ಗಣಪತಿ ಹಬ್ಬಕ್ಕೆ ಇಕೋ ಫ್ರೆಂಡ್ಲಿ ರೂಲ್ಸ್​

prathapa thirthahalli
Prathapa thirthahalli - content producer

Ganesh festival : ಗೌರಿ ಗಣೇಶ ಹಬ್ಬಕ್ಕೆ ಇನ್ನೇನು ಕೆಲವೇ ದಿನಗಳು ಬಾಕಿ ಇದ್ದು ಗೌರಿ-ಗಣೇಶ ಹಬ್ಬವನ್ನು ಪರಿಸರ ಸ್ನೇಹಿಯಾಗಿ ಆಚರಿಸುವ ಕುರಿತು ಸರ್ಕಾರ ಹಾಗೂ ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯು ಕೆಲವು ನಿರ್ದೇಶನಗಳನ್ನು ನೀಡಿದೆ. ಅದರಂತೆ ಪರಿಸರಸ್ನೇಹಿ ಗಣೇಶ ಹಬ್ಬ ಆಚರಿಸುವ ಸಂಬಂಧ ಕೆಲವು ನಿಯಮಗಳನ್ನು ಪಾಲಿಸುವಂತೆ ಜಿಲ್ಲಾದಿಕಾರಿಗಳು ತಿಳಿಸಿದ್ದಾರೆ. 

ಪಾಲಿಸಬೇಕಾದ ಪ್ರಮುಖ ನಿಯಮಗಳು
ಪ್ಲಾಸ್ಟರ್ ಆಫ್ ಪ್ಯಾರೀಸ್‌ನಿಂದ ತಯಾರಿಸಿದ ಗಣೇಶ ವಿಗ್ರಹಗಳ ತಯಾರಿಕೆ, ಮಾರಾಟ ಮತ್ತು ಜಲಮೂಲಗಳಲ್ಲಿ ವಿಸರ್ಜಿಸುವುದನ್ನು ನಿಷೇಧಿಸಲಾಗಿದೆ. ಈ ನಿಯಮ ಮೀರಿದವರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಲಾಗುವುದು. ನೈಸರ್ಗಿಕ ವಸ್ತುಗಳು ಮತ್ತು ಬಣ್ಣಗಳಿಂದ ತಯಾರಿಸಿದ ಮೂರ್ತಿಗಳನ್ನು ಮಾತ್ರ ಪ್ರತಿಷ್ಠಾಪಿಸಿ, ಅವುಗಳನ್ನು ವೈಜ್ಞಾನಿಕ ರೀತಿಯಲ್ಲಿ ವಿಸರ್ಜಿಸಬೇಕು. ಹೂವು, ಹಣ್ಣು, ಬಾಳೆಕಂಬಗಳಂತಹ ಅಲಂಕಾರಿಕ ವಸ್ತುಗಳನ್ನು ಮೂರ್ತಿಗಳೊಂದಿಗೆ ವಿಸರ್ಜಿಸದೆ, ಪ್ರತ್ಯೇಕವಾಗಿ ವಿಲೇವಾರಿ ಮಾಡಲು ಕ್ರಮ ವಹಿಸಬೇಕು. ರಾತ್ರಿ 10 ರಿಂದ ಬೆಳಿಗ್ಗೆ 6 ರವರೆಗೆ ಧ್ವನಿವರ್ಧಕಗಳ ಬಳಕೆಯನ್ನು ನಿಷೇಧಿಸಲಾಗಿದೆ. ಹಸಿರು ಪಟಾಕಿಗಳನ್ನು ಹೊರತುಪಡಿಸಿ, ಬೇರೆ ಯಾವುದೇ ರೀತಿಯ ಪಟಾಕಿಗಳನ್ನು ಸುಡುವುದನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ. ಸಾರ್ವಜನಿಕವಾಗಿ ಗಣೇಶ ಮೂರ್ತಿಗಳನ್ನು ಸ್ಥಾಪಿಸಲು ಸ್ಥಳೀಯ ಸಂಸ್ಥೆಗಳು ಮತ್ತು ಪೊಲೀಸ್ ಇಲಾಖೆಯಿಂದ ಕಡ್ಡಾಯವಾಗಿ ಅನುಮತಿ ಪಡೆಯಬೇಕು. ಗಣಪತಿ ವಿಸರ್ಜನೆಗೆ ತೆಪ್ಪ ಬಳಸಿದಲ್ಲಿ, ಕೇವಲ 2-3 ಜನರಿಗೆ ಮಾತ್ರ ಅವಕಾಶ ನೀಡಲಾಗುತ್ತದೆ. ತೆಪ್ಪದಲ್ಲಿ ತೆರಳುವವರು ಕಡ್ಡಾಯವಾಗಿ ಲೈಫ್ ಜಾಕೆಟ್ ಧರಿಸಬೇಕು ಮತ್ತು ನುರಿತ ಈಜುಗಾರರ ಸಮ್ಮುಖದಲ್ಲಿಯೇ ವಿಸರ್ಜನೆ ಮಾಡಬೇಕು. ಈ ನಿರ್ದೇಶನಗಳ ಪಾಲನೆ ಮೂಲಕ ಹಬ್ಬವನ್ನು ಸುರಕ್ಷಿತವಾಗಿ ಮತ್ತು ಪರಿಸರಕ್ಕೆ ಹಾನಿಯಾಗದಂತೆ ಆಚರಿಸಲು ಜಿಲ್ಲಾಧಿಕಾರಿಗಳು ಮನವಿ ಮಾಡಿದ್ದಾರೆ

Ganesh festival

Share This Article
prathapa thirthahalli
content producer
Follow:
Prathapa thirthahalli - Malenadu Today : ತೀರ್ಥಹಳ್ಳಿ ತಾಲ್ಲೂಕು ಗಬಡಿ ಮೂಲದ ಪತ್ರಕರ್ತ ಪ್ರತಾಪ್ ತೀರ್ಥಹಳ್ಳಿ ಕಳೆದ ಮೂರು ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಸದ್ಯ ಮಲೆನಾಡು ಟುಡೆಯಲ್ಲಿ content producer ಆಗಿ ಕಾರ್ಯ ನಿರ್ವಹಿಸುತ್ತಿದ್ದಾರೆ.
3 Comments
  • Please re publish remarks of annopoorna ramade whoo found as lifeless body onrailway tracks in hirehalli in your platform.

  • Please re publish remarks of annopoorna ramade whoo found as lifeless body onrailway tracks in hirehalli in your platform. Family mrmbers letter puludhed year ego

Leave a Reply

Your email address will not be published. Required fields are marked *