ಕುರಿ ಮತ್ತು ಮೇಕೆ ಸಾಕಾಣಿಕೆ ಮಾಡುವ ಪ್ಲಾನ್​ ಏನಾದ್ರು ಇದೆಯೇ, ಈ ಸುದ್ದಿ ಓದಿ

ಶಿವಮೊಗ್ಗ :  ಬೆಂಗಳೂರು ಗ್ರಾಮಾಂತರ ಜಿಲ್ಲೆ ಹೊಸಕೋಟೆ ತಾಲ್ಲೂಕು ಸೊಣ್ಣಹಳ್ಳಿಪುರದಲ್ಲಿರುವ ಕೆನರಾ ಬ್ಯಾಂಕ್ ಗ್ರಾಮೀಣ ಸ್ವ ಉದ್ಯೋಗ ತರಬೇತಿ ಸಂಸ್ಥೆಯಲ್ಲಿ  ಜನವರಿ  19 ರಿಂದ 13 ದಿನಗಳ ಕಾಲ ನಿರುದ್ಯೋಗಿ ಪುರುಷರು ಹಾಗೂ ಮಹಿಳೆಯರಿಗೆ ಕುರಿ ಮತ್ತು ಮೇಕೆ ಸಾಕಾಣಿಕೆ ಉಚಿತ ತರಬೇತಿ ಶಿಬಿರವನ್ನು ಏರ್ಪಡಿಸಿದೆ.

ಸೊರಬದ 16 ಶಾಲೆ, ಶಿವಮೊಗ್ಗ ಡಯಟ್!, ಇನ್ಫೋಸಿಸ್ ಮನಿ!, ಸಚಿವ ಸಂಪುಟದಲ್ಲಿ ಮಹತ್ವದ ನಿರ್ಧಾರ

ಸ್ವಯಂ ಉದ್ಯೋಗಿಗಳಾಗಲು ಬಯಸುವ 18 ರಿಂದ 50 ವರ್ಷ ವಯಸ್ಸಿನ ಕರ್ನಾಟಕ ರಾಜ್ಯದ ಯಾವುದೇ ಜಿಲ್ಲೆಯ ನಿರುದ್ಯೋಗಿ ಪುರುಷರು ಹಾಗೂ ಮಹಿಳೆಯರು ಈ ಶಿಬಿರದಲ್ಲಿ ಪಾಲ್ಗೊಳ್ಳಬಹುದಾಗಿದೆ. ಈ ಶಿಬಿರದ ಸಮಯದಲ್ಲಿ ತರಬೇತಿ, ಊಟ ಹಾಗೂ ವಸತಿ ಸೌಕರ್ಯಗಳು ಉಚಿತವಾಗಿ ಕಲ್ಪಿಸಲಾಗುವುದು. ಗ್ರಾಮೀಣ ಭಾಗದ ಬಿಪಿಎಲ್ ಅಭ್ಯರ್ಥಿಗಳಿಗೆ ಮೊದಲ ಆದ್ಯತೆಯನ್ನು ನೀಡಲಾಗುವುದು. ಅಭ್ಯರ್ಥಿಗಳು ಸ್ಥಳೀಯ ಭಾಷೆ ಬಲ್ಲವರಾಗಿದ್ದು, ಕನ್ನಡ ಓದಲು ಮತ್ತು ಬರೆಯಲು ತಿಳಿದಿರಬೇಕು. ತರಬೇತಿ ನಂತರ ಕೇಂದ್ರ ಸರ್ಕಾರದ ಗ್ರಾಮೀಣ ಸಚಿವಾಲಯದಿಂದ ಪ್ರಮಾಣ ಪತ್ರವನ್ನು ವಿತರಿಸಲಾಗುವುದು.

Free Sheep and Goat Farming Training

ಆಸಕ್ತಿಯುಳ್ಳ ಅಭ್ಯರ್ಥಿಗಳು ಜ 09 ರಂದು ಬೆಳಿಗ್ಗೆ 10.00 ಘಂಟೆಗೆ ಕೆನರಾ ಬ್ಯಾಂಕ್ ಗ್ರಾಮೀಣ ಸ್ವ ಉದ್ಯೋಗ ತರಬೇತಿ ಸಂಸ್ಥೆ, ಸೊಣ್ಣಹಳ್ಳಿಪುರ, ಹಸಿಗಾಳ(ಅಂಚೆ), ಹೊಸಕೋಟೆ ತಾಲ್ಲೂಕು, ಬೆಂಗಳೂರು ಗ್ರಾಮಾಂತರ ಜಿಲ್ಲೆ ಇಲ್ಲಿ ನಡೆಯುವ ತರಬೇತಿಗೆ ನೇರವಾಗಿ ವಿದ್ಯಾರ್ಹತೆ ಮತ್ತು ವಿಳಾಸ ದಾಖಲಾತಿಗಳೊಂದಿಗೆ ಹಾಜರಾಗುವುದು. ಸಂದರ್ಶನಕ್ಕೆ ಹಾಜರಾಗಲು ಅಸಾಧ್ಯವಾದಲ್ಲಿ ಜ. 09 ರೊಳಗೆ ಸಂಸ್ಥೆಯನ್ನು ದೂ. ಸಂ.: 8970476050/ 9591514154/ 9686248369/ 6363139123 / 9505894247 ಗಳನ್ನು ಸಂಪರ್ಕಿಸಿ ತಮ್ಮ ಹೆಸರನ್ನು ನೋಂದಾಯಿಸಿಕೊಳ್ಳಬಹುದೆಂದು ಸಂಸ್ಥೆಯ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Free Sheep and Goat Farming Training
Free Sheep and Goat Farming Training

 

 

ಶಿವಮೊಗ್ಗಕ್ಕೆ ಬಂದ ಅಲೋಕ್​ ಕುಮಾರ್​ ಮಲೆನಾಡಲ್ಲಿ ಇಷ್ಟೆಲ್ಲಾ ಆಯ್ತು