ಗಾಂಧೀಜಿ ಪ್ರತಿಮೆ ಧ್ವಂಸ! ಆರೋಪಿಗಳ ಪತ್ತೆಗೆ ಮೂರು ಟೀಂ! ಸಿಎಂ ಸಿದ್ದರಾಮಯ್ಯ ಹೇಳಿದ್ದೇನು?

Gandhiji's statue vandalised Three teams to trace the accused! What did CM Siddaramaiah say? ಗಾಂಧೀಜಿ ಪ್ರತಿಮೆ ಧ್ವಂಸ! ಆರೋಪಿಗಳ ಪತ್ತೆಗೆ ಮೂರು ಟೀಂ! ಸಿಎಂ ಸಿದ್ದರಾಮಯ್ಯ ಹೇಳಿದ್ದೇನು?

ಗಾಂಧೀಜಿ ಪ್ರತಿಮೆ ಧ್ವಂಸ! ಆರೋಪಿಗಳ ಪತ್ತೆಗೆ ಮೂರು ಟೀಂ! ಸಿಎಂ ಸಿದ್ದರಾಮಯ್ಯ ಹೇಳಿದ್ದೇನು?

KARNATAKA NEWS/ ONLINE / Malenadu today/ Aug 21, 2023 SHIVAMOGGA NEWS

ಹೊಳೆ ಹೊನ್ನೂರು ಸರ್ಕಲ್​ನಲ್ಲಿ,  ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಪ್ರತಿಮೆಯನ್ನು ಕಿಡಿಗೇಡಿ ಗಳು ಧ್ವಂಸಗೊಳಿಸಿರುವ ಘಟನೆ ಸಂಬಂಧ ಪೊಲೀಸ್ ಇಲಾಖೆ ಮೂರು ತಂಡವನ್ನು ರಚಿಸಿದ್ದು ಆರೋಪಿಗಳ ಪತ್ತೆಗಾಗಿ ಬಲೆ ಬೀಸಿದೆ. 

ಭದ್ರಾವತಿ ತಾಲೂಕಿನ ಹೊಳೆಹೊನ್ನೂರು ಪಟ್ಟಣದ ಗಾಂಧಿ ಸರ್ಕಲ್‌ ನಲ್ಲಿ ನಿನ್ನೆ ರಾತ್ರಿ ದುಷ್ಕರ್ಮಿಗಳು ಗಾಂಧೀಜಿಯವರ ಪ್ರತಿಮೆಯನ್ನು ಧ್ವಂಸಗೊಳಿಸಿದ್ದರು. ಈ ದುಷ್ಕೃತ್ಯ ಸಿಸಿ ಕ್ಯಾಮರಾದಲ್ಲಿಯು ಸೆರೆಯಾಗಿತ್ತು.ಪೊಲೀಸರು ಸಿಸಿಟಿವಿ ಫೂಟೇಜ್ ವಶಕ್ಕೆ ಪಡೆದಿದ್ದು, ತನಿಖೆ ನಡೆಸುತ್ತಿದ್ದಾರೆ. ಬೈಕ್‌ನಲ್ಲಿ ಶಿವಮೊಗ್ಗ ಕಡೆಯಿಂದ ಬಂದ ಕೃತ್ಯ ಹಿಂಬದಿ ಸವಾರ ಬೈಕ್‌ನಿಂದ ಇಳಿದು ಪ್ರತಿಮೆ ದೂಡಿ ಹಾನಿ ಮಾಡಿದ್ದ. ಬಳಿಕ ಅದೇ ಬೈಕ್‌ನಲ್ಲಿ ಇಬ್ಬರೂ ಪರಾರಿಯಾಗಿದ್ದಾರೆ. ಇನ್ನೂ ಈ ವಿಚಾರ ತಿಳಿಯುತ್ತಿದ್ದಂತೆ ಇವತ್ತು ಬೆಳಗ್ಗೆ ಜನರು ಗುಂಪುಗೂಡಿ ಪ್ರತಿಭಟಿಸಿ ರಸ್ತೆತಡೆ ನಡೆಸಿದ್ರು. 

ಹೊಳೆಹೊನ್ನೂರು ಗಾಂಧಿ ಸರ್ಕಲ್​ನಲ್ಲಿರುವ ಮಹಾತ್ಮ ಗಾಂಧೀಜಿಯವರ ಪ್ರತಿಮೆ ಧ್ವಂಸ

ಕಿಡಿಗೇಡಿಗಳ ಪತ್ತೆಗಾಗಿ ಸಮೀಪದ ಸಿಸಿಟಿವಿಗಳನ್ನು ಪೊಲೀಸರು ಪರಿಶೀಲನೆ ನಡೆಸಿದ್ದಾರೆ. ಅಲ್ಲದೆ ಪ್ರಕರಣವನ್ನ ಗಂಭೀರವಾಗಿ ಪರಿಗಣಿಸಿದ್ದು ಸ್ಥಳಕ್ಕೆ ಎಸ್​ಪಿ ಮಿಥುನ್ ಕುಮಾರ್ ಕೂಡ ಭೇಟಿಕೊಟ್ಟಿದ್ದರು. ಇನ್ನೂ ಘಟನೆಯನ್ನು ಖಂಡಿಸಿ ಸ್ಥಳಕ್ಕೆ ಭೇಟಿಕೊಟ್ಟಿದ್ದ ಸಂಸದ ಬಿ.ವೈ. ರಾಘವೇಂದ್ರ, ಶಾಸಕಿ ಶಾರದಾ ಪೂರ ನಾಯ್ಕ  ದುಷ್ಕರ್ಮಿಗಳ ಬಂಧನಕ್ಕೆ ಒತ್ತಾಯಿಸಿದ್ರು. ಈ ಸಂಬಂಧ ಟ್ವೀಟ್ ಮಾಡಿರುವ ಸಿಎಂ ಸಿದ್ದರಾಮಯ್ಯರವರು ಸಹ ಘಟನೆಯನ್ನು ಖಂಡಿಸಿದ್ದಾರೆ.

ಶಿವಮೊಗ್ಗ ಜಿಲ್ಲೆಯ ಹೊಳೆಹೊನ್ನೂರಿನಲ್ಲಿ ಮಹಾತ್ಮ ಗಾಂಧಿಯವರ ಪ್ರತಿಮೆ ದ್ವಂಸಗೊಳಿಸಿರುವ ದೇಶವಿರೋಧಿ ಕೃತ್ಯವನ್ನು ತೀವ್ರವಾಗಿ ಖಂಡಿಸುತ್ತೇನೆ. ಈ ನೆಲದ ಸ್ವಾತಂತ್ರ್ಯ ಚಳವಳಿಯ ಹಿನ್ನೆಲೆ, ಸಂವಿಧಾನ ಮತ್ತು ಕಾನೂನಿನ ಬಗೆಗೆ ಗೌರವ ಇಲ್ಲದವರು ಮಾತ್ರ ಇಂತಹ ಹೀನ ಕೃತ್ಯ ಎಸಗಲು ಸಾಧ್ಯ. ಈ ಕುಕೃತ್ಯದ ಹಿಂದೆ ಯಾರೇ ಇರಲಿ ಅವರನ್ನು ಹಿಡಿದು ಕಾನೂನಿನ ಪ್ರಕಾರ ಕಠಿಣ ಶಿಕ್ಷೆಗೆ ಒಳಪಡಿಸುತ್ತೇವೆ. ಯಾರೊಬ್ಬರೂ ಈ ಬಗ್ಗೆ ಉದ್ವೇಗಕ್ಕೆ ಒಳಗಾಗಿ ಕಾನೂನು ಕೈಗೆತ್ತಿಕೊಳ್ಳದೆ, ಶಾಂತಿ, ಸುವ್ಯವಸ್ಥೆಯನ್ನು ಕಾಪಾಡಲು ಸಹಕರಿಸಬೇಕು ಎಂದು ಮನವಿ ಮಾಡುತ್ತೇನೆ ಎಂದು ಸಿದ್ದರಾಮಯ್ಯ ತಿಳಿಸಿದ್ದಾರೆ @siddaramaiah


BREAKING NEWS ಶಿವಮೊಗ್ಗ ನಗರದಲ್ಲಿ ಎರಡು ದಿನ ಕುಡಿಯುವ ನೀರು ಬರಲ್ಲ? ಕಾರಣ?

ಶಿವಮೊಗ್ಗ ನಗರ ನಾಗರಿಕರಿಗೆ ಸಂಬಂಧಿಸಿದಂತೆ ಜಲಮಂಡಳಿ ಪ್ರಕಟಣೆಯೊಂದನ್ನ ನೀಡಿದ್ದು, ಎರಡು ದಿನಗಳ ಕಾಲ ಶಿವಮೊಗ್ಗ ನಗರದಲ್ಲಿ ಕುಡಿಯುವ ನೀರಿನ ಪೂರೈಕೆಯಲ್ಲಿ ವ್ಯತ್ಯಯವಾಗಲಿದೆ ಎಂದು ತಿಳಿಸಿದೆ. 

ಏನಿದೆ ಪ್ರಕಟಣೆಯಲ್ಲಿ?

ಕೃಷ್ಣರಾಜೇಂದ್ರ ಜಲಶುದ್ಧೀಕರಣ ಘಟಕದಲ್ಲಿ ತುರ್ತು ನಿರ್ವಹಣಾ ಕಾಮಗಾರಿ ಕೈಗೊಳ್ಳುವ ಅವಶ್ಯಕತೆ ಇರುವುದರಿಂದ ದಿ: 22/08/2023 ಮತ್ತು ದಿ: 23/08/2023 ರಂದು ಶಿವಮೊಗ್ಗ ನಗರದಲ್ಲಿ ದೈನಂದಿನ ಕುಡಿಯುವ ನೀರಿನ ಸರಬರಾಜಿನಲ್ಲಿ ವ್ಯತ್ಯಯವಾಗುವುದರಿಂದ ಸಾರ್ವಜನಿಕರು ಮಂಡಳಿಯೊಂದಿಗೆ ಸಹಕರಿಸುವಂತೆ ಸಹಾಯಕ ಕಾರ್ಯನಿರ್ವಾಹಕ ಅಭಿಯಂತರರು ಪ್ರಕಟಣೆಯಲ್ಲಿ ತಿಳಿಸಲಾಗಿದೆ. 

 

ಇನ್ನಷ್ಟು ಸುದ್ದಿಗಳು


 ನೈರುತ್ಯ ಶಿಕ್ಷಕರ ಕ್ಷೇತ್ರದಿಂದ ಸ್ಪರ್ಧಿಸ ಬಯಸಿರುವ  ಕಾಂಗ್ರೆಸ್​ ಪಕ್ಷದ ಆಕಾಂಕ್ಷಿ  ನಂಜೇಶ್ ಬೆಣ್ಣೂರು