ಹೊಸನಗರ ಬಳಿ ಗಜಾನನ ಬಸ್-ಕಾರು ಮುಖಾಮುಖಿ ಡಿಕ್ಕಿ ; ಆವಿನಹಳ್ಳಿಯ ಇಬ್ಬರಿಗೆ ಗಂಭೀರ ಗಾಯ

ಹಂಚಿಕೊಳ್ಳಿ
WhatsApp Facebook X Telegram
Gajanana Bus and Car Collide Near Suduru in Hosanagara, Two Seriously Injured
Gajanana Bus and Car Collide Near Suduru in Hosanagara, Two Seriously Injured

ಮಲೆನಾಡು ಟುಡೆ ಸುದ್ದಿ / ಹೊಸನಗರ /ತಾಲೂಕಿನ ಸೂಡೂರು ಗ್ರಾಮದ ಬಳಿ ಗಜಾನನ ಸಂಸ್ಥೆಯ ಬಸ್ ಹಾಗೂ ಮಾರುತಿ ಆಲ್ಟೊ ಕಾರಿನ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಕಾರಿನಲ್ಲಿದ್ದ ಆವಿನಹಳ್ಳಿ ಮೂಲದ ಇಬ್ಬರು ತೀವ್ರವಾಗಿ ಗಾಯಗೊಂಡಿದ್ದಾರೆ. ಶಿವಮೊಗ್ಗದಿಂದ ರಿಪ್ಪನ್‌ಪೇಟೆ ಕಡೆಗೆ ರಾಜ್ಯ ಹೆದ್ದಾರಿಯಲ್ಲಿ ಸಂಚರಿಸುತ್ತಿದ್ದ ಗಜಾನನ ಸಂಸ್ಥೆಯ ಬಸ್ ಹಾಗೂ ಆವಿನಹಳ್ಳಿಯಿಂದ ಶಿವಮೊಗ್ಗ ಕಡೆಗೆ ತೆರಳುತ್ತಿದ್ದ ಕಾರಿನ ನಡುವೆ ಸೂಡೂರು ಗ್ರಾಮದ ಸಮೀಪ ಮುಖಾಮುಖಿ ಡಿಕ್ಕಿ ಸಂಭವಿಸಿದೆ.

ಡಿಕ್ಕಿಯ ರಭಸಕ್ಕೆ ಮಾರುತಿ ಆಲ್ಟೊ ಕಾರು ತೀವ್ರವಾಗಿ ಜಖಂಗೊಂಡಿದ್ದು, ಅದರಲ್ಲಿದ್ದ ಇಬ್ಬರು ಸವಾರರು ಗಂಭೀರವಾಗಿ ಗಾಯಗೊಂಡಿದ್ದಾರೆ. ಗಾಯಾಳುಗಳಿಗೆ ತೀವ್ರ ರಕ್ತಸ್ರಾವವಾಗಿದ್ದು, ಅಪಘಾತ ನಡೆದ ತಕ್ಷಣ ಸ್ಥಳದಲ್ಲಿದ್ದ ಸಾರ್ವಜನಿಕರು ನೆರವಿಗೆ ಧಾವಿಸಿದ್ದಾರೆ. ಸ್ಥಳೀಯರ ಸಹಾಯದಿಂದ ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಒದಗಿಸಲಾಗಿದೆ.

ರಿಪ್ಪನ್‌ಪೇಟೆ ಪೊಲೀಸ್ ಠಾಣೆಯ ಸಿಬ್ಬಂದಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ, ಪ್ರಕರಣ ದಾಖಲಿಸಿಕೊಂಡಿದ್ದಾರೆ. ಅಪಘಾತಕ್ಕೆ ಅತಿಯಾದ ವೇಗ ಕಾರಣವಾಗಿದೆಯೇ ಅಥವಾ ಚಾಲಕರ ಅಜಾಗರೂಕತೆಯಿಂದ ಘಟನೆ ಸಂಭವಿಸಿದೆಯೇ ಎಂಬುದು ಸ್ಪಷ್ಟವಾಗಿಲ್ಲ.

ವಿಷಯಗಳು:
ಹಂಚಿಕೊಳ್ಳಿ
WhatsApp Facebook X Telegram
Ajjimane Ganesh
ಲೇಖಕರ ಬಗ್ಗೆ

Ajjimane Ganesh

Malenadu Today Contributor