ತೆಯಲ್ಲಿರುವ ನಾರಾಯಣ ಸೂಪರ್ ಸ್ಪೆಷಾಲಿಟಿ ಕ್ಲಿನಿಕ್‌ನಲ್ಲಿ ಮಹಿಳೆಯರಿಗಾಗಿ ಉಚಿತ ಇಸಿಜಿ ತಪಾಸಣೆ ಶಿಬಿರವನ್ನು ಆಯೋಜಿಸಿದೆ.
ಈ ಶಿಬಿರವು ಬೆಳಿಗ್ಗೆ 8 ಗಂಟೆಯಿಂದ ಆರಂಭವಾಗಲಿದೆ.ಭಾರತದ ಪ್ರಮುಖ ಆರೋಗ್ಯ ಸೇವಾ ಸಂಸ್ಥೆಯಾದ ನಾರಾಯಣ ಹೆಲ್ತ್ ಸರ್ಕಾರದ ‘ಸ್ವಸ್ಥ ನಾರಿ, ಸಶಕ್ತ ಕುಟುಂಬ’ ಅಭಿಯಾನಕ್ಕೆ ಬೆಂಬಲವಾಗಿ ಈ ಶಿಬಿರವನ್ನು ಹಮ್ಮಿಕೊಂಡಿದೆ. ಆಸ್ಪತ್ರೆಯ ವ್ಯವಸ್ಥಾಪಕ ನಿರ್ದೇಶಕ ವರ್ಗೀಸ್ ಪಿ. ಜಾನ್ ಅವರು, ಮಹಿಳೆಯರು ಈ ಅವಕಾಶದ ಪ್ರಯೋಜನ ಪಡೆದುಕೊಳ್ಳುವಂತೆ ಮನವಿ ಮಾಡಿದ್ದಾರೆ.
ಮಲೆನಾಡು ಟುಡೆ ಡಿಜಿಟಲ್ ನ್ಯೂಸ್ ಮೀಡಿಯಾ ಶಿವಮೊಗ್ಗವನ್ನೂ ಕೇಂದ್ರಿಕರಿಸಿಕೊಂಡು ಸ್ಥಳೀಯ ವಿಷಯಗಳಿಂದ, ಸಕಲ ವಿಚಾರಗಳನ್ನು ಜನರಿಗೆ ಮುಟ್ಟಿಸುವ ಮಾಹಿತಿ ಸಂಸ್ಥೆಯಾಗಿದೆ. ನೀವು ನಮ್ಮನ್ನು Facebook, whatsapp, whatsapp chanel , instagram, youtube, telegram , google business, malenadu today epaper, malenadutoday web ನಲ್ಲಿ ಬೆಂಬಲಿಸಬಹುದು.. ಸಾದ್ಯವಾದಷ್ಟು ನಮ್ಮ ಪ್ರಯತ್ನಕ್ಕೆ ನಿಮ್ಮ ಬೆಂಬಲವನ್ನು ನೀಡಿ..ಇಲ್ಲಿ ನಿಮ್ಮ ಸಹಕಾರವೇ ಮುಖ್ಯ!
