ಪೋಟೋಗ್ರಾಪಿ ಹಾಗೂ ವಿಡಿಯೋಗ್ರಾಫಿ ಕಲಿಯಲು ಆಸಕ್ತಿ ಇದೆಯಾ : ಇಲ್ಲಿದೆ ನೋಡಿ ಸುವರ್ಣಾವಕಾಶ

ಹಂಚಿಕೊಳ್ಳಿ
WhatsApp Facebook X Telegram
Free Photography Training
Free Photography Training

Free Photography Training ಶಿವಮೊಗ್ಗ: ಬೆಂಗಳೂರು ಗ್ರಾಮಾಂತರ ಜಿಲ್ಲೆ ಹೊಸಕೋಟೆ ತಾಲ್ಲೂಕು ಸೊಣ್ಣಹಳ್ಳಿಪುರದಲ್ಲಿರುವ ಕೆನರಾಬ್ಯಾಂಕ್ ಗ್ರಾಮೀಣ ಸ್ವಉದ್ಯೋಗ ತರಬೇತಿ ಸಂಸ್ಥೆಯಲ್ಲಿ ನವಂಬರ್​. 13 ರಿಂದ 31 ದಿನಗಳ ನಿರುದ್ಯೋಗಿ ಪುರುಷರಿಗೆ ಉಚಿತವಾಗಿ ಫೋಟೋಗ್ರಫಿ ಮತ್ತು ವಿಡಿಯೋಗ್ರಫಿ ತರಬೇತಿ ಶಿಬಿರವನ್ನು ಆಯೋಜಿಸಿಲಾಗಿದೆ.ಈ ತರಬೇತಿ ನವೆಂಬರ್ 13 ರಿಂದ ಪ್ರಾರಂಭವಾಗಲಿದೆ.

Free Photography Trainingಅರ್ಜಿ ಸಲ್ಲಿಸಲು ಅರ್ಹತೆಗಳು

ಈ ತರಬೇತಿಗೆ 18 ರಿಂದ 45 ವರ್ಷ ವಯೋಮಿತಿಯ ನಿರುದ್ಯೋಗಿ ಪುರುಷರಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಕರ್ನಾಟಕ ರಾಜ್ಯದ ಯಾವುದೇ ಜಿಲ್ಲೆಯ ಪುರುಷ ಅಭ್ಯರ್ಥಿಗಳು ಈ ಶಿಬಿರದಲ್ಲಿ ಪಾಲ್ಗೊಳ್ಳಬಹುದಾಗಿದೆ. ಶಿಬಿರಾರ್ಥಿಗಳಿಗೆ ತರಬೇತಿ ಅವಧಿಯಲ್ಲಿ ಊಟ ಮತ್ತು ವಸತಿ ಸೌಕರ್ಯಗಳನ್ನು ಸಂಪೂರ್ಣವಾಗಿ ಉಚಿತವಾಗಿ ಕಲ್ಪಿಸಲಾಗುವುದು. ಗ್ರಾಮೀಣ ಭಾಗದ ಬಿಪಿಎಲ್ (BPL) ಅಭ್ಯರ್ಥಿಗಳಿಗೆ ಮೊದಲ ಆದ್ಯತೆ ನೀಡಲಾಗುತ್ತದೆ. ಅಭ್ಯರ್ಥಿಗಳು ಸ್ಥಳೀಯ ಭಾಷೆ ಬಲ್ಲವರಾಗಿರಬೇಕು ಮತ್ತು ಕನ್ನಡ ಓದಲು ಹಾಗೂ ಬರೆಯಲು ತಿಳಿದಿರಬೇಕು. ತರಬೇತಿಯ ಯಶಸ್ವಿ ನಂತರ ಕೇಂದ್ರ ಸರ್ಕಾರದ ಗ್ರಾಮೀಣ ಸಚಿವಾಲಯದಿಂದ ಪ್ರಮಾಣಪತ್ರವನ್ನು ವಿತರಿಸಲಾಗುವುದು ಎಂದು ಸಂಸ್ಥೆಯ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಆಸಕ್ತಿಯುಳ್ಳ ಅರ್ಹ ಅಭ್ಯರ್ಥಿಗಳು ಅಕ್ಟೋಬರ್ 30 ರಂದು ಬೆಳಗ್ಗೆ 10:00 ಗಂಟೆಗೆ ಕೆನರಾ ಬ್ಯಾಂಕ್ ಗ್ರಾಮೀಣ ಸ್ವಉದ್ಯೋಗ ತರಬೇತಿ ಸಂಸ್ಥೆ, ಸೊಣ್ಣಹಳ್ಳಿಪುರ, ಹಸಿಗಾಳ (ಅಂಚೆ), ಹೊಸಕೋಟೆ ತಾಲ್ಲೂಕು, ಬೆಂಗಳೂರು ಗ್ರಾಮಾಂತರ ಜಿಲ್ಲೆ ಇಲ್ಲಿ ನಡೆಯುವ ಸಂದರ್ಶನಕ್ಕೆ ಹಾಜರಾಗಬೇಕು. ಸಂದರ್ಶನಕ್ಕೆ ಹಾಜರಾಗಲು ಅಸಾಧ್ಯವಾದಲ್ಲಿ, ಅಭ್ಯರ್ಥಿಗಳು ನೇರವಾಗಿ ತರಬೇತಿಗೆ ವಿದ್ಯಾರ್ಹತೆ ಮತ್ತು ವಿಳಾಸ ದಾಖಲಾತಿಗಳೊಂದಿಗೆ ಹಾಜರಾಗಬಹುದು.

ಹೆಚ್ಚಿನ ಮಾಹಿತಿಗಾಗಿ, ಸಂಸ್ಥೆಯ ದೂರವಾಣಿ ಸಂಖ್ಯೆಗಳಾದ 8970476050, 9591514154, 9686248369, ಅಥವಾ 9505894247 ಗಳಿಗೆ ಸಂಪರ್ಕಿಸಬಹುದು.

 

ಹಂಚಿಕೊಳ್ಳಿ
WhatsApp Facebook X Telegram
Prathapa thirthahalli
ಲೇಖಕರ ಬಗ್ಗೆ

Prathapa thirthahalli

Malenadu Today Contributor