SHIVAMOGGA NEWS TODAY

ಹೊಸಮನೆಯಲ್ಲಿ ಮನೆಗೆ ನುಗ್ಗಿ 9 ಜನರನ್ನು ವಶಕ್ಕೆ ಪಡೆದ ಪೊಲೀಸರು; ಅಂತದ್ದೇನಾಯ್ತು?

Prathapa thirthahalli ಅಥಾರಿಟಿ: ಮಲೆನಾಡು ಟುಡೆ ಡೆಸ್ಕ್

ಶಿವಮೊಗ್ಗ: ನಗರದ ಹೊಸಮನೆ  ಏರಿಯಾದ ಮನೆಯೊಂದರಲ್ಲಿ ಅಕ್ರಮವಾಗಿ ಅಂದರ್-ಬಾಹರ್ ಇಸ್ಪೀಟ್ ಜೂಜಾಟ ಆಡುತ್ತಿದ್ದ 9 ಜನ ಆರೋಪಿಗಳನ್ನು ದೊಡ್ಡಪೇಟೆ ಪೊಲೀಸರು ದಾಳಿ ನಡೆಸಿ ಬಂಧಿಸಿದ್ದಾರೆ.

ಸಕಲೇಶ​​ಪುರ ಯುವಕ ಶಿವಮೊಗ್ಗದಲ್ಲಿ ಕೆರೆಗೆ ಹಾರಿ ಆತ್ಮಹತ್ಯೆ

ಘಟನೆಯ ವಿವರ

ಹೊಸಮನೆ ಏರಿಯಾದ ಮನೆಯೊಂದರಲ್ಲಿ ಕೆಲವರು ಅಕ್ರಮವಾಗಿ ಅಂದರ್-ಬಾಹರ್ ಇಸ್ಪೀಟ್ ಜೂಜಾಟದಲ್ಲಿ ತೊಡಗಿದ್ದಾರೆ ಎಂಬ ಖಚಿತ ಮಾಹಿತಿ ದೊಡ್ಡಪೇಟೆ ಪೊಲೀಸರಿಗೆ ಲಭ್ಯವಾಗಿದೆ. ಮಾಹಿತಿ ಸಿಗುತ್ತಿದ್ದಂತೆ ಕಾರ್ಯಪ್ರವೃತ್ತರಾದ ಪೊಲೀಸರು, ಕೂಡಲೇ ಆ ಸ್ಥಳಕ್ಕೆ ಧಾವಿಸಿ ಮನೆಯೊಳಗೆ ನುಗ್ಗಿ ಅನಿರೀಕ್ಷಿತ ದಾಳಿ ನಡೆಸಿದ್ದಾರೆ. ಈ ಸಂದರ್ಭದಲ್ಲಿ ಜೂಜಾಟ ಆಡುತ್ತಿರುವುದು ಪತ್ತೆಯಾಗಿದ್ದು, ಸ್ಥಳದಲ್ಲಿದ್ದ 9 ಜನ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.  ದಾಳಿಯ ವೇಳೆ ಪೊಲೀಸರು ಆರೋಪಿಗಳಿಂದ ಇಸ್ಪೀಟ್ ಜೂಜಾಟಕ್ಕೆ ಬಳಸಿದ್ದ 33,470 ರೂಪಾಯಿ ನಗದು ಹಣ, 8 ಮೊಬೈಲ್ ಫೋನ್‌ಗಳು ಹಾಗೂ ಇಸ್ಪೀಟ್  ಕಾರ್ಡ್​ಗಳನ್ನು ವಶಪಡಿಸಿಕೊಂಡಿದ್ದಾರೆ. ಈ ಸಂಬಂಧ ದೊಡ್ಡಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Gambling Raid Doddapete Police Arrest 9 persons

Related News

🔔 Breaking News Alerts

ತಾಜಾ ಸುದ್ದಿಗಳನ್ನು ಮೊದಲು ಪಡೆಯಲು ನಮ್ಮ ನೋಟಿಫಿಕೇಶನ್ ಸೇವೆಯನ್ನು ಸಬ್‌ಸ್ಕ್ರೈಬ್ ಮಾಡಿ.

END OF STORY
ಮಲೆನಾಡು ಟುಡೆ ಫಾಲೋ ಮಾಡಿ

ತಾಜಾ ಸ್ಥಳೀಯ ಸುದ್ದಿಗಳಿಗಾಗಿ ನಮ್ಮ ಅಧಿಕೃತ ಚಾನೆಲ್‌ಗಳಿಗೆ ಸೇರಿ.

ಇತ್ತೀಚಿನ ವೀಡಿಯೊಗಳು
Prathapa thirthahalli

Prathapa thirthahalli - Malenadu Today : ತೀರ್ಥಹಳ್ಳಿ ತಾಲ್ಲೂಕು ಗಬಡಿ ಮೂಲದ ಪತ್ರಕರ್ತ ಪ್ರತಾಪ್ ತೀರ್ಥಹಳ್ಳಿ ಕಳೆದ ಮೂರು ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಸದ್ಯ ಮಲೆನಾಡು ಟುಡೆಯಲ್ಲಿ content producer ಆಗಿ ಕಾರ್ಯ ನಿರ್ವಹಿಸುತ್ತಿದ್ದಾರೆ.