gautampura incident today : ಜೂನ್ 30 ಕಸ ಹಾಕಿದ್ದನ್ನು ಪ್ರಶ್ನಿಸಿದ್ದಕ್ಕೆ ವೃದ್ಧೆಯನ್ನು ಕಂಬಕ್ಕೆ ಕಟ್ಟಿ ಹಲ್ಲೆ; ಮೂವರ ವಿರುದ್ಧ ಪ್ರಕರಣ ದಾಖಲು
ಶಿವಮೊಗ್ಗ : ಕಸ ಹಾಕಿದ್ದನ್ನು ಪ್ರಶ್ನಿಸಿದ್ದಕ್ಕೆ ವಯಸ್ಸಾದ ಅಜ್ಜಿಯೊಬ್ಬರಿಗೆ ಕಂಬಕ್ಕೆ ಕಟ್ಟಿ ಹಲ್ಲೆ ಮಾಡಿರುವ ಅಮಾನವೀಯ ಘಟನೆ ಸಾಗರ ತಾಲೂಕಿನ ಗೌತಮಪುರದಲ್ಲಿ ನಡೆದಿದೆ. ಈ ಸಂಬಂಧ ಹಲ್ಲೆ ನಡೆಸಿದ ಮಹಿಳೆ ಸೇರಿದಂತೆ ಮೂವರ ವಿರುದ್ಧ ಪ್ರಕರಣ ದಾಖಲಾಗಿದೆ.
ಗೌತಮಪುರದ ನಿವಾಸಿ ಹುಚ್ಚಮ್ಮ ಎಂಬ ವೃದ್ಧೆಯ ಮನೆ ಕಡೆ ಪಕ್ಕದ ಮನೆಯ ಮಹಿಳೆಯೊಬ್ಬರು ಕಸ ತಂದು ಹಾಕಿದ್ದಾರೆ ಎನ್ನಲಾಗಿದೆ. ಇದನ್ನು ಪ್ರಶ್ನಿಸಿದಾಗ, ಆ ಮಹಿಳೆ ಕೋಪಗೊಂಡು ಹುಚ್ಚಮ್ಮ ಅವರನ್ನು ಕಂಬಕ್ಕೆ ಕಟ್ಟಿ ಹಾಕಿ ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಲಾಗಿದೆ.
ಈ ಘಟನೆ ನಂತರ, ಹುಚ್ಚಮ್ಮ ಅವರ ಮಗ ಪೊಲೀಸರಿಗೆ ದೂರು ನೀಡಿದ್ದು, ತಮ್ಮ ತಂದೆ-ತಾಯಿಗೆ ರಕ್ಷಣೆ ನೀಡಿ, ನ್ಯಾಯ ದೊರಕಿಸಿಕೊಡುವಂತೆ ಮನವಿ ಮಾಡಿದ್ದಾರೆ. ದೂರಿನ ಆಧಾರದ ಮೇಲೆ, ಹಲ್ಲೆ ನಡೆಸಿದ ಮಹಿಳೆ ಸೇರಿ ಮೂವರ ಮೇಲೆ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು, ತನಿಖೆ ಮುಂದುವರಿಸಿದ್ದಾರೆ.

