INFORMATION NEWS

ಉಚಿತ ಟೈಲರಿಂಗ್​ ತರಭೇತಿಗೆ ಅರ್ಜಿ ಆಹ್ವಾನ, ಯಾರೆಲ್ಲಾ ಅರ್ಜಿ ಸಲ್ಲಿಸಬಹುದು

Prathapa thirthahalli ಅಥಾರಿಟಿ: ಮಲೆನಾಡು ಟುಡೆ ಡೆಸ್ಕ್

ಶಿವಮೊಗ್ಗ : ಸ್ವಯಂ ಉದ್ಯೋಗದ ಮೂಲಕ ಆರ್ಥಿಕ ಸಬಲತೆ ಸಾಧಿಸಲು ಬಯಸುವ ಮಹಿಳೆಯರಿಗೆ ಕೆನರಾ ಬ್ಯಾಂಕ್ ಸುವರ್ಣಾವಕಾಶವೊಂದನ್ನು ನೀಡಿದೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ತಾಲೂಕಿನ ಸೊಣ್ಣಹಳ್ಳಿಪುರದಲ್ಲಿರುವ ಕೆನರಾ ಬ್ಯಾಂಕ್ ಗ್ರಾಮೀಣ ಸ್ವ ಉದ್ಯೋಗ ತರಬೇತಿ ಸಂಸ್ಥೆಯು ರಾಜ್ಯದ ನಿರುದ್ಯೋಗಿ ಮಹಿಳೆಯರಿಗಾಗಿ 31 ದಿನಗಳ ಉಚಿತ ಟೈಲರಿಂಗ್ ತರಬೇತಿಯನ್ನು ಆಯೋಜಿಸಿದೆ.

ಶಿವಮೊಗ್ಗ ವಿಮಾನ ನಿಲ್ದಾಣಶಿವಮೊಗ್ಗ ಏರ್​ಪೋರ್ಟ್​ ವಿಶ್ವೇಶ್ವರ್​ ಭಟ್​ Facebook post ,ಷೇರ್ ಮಾಡಿ ರಿಪ್ಲೆ ನೀಡಿದ ಸಂಸದ 

ಈ ತರಬೇತಿ ಶಿಬಿರವು ಏಪ್ರಿಲ್ 17 ರಿಂದ ಪ್ರಾರಂಭವಾಗಲಿದ್ದು, ಕರ್ನಾಟಕದ ಯಾವುದೇ ಜಿಲ್ಲೆಯ 18 ರಿಂದ 49 ವರ್ಷ ವಯೋಮಿತಿಯ ಮಹಿಳೆಯರು ಪಾಲ್ಗೊಳ್ಳಬಹುದಾಗಿದೆ. ತರಬೇತಿಯ ಅವಧಿಯಲ್ಲಿ ಅಭ್ಯರ್ಥಿಗಳಿಗೆ ಗುಣಮಟ್ಟದ ಶಿಕ್ಷಣ ಮಾತ್ರವಲ್ಲದೆ, ಉಚಿತ ಊಟ ಮತ್ತು ವಸತಿ ವ್ಯವಸ್ಥೆಯನ್ನು ಕೂಡ ಸಂಸ್ಥೆಯೇ ಕಲ್ಪಿಸಲಿದೆ. 

ಗ್ರಾಮೀಣ ಭಾಗದ ಬಿಪಿಎಲ್ (BPL) ಕಾರ್ಡ್ ಹೊಂದಿರುವ ಅಭ್ಯರ್ಥಿಗಳಿಗೆ ಈ ಶಿಬಿರದಲ್ಲಿ ಮೊದಲ ಆದ್ಯತೆ ನೀಡಲಾಗುತ್ತದೆ. ಅಭ್ಯರ್ಥಿಗಳು ಕಡ್ಡಾಯವಾಗಿ ಕನ್ನಡ ಓದಲು ಮತ್ತು ಬರೆಯಲು ತಿಳಿದಿರಬೇಕು. ತರಬೇತಿಯನ್ನು ಯಶಸ್ವಿಯಾಗಿ ಪೂರ್ಣಗೊಳಿಸಿದ ನಂತರ ಕೇಂದ್ರ ಸರ್ಕಾರದ ಗ್ರಾಮೀಣ ಸಚಿವಾಲಯದಿಂದ ಮಾನ್ಯತೆ ಪಡೆದ ಪ್ರಮಾಣಪತ್ರವನ್ನು ವಿತರಿಸಲಾಗುವುದು, ಇದು ಭವಿಷ್ಯದಲ್ಲಿ ಉದ್ಯೋಗ ಅಥವಾ ಸಾಲ ಸೌಲಭ್ಯ ಪಡೆಯಲು ಸಹಕಾರಿಯಾಗಲಿದೆ. 

ಆಸಕ್ತ ಮಹಿಳೆಯರು ಏಪ್ರಿಲ್​ 4 ರ ಬುಧವಾರ ಬೆಳಿಗ್ಗೆ 9:30ಕ್ಕೆ ತಮ್ಮ ಮೂಲ ದಾಖಲೆಗಳೊಂದಿಗೆ (ವಿದ್ಯಾರ್ಹತೆ ಮತ್ತು ವಿಳಾಸದ ಪುರಾವೆ) ಹೊಸಕೋಟೆಯ ಸೊಣ್ಣಹಳ್ಳಿಪುರದಲ್ಲಿರುವ ತರಬೇತಿ ಕೇಂದ್ರಕ್ಕೆ ನೇರ ಸಂದರ್ಶನಕ್ಕೆ ಹಾಜರಾಗಬಹುದು. ಒಂದು ವೇಳೆ ನೇರವಾಗಿ ಬರಲು ಸಾಧ್ಯವಾಗದಿದ್ದರೆ, ಪ್ರಕಟಣೆಯಲ್ಲಿ ನೀಡಿರುವ ಅಧಿಕೃತ ದೂರವಾಣಿ ಸಂಖ್ಯೆಗಳ ಮೂಲಕ ನೋಂದಾಯಿಸಿಕೊಳ್ಳಲು ಅವಕಾಶ ನೀಡಲಾಗಿದೆ. 

ಸಂಪರ್ಕಿಸಬೇಕಾದ ಸಂಖ್ಯೆಗಳು: 8970476050, 9591514154, 9686248369, 6363139123, 9505894247.

Free Tailoring Training for Women by Canara Bank RSET

Free Tailoring Training for Women by Canara Bank RSET
Free Tailoring Training for Women by Canara Bank RSET

Related News

🔔 Breaking News Alerts

ತಾಜಾ ಸುದ್ದಿಗಳನ್ನು ಮೊದಲು ಪಡೆಯಲು ನಮ್ಮ ನೋಟಿಫಿಕೇಶನ್ ಸೇವೆಯನ್ನು ಸಬ್‌ಸ್ಕ್ರೈಬ್ ಮಾಡಿ.

END OF STORY
ಮಲೆನಾಡು ಟುಡೆ ಫಾಲೋ ಮಾಡಿ

ತಾಜಾ ಸ್ಥಳೀಯ ಸುದ್ದಿಗಳಿಗಾಗಿ ನಮ್ಮ ಅಧಿಕೃತ ಚಾನೆಲ್‌ಗಳಿಗೆ ಸೇರಿ.

ಇತ್ತೀಚಿನ ವೀಡಿಯೊಗಳು
Prathapa thirthahalli

Prathapa thirthahalli - Malenadu Today : ತೀರ್ಥಹಳ್ಳಿ ತಾಲ್ಲೂಕು ಗಬಡಿ ಮೂಲದ ಪತ್ರಕರ್ತ ಪ್ರತಾಪ್ ತೀರ್ಥಹಳ್ಳಿ ಕಳೆದ ಮೂರು ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಸದ್ಯ ಮಲೆನಾಡು ಟುಡೆಯಲ್ಲಿ content producer ಆಗಿ ಕಾರ್ಯ ನಿರ್ವಹಿಸುತ್ತಿದ್ದಾರೆ.