ಶಿವಮೊಗ್ಗದಲ್ಲಿ ಉಚಿತ ಫೋಟೋಗ್ರಫಿ , ವೀಡಿಯೋಗ್ರಫಿ ತರಬೇತಿ: ಮೊದಲು ಬಂದವರಿಗೆ ಮೊದಲ ಆದ್ಯತೆ

ಹಂಚಿಕೊಳ್ಳಿ
WhatsApp Facebook X Telegram
Elephant Mahout Recruitment 2026

Free Photography and Videography Training / ಮಲೆನಾಡು ಟುಡೆ ಸುದ್ದಿ / ಶಿವಮೊಗ್ಗ / ಕೆನರಾ ಬ್ಯಾಂಕ್ ದೇಶಪಾಂಡೆ ಆರ್‌ಸೆಟಿ ಸಂಸ್ಥೆಯು ಗ್ರಾಮೀಣ ಭಾಗದ ಆಸಕ್ತ ಅಭ್ಯರ್ಥಿಗಳಿಗಾಗಿ 31 ದಿನಗಳ ಉಚಿತ ಫೋಟೋಗ್ರಫಿ ಮತ್ತು ವೀಡಿಯೋಗ್ರಫಿ ತರಬೇತಿಯನ್ನು ಆಯೋಜಿಸಿದ್ದು, ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ಈ ತರಬೇತಿ ಕಾರ್ಯಕ್ರಮವು ಸೆಪ್ಟೆಂಬರ್ ಮೊದಲ ವಾರದಲ್ಲಿ ಪ್ರಾರಂಭವಾಗಲಿದ್ದು , 18 ರಿಂದ 50 ವರ್ಷ ವಯೋಮಿತಿಯ ಗ್ರಾಮೀಣ ಭಾಗದ ಆಸಕ್ತ ಅಭ್ಯರ್ಥಿಗಳು (ಕರ್ನಾಟಕ ರಾಜ್ಯದ ಯಾವುದೇ ಜಿಲ್ಲೆಯ ಅಭ್ಯರ್ಥಿಗಳು) ಅರ್ಜಿ ಸಲ್ಲಿಸಬಹುದು ಎಂದು ಇಂದು ಮಧ್ಯಾಹ್ನ ವಾರ್ತಾ ಇಲಾಖೆಯ ಮೂಲಕ ನೀಡಲಾಗಿರುವ ಅಧಿಕೃತ ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ಅಂದಹಾಗೆ ತರಬೇತಿಯು ಸಂಪೂರ್ಣ ಉಚಿತವಾಗಿದ್ದು, ಅಭ್ಯರ್ಥಿಗಳಿಗೆ ಉಚಿತ ಊಟ ಮತ್ತು ವಸತಿ ಸೌಲಭ್ಯವನ್ನು ಒದಗಿಸಲಾಗುತ್ತದೆ. ತರಬೇತಿಯ ನಂತರ ಅಭ್ಯರ್ಥಿಗಳು ಸ್ವಂತ ಉದ್ಯೋಗ ಪ್ರಾರಂಭಿಸಲು ಸಹಕಾರಿಯಾಗಲಿದೆ.

ಆಸಕ್ತ ಅಭ್ಯರ್ಥಿಗಳು ಒಂದು ಬಿಳಿ ಹಾಳೆಯ ಮೇಲೆ ತಮ್ಮ ಹೆಸರು, ವಿಳಾಸ, ಜನ್ಮ ದಿನಾಂಕ ಮತ್ತು ಮೊಬೈಲ್ ಸಂಖ್ಯೆಯನ್ನು ಸ್ಪಷ್ಟವಾಗಿ ಬರೆದು, ಅದನ್ನು ಫೋಟೋ ತೆಗೆದು ಕೆಳಗಿನ ವಾಟ್ಸಾಪ್ ಸಂಖ್ಯೆಗೆ ಕಳುಹಿಸುವ ಮೂಲಕ ಅಥವಾ ಕರೆ ಮಾಡುವ ಮೂಲಕ ಹೆಸರು ನೋಂದಾಯಿಸಿಕೊಳ್ಳಬಹುದು.

ಮೊದಲು ಅರ್ಜಿ ಸಲ್ಲಿಸುವವರಿಗೆ ಆದ್ಯತೆ ನೀಡಲಾಗುವುದು ಎಂದು ಪ್ರಕಟಣೆಯಲ್ಲಿ ತಿಳಸಲಾಗಿದ್ದು, ಹೆಚ್ಚಿನ ಮಾಹಿತಿಗಾಗಿ ಕೆನರಾ ಬ್ಯಾಂಕ್ ದೇಶಪಾಂಡೆ ಆರ್ ಸೆಟಿ, ಉದ್ಯೋಗ ವಿದ್ಯಾನಗರ, ಹಳಿಯಾಳ – 581329 (ಉತ್ತರ ಕನ್ನಡ ಜಿಲ್ಲೆ).9483485489 / 8970145354 ಇವರನ್ನು ಸಂಪರ್ಕಿಸಬಹುದೆಂದು ಪ್ರಕಟಣೆ ತಿಳಿಸಿದೆ.

ಹಂಚಿಕೊಳ್ಳಿ
WhatsApp Facebook X Telegram
ajjimane ganesh
ಲೇಖಕರ ಬಗ್ಗೆ

ajjimane ganesh

Malenadu Today Contributor