BIG NEWS : ಇನ್ಮುಂದೆ ಚುನಾವಣೆಗೆ ಸ್ಪರ್ಧಿಸುವುದಿಲ್ಲ: ಗೀತಾ ಶಿವರಾಜ್‌ಕುಮಾರ್ ಘೋಷಣೆ

ajjimane ganesh

ಮಲೆನಾಡು ಟುಡೆ ಸುದ್ದಿ,  ಸೆಪ್ಟೆಂಬರ್ 27 2025 :  ಶಿವಮೊಗ್ಗ ಜಿಲ್ಲಾ ಮಹಿಳಾ ಕಾಂಗ್ರೆಸ್​ ಅಧ್ಯಕ್ಷೆ ಪದಗ್ರಹಣ ಸಮಾರಂಭದಲ್ಲಿ ಮಾತನಾಡಿದ ನಟ ಶಿವರಾಜ್​ ಕುಮಾರ್ ಅವರ ಪತ್ನಿ ಗೀತಾ ಶಿವರಾಜ್​ಕುಮಾರ್, ಇನ್ನುಮುಂದೆ ನಾನು ಚುನಾವಣೆಗೆ ಸ್ಪರ್ಧಿಸುವುದಿಲ್ಲ ಎಂದು ಘೋಷಿಸಿದ್ದಾರೆ. 

ಈ ಹಿಂದೆ ಶಿವಮೊಗ್ಗ ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸಿದ್ದ ಅವರು, ಶಿವಮೊಗ್ಗದಲ್ಲಿಯೇ ನಾನಿನ್ನು ಚುನಾವಣೆಗೆ ಸ್ಪರ್ಧಿಸುವುದಿಲ್ಲ ಎಂದು ಘೋಷಿಸಿದರು. ಇವತ್ತಿನ ಸಮಾರಂಭಧಲ್ಲಿ ಮಾತನಾಡಿದ ಅವರು ಚುನಾವಣೆಗೆ ಸ್ಪರ್ಧಿಸಿದ್ದರೂ ಕೂಡ ಪಕ್ಷ ಸಂಘಟನೆಯಲ್ಲಿ ಜೊತೆಗೆ ಇರುತ್ತೇನೆ, ನಿಮ್ಮೊಂದಿಗೆ ಕೆಲಸ ಮಾಡುತ್ತೇನೆ, ಯಾವಾಗ ಕರೆದರೂ ನಾನು ಬರುತ್ತೇನೆ ಎಂದು ತಿಳಿಸಿದರು. 

- Advertisement -
Geetha Shivarajkumar Announces Retirement from Electoral Politics | Focuses on Organization
Geetha Shivarajkumar Announces Retirement from Electoral Politics | Focuses on Organization

, ನೂತನ ಜಿಲ್ಲಾ ಮಹಿಳಾ ಕಾಂಗ್ರೆಸ್ ಅಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿದ ಶ್ವೇತಾ ಬಂಡಿಯವರನ್ನು ಅಭಿನಂದಿಸಿದರು. ಶ್ವೇತಾ ಬಂಡಿಯವರು ತಮ್ಮ ಚುನಾವಣೆಯ ಪ್ರಚಾರದಲ್ಲಿ ಶ್ರಮಿಸಿದ್ದಾರೆ ಎಂದ ಗೀತಾ ಶಿವರಾಜ್​ಕುಮಾರ್,  ಇಂದಿನ ಸಮಾವೇಶ ಖುಷಿ ತಂದಿದೆ. ಮಹಿಳೆಯರು ಅಬಲೆಯರಲ್ಲ. ಅವರಿಗೆ ಎಲ್ಲಾ ಶಕ್ತಿಯಿದೆ ಅವರು  ಎಲ್ಲರನ್ನ ಜೊತೆಗೂಡಿಸಿಕೊಂಡು ಅವರು ಪಕ್ಷ ಸಂಘಟಿಸಲಿ ಎಂದು ಸಲಹೆ ನೀಡಿದರು. ನಾನು ಇನ್ಮುಂದೆ ಯಾವುದೇ ಚುನಾವಣೆಗೆ ಸ್ಪರ್ಧಿಸುವುದಿಲ್ಲ, ಆದರೆ ಪಕ್ಷದ ಎಲ್ಲರ ಜೊತೆಗೂ ದೃಢವಾಗಿ ಇರುತ್ತೇನೆ ಎಂದು ಪುನರುಚ್ಚರಿಸಿದರು. 

ಇದನ್ನು ಸಹ ಓದಿ  ಸ್ವಾತಿ ಪ್ರೇಮ ಪ್ರಕರಣ, ನಿಜಕ್ಕೂ ನಡೆದಿದ್ದೇನು, ಕೊಲೆನಾ.? ಆತ್ಮಹತ್ಯೆನಾ.? ಕಿರುಕುಳನಾ.? ಜೆಪಿ ಬರೆಯುತ್ತಾರೆ 

ಮಲೆನಾಡು ಟುಡೆ ಡಿಜಿಟಲ್ ನ್ಯೂಸ್ ಮೀಡಿಯಾ ಶಿವಮೊಗ್ಗವನ್ನೂ ಕೇಂದ್ರಿಕರಿಸಿಕೊಂಡು ಸ್ಥಳೀಯ ವಿಷಯಗಳಿಂದ, ಸಕಲ ವಿಚಾರಗಳನ್ನು ಜನರಿಗೆ ಮುಟ್ಟಿಸುವ ಮಾಹಿತಿ ಸಂಸ್ಥೆಯಾಗಿದೆ. ನೀವು ನಮ್ಮನ್ನು Facebook, whatsapp, whatsapp chanel , instagram, youtube, telegram , google business,   malenadu today epaper, malenadutoday web ನಲ್ಲಿ ಬೆಂಬಲಿಸಬಹುದು.. ಸಾದ್ಯವಾದಷ್ಟು ನಮ್ಮ ಪ್ರಯತ್ನಕ್ಕೆ ನಿಮ್ಮ ಬೆಂಬಲವನ್ನು ನೀಡಿ..ಇಲ್ಲಿ ನಿಮ್ಮ ಸಹಕಾರವೇ ಮುಖ್ಯ!

Geetha Shivarajkumar quit from Electoral Politics | Focuses on Organization

Share This Article
Leave a Comment

Leave a Reply

Your email address will not be published. Required fields are marked *