ಫೆ.27 ಕಾರ್ಯಕ್ರಮಕ್ಕೆ ಯಾವ್ಯಾವ ಕಡೆಯಿಂದ ಹೋಗಬೇಕು? ಜಿಲ್ಲಾಡಳಿತ ತೋರಿಸಿರುವ ಮಾರ್ಗ ಯಾವುದು? ತೀರ್ಥಹಳ್ಳಿ, ತರಿಕೆರೆ, ಶಿಕಾರಿಪುರದಿಂದ ಬರೋರು ಹೇಗೆ ಬರಬೇಕು? ವಿವರ ಇಲ್ಲಿದೆ ಓದಿ

From which side should we go for the February 27 event? What is the route shown by the district administration? What is the route for those coming from Thirthahalli, Tarikere, Shikaripura? Read the details here

ಫೆ.27 ಕಾರ್ಯಕ್ರಮಕ್ಕೆ ಯಾವ್ಯಾವ ಕಡೆಯಿಂದ ಹೋಗಬೇಕು? ಜಿಲ್ಲಾಡಳಿತ ತೋರಿಸಿರುವ ಮಾರ್ಗ ಯಾವುದು? ತೀರ್ಥಹಳ್ಳಿ, ತರಿಕೆರೆ, ಶಿಕಾರಿಪುರದಿಂದ ಬರೋರು ಹೇಗೆ ಬರಬೇಕು? ವಿವರ ಇಲ್ಲಿದೆ ಓದಿ
ಫೆ.27 ಕಾರ್ಯಕ್ರಮಕ್ಕೆ ಯಾವ್ಯಾವ ಕಡೆಯಿಂದ ಹೋಗಬೇಕು? ಜಿಲ್ಲಾಡಳಿತ ತೋರಿಸಿರುವ ಮಾರ್ಗ ಯಾವುದು? ತೀರ್ಥಹಳ್ಳಿ, ತರಿಕೆರೆ, ಶಿಕಾರಿಪುರದಿಂದ ಬರೋರು ಹೇಗೆ ಬರಬೇಕು? ವಿವರ ಇಲ್ಲಿದೆ ಓದಿ

 MALENADUTODAY.COM | SHIVAMOGGA  | #KANNADANEWSWEB

ಫೆಬ್ರವರಿ 27 ರಂದು ಸೋಗಾನೆಯ ವಿಮಾನ ನಿಲ್ದಾಣ (shivamogga Airoport) ಉದ್ಘಾಟನಾ ಕಾರ್ಯಕ್ರಮಕ್ಕೆ  ಪ್ರಧಾನ ಮಂತ್ರಿ ನರೇಂದ್ರ ಮೋದಿ, ರಾಜ್ಯಪಾಲರು, ಮುಖ್ಯಮಂತ್ರಿಗಳು, ಸಂಸದರು, ಶಾಸಕರು ಹಾಗೂ ಇತರೆ ಗಣ್ಯ ವ್ಯಕ್ತಿಗಳು ಆಗಮಿಸುತ್ತಿರುವ ಹಿನ್ನೆಲೆಯಲ್ಲಿ ಶಿವಮೊಗ್ಗ ಜಿಲ್ಲಾಡಳಿತ ಈ ಭಾಗದ ವಾಹನ ಸಂಚಾರದ ಮಾರ್ಗ ಬದಲಾವಣೆಗೆ ಮುಂದಾಗಿದೆ.  ಸುತ್ತಮುತ್ತಲ ಜಿಲ್ಲೆಗಳು ಸೇರಿದಂತೆ ಸಾವಿರಾರು ಸಂಖ್ಯೆಯಲ್ಲಿ ಸಾರ್ವಜನಿಕರು , ವಾಹನಗಳು ಏರ್​ಫೋರ್ಟ್​ನತ್ತ ಬರುವ ಹಿನ್ನೆಲೆಯಲ್ಲಿ ಸುಗಮ ಸಂಚಾರದ ದೃಷ್ಟಿಯಿಂದ  ಶೂನ್ಯ ಸಂಚಾರ ರಸ್ತೆ ಮಾರ್ಗ (zero traffic route) ಮತ್ತು ವಾಹನ ಸಂಚಾರಕ್ಕೆ ಬದಲಿ ಮಾರ್ಗಗಳ ಅಧಿಸೂಚನೆಯನ್ನು ಜಿಲ್ಲಾಧಿಕಾರಿ ಡಾ.ಆರ್.ಸೆಲ್ವಮಣಿ ಹೊರಡಿಸಿದ್ದಾರೆ.

READ | *ಮದುವೆಯಾಗದ ಬ್ರಹ್ಮಚಾರಿಗಳಿಂದ ಮಾದಪ್ಪನ ಬೆಟ್ಟಕ್ಕೆ ಪಾದಯಾತ್ರೆ! ಡಾಲಿ ಧನಂಜಯ್​ರಿಂದಲೇ ಆರಂಭ! ಏನಿದು ವಿಶೇಷ?*

ಶೂನ್ಯ ಸಂಚಾರ ರಸ್ತೆ ಮಾರ್ಗ: 

ದಿನಾಂಕ: 26-06-2023 ಮತ್ತು 27-02-2023 ರಂದು ಬೆಳಿಗ್ಗೆ 6 ರಿಂದ ಸಂಜೆ 6 ಗಂಟೆವರೆಗೆ ಎಂ.ಆರ್.ಎಸ್ ಸರ್ಕಲ್‍ನಿಂದ ಎನ್.ಆರ್.ಪುರ ರಸ್ತೆ ಲಕ್ಕಿನಕೊಪ್ಪ ಸರ್ಕಲ್‍ವರೆಗೆ, ಮತ್ತೂರು-ಮಂಡೇನಕೊಪ್ಪ-ಸೋಗಾನೆ ವಿಮಾನ ನಿಲ್ದಾಣದವರೆಗೆ ಶೂನ್ಯ ಸಂಚಾರ ರಸ್ತೆ ಎಂದು ಅಧಿಸೂಚಿಸಲಾಗಿದೆ.

ಸಾರ್ವಜನಿಕ ವಾಹನಗಳ ಮಾರ್ಗ ಬದಲಾವಣೆ (ದಿ: 27-02-2023 ರಂದು ಮಾತ್ರ): 

  • ಎನ್.ಆರ್.ಪುರದಿಂದ-ಭದ್ರಾವತಿ ಕಡೆಗೆ ಹೋಗುವ ವಾಹನಗಳು ಉಂಬ್ಳೆಬೈಲ್-ಹುಣಸೆಕಟ್ಟೆ-ಜಂಕ್ಷನ್ ಮೂಲಕ ಭದ್ರಾವತಿಗೆ ಹೋಗುವುದು. 
  • ಶಿಕಾರಿಪುರ-ಹೊನ್ನಾಳಿ-ದಾವಣಗೆರೆ ಕಡೆಯಿಂದ ಎನ್.ಆರ್.ಪುರಕ್ಕೆ ಹೋಗುವ ವಾಹನಗಳು ಶಿವಮೊಗ್ಗ ನಗರಕ್ಕೆ ಬಂದು ತೀರ್ಥಹಳ್ಳಿ ರಸ್ತೆ(ಎನ್.ಟಿ.ರಸ್ತೆ) ಮೂಲಕ ಎನ್.ಆರ್.ಪುರಕ್ಕೆ ಹೋಗುವುದು.
  • ತೀರ್ಥಹಳ್ಳಿ ರಸ್ತೆ ಕಡೆಯಿಂದ ಸಾಗರ ರಸ್ತೆ ಕಡೆಗೆ ಹೋಗುವ ಸಾರ್ವಜನಿಕ ವಾಹನಗಳು ನ್ಯೂ ಮಂಡ್ಲಿ ಸರ್ಕಲ್-ಗೋಪಾಳ ಸರ್ಕಲ್-ಆಲ್ಕೊಳ ಸರ್ಕಲ್ ಮಾರ್ಗವಾಗಿ ಸಾಗರ ರಸ್ತೆಗೆ ಬಂದು ಸೇರುವುದು.
  •  ಸಾಗರ ರಸ್ತೆ ಕಡೆಯಿಂದ ತೀರ್ಥಹಳ್ಳಿ ರಸ್ತೆ ಕಡೆಗೆ ಹೋಗುವ ಸಾರ್ವಜನಿಕ ವಾಹನಗಳು ಆಲ್ಕೋಳ ಸರ್ಕಲ್-ಗೋಪಾಳ ಸರ್ಕಲ್-ನ್ಯೂ ಮಂಡ್ಲಿ ಸರ್ಕಲ್ ಮಾರ್ಗವಾಗಿ ತೀರ್ಥಹಳ್ಳಿ ರಸ್ತೆಗೆ ಸೇರುವುದು.

ಕಾರ್ಯಕ್ರಮಕ್ಕೆ ಆಗಮಿಸುವ ವಾಹನಗಳ ಮಾರ್ಗ (ದಿ: 27-02-2023 ರಂದು ಮಾತ್ರ): 

ಕಾರ್ಯಕ್ರಮಕ್ಕೆ ಆಗಮಿಸುವ ವಿವಿಐಪಿ ಪಾಸ್ ಹೊಂದಿರುವ ಗಣ್ಯರು ಶಿವಮೊಗ್ಗ ನಗರದಿಂದ ಬೈಪಾಸ್-ಊರಗಡೂರು ಸರ್ಕಲ್-ಸೂಳೆಬೈಲು-ಮತ್ತೂರು ರಸ್ತೆ ಎಡಭಾಗಕ್ಕೆ ತಿರುವು ಪಡೆದುಕೊಂಡು-ಮಂಡೇನಕೊಪ್ಪ ಮುಖಾಂತರ ಸೋಗಾನೆ ವಿಮಾನ ನಿಲ್ದಾಣಕ್ಕೆ ತಲುಪುವುದು.

  • ತೀರ್ಥಹಳ್ಳಿ ಕೊಪ್ಪ, ಶೃಂಗೇರಿ, ಎನ್.ಆರ್.ಪುರ ಭಾಗದಿಂದ ಕಾರ್ಯಕ್ರಮಕ್ಕೆ ಆಗಮಿಸುವ ಸಾರ್ವಜನಿಕ ವಾಹನಗಳು ತೀರ್ಥಹಳ್ಳಿ ರಸ್ತೆ-ಮುಡುಬ ಬಲಕ್ಕೆ ತಿರುಗಿ ಶಂಕರಪುರ-ಉಂಬ್ಳೇಬೈಲು ಮುಖಾಂತರ ಲಕ್ಕಿನಕೊಪ್ಪ ಸರ್ಕಲ್‍ಗೆ ಬಂದು ಸೇರುವುದರಿಂದ ನಂತರ ಲಕ್ಕಿನಕೊಪ್ಪ ಮತ್ತು ಸೋಗಾನೆ ಏರ್‍ಪೋರ್ಟ್ ನಡುವಿನ ಗುರುತಿಸಿದ ಪಾರ್ಕಿಂಗ್ ಸ್ಥಳದಲ್ಲಿ ಪಾರ್ಕಿಂಗ್ ಮಾಡುವುದು.
  • ಸಾಗರ, ಶಿಕಾರಿಪುರ, ಸೊರಬ, ಹೊಸನಗರದಿಂದ ಕಾರ್ಯಕ್ರಮಕ್ಕೆ ಆಗಮಿಸುವ ಸಾರ್ವಜನಿಕ ವಾಹನಗಳು ಶಿವಮೊಗ್ಗ ನಗರದಿಂದ ಅಶೋಕ ಸರ್ಕಲ್-ಬಿ.ಹೆಚ್.ರಸ್ತೆ-ಎಎ ಸರ್ಕಲ್-ಶಂಕರಮಠ ಸರ್ಕಲ್-ಹೊಳೆಹೊನ್ನೂರು ಸರ್ಕಲ್-ಎಂ.ಆರ್.ಎಸ್ ಸರ್ಕಲ್‍ಗೆ ಬಂದು ಬಲಕ್ಕೆ ತಿರುಗಿ ಸಂತೇಕಡೂರು ಸೋಗಾನೆ ಏರ್‍ಫೋಟ್ ್ ನಡುವೆ ಗುರುತಸಿದ ಪಾರ್ಕಿಂಗ್ ಸ್ಥಳದಲ್ಲಿ ಪಾರ್ಕಿಂಗ್ ಮಾಡುವುದು.
  • ಶಿಕಾರಿಪುರ, ಹೊನ್ನಾಳಿ, ದಾವಣಗೆರೆ ಕಡೆಯಿಂದ ಕಾರ್ಯಕ್ರಮಕ್ಕೆ ಆಗಮಿಸುವ ಸಾರ್ವಜನಿಕ ವಾಹನಗಳು ಎಂ.ಆರ್.ಎಸ್ ಸರ್ಕಲ್‍ಗೆ ಬಂದು ಬಲಕ್ಕೆ ತಿರುಗಿ ಸಂತೇಕಡೂರು ಸೋಗಾನೆ ಏರ್‍ಪೋರ್ಟ್ ನಡುವೆ ಗುರುತಿಸಿದ ಪಾರ್ಕಿಂಗ್ ಸ್ಥಳದಲ್ಲಿ ಪಾರ್ಕಿಂಗ್ ಮಾಡುವುದು.
  • ಶಿವಮೊಗ್ಗ ನಗರದಿಂದ ಕಾರ್ಯಕ್ರಮಕ್ಕೆ ಆಗಮಿಸುವ ಸಾರ್ವಜನಿಕ ವಾಹನಗಳು ಎಂಆರ್‍ಎಸ್ ಸರ್ಕಲ್ ಗೆ ಬಂದು ಬಲಕ್ಕೆ ತಿರುಗಿ ಸಂತೇಕಡೂರು ಸೋಗಾನೆ ಏಪ್‍ಪೋರ್ಟ್ ನಡುವೆ ಗುರುತಿಸಿದ ಪಾರ್ಕಿಂಗ್ ಸ್ಥಳದಲ್ಲಿ ಪಾರ್ಕಿಂಗ್ ಮಾಡುವುದು
  • ತರೀಕೆರೆ, ಭದ್ರಾವತಿ, ಕಡೂರು, ಚಿಕ್ಕಮಗಳೂರು ಭಾಗಗಳಿಂದ ಕಾರ್ಯಕ್ರಮಕ್ಕೆ ಆಗಮಿಸುವ ಸಾರ್ವಜನಿಕ ವಾಹನಗಳು ಭದ್ರಾವತಿ ನಗರದ ಕೃಷ್ಣಪ್ಪ ನಗರದ ಕೃಷ್ಣಪ್ಪ ಸರ್ಕಲ್‍ನಿಂದ ಎಡಕ್ಕೆ ತಿರುಗಿ-ಹಿರಿಯೂರು ಸರ್ಕಲ್-ತಾರೀಕಟ್ಟೆ ಸರ್ಕಲ್-ಹೆಚ್.ಕೆ.ಜಂಕ್ಷನ್-ಲಕ್ಕಿನಕೊಪ್ಪ ಸರ್ಕಲ್‍ಗೆ ಬಂದು ಸೇರುವುದು. ನಂತರ ಲಕ್ಕಿನಕೊಪ್ಪ ಮತ್ತು ಸೋಗಾನೆ ಏರ್‍ಪೋರ್ಟ್ ನಡುವಿನ ಗುರುತಿಸಿದ ಪಾರ್ಕಿಂಗ್ ಸ್ಥಳದಲ್ಲಿ ಪಾರ್ಕಿಂಗ್ ಮಾಡುವುದು ಎಂದು ತಿಳಿಸಿದ್ದಾರೆ.

HASHTAGS : #Shivamogga #ShivamoggaNews #Shimoga #MalnadNews #LocalNews #KannadaNewsWebsite #LatestNewsKannada #ಮಲೆನಾಡು_ಸುದ್ಧಿ #ಶಿವಮೊಗ್ಗ_ನ್ಯೂಸ್ #malenadutodaynews, #todaynews #firstnewsshivamogga