ಬೀಗ ಹಾಕಿದ್ದ ಮನೆಯೇ ಟಾರ್ಗೆಟ್! ಬೆಂಗಳೂರಿಗೆ ತೆರಳಿದ್ದವರ ನಿವಾಸದಲ್ಲಿ, ಸಿಸಿ ಕ್ಯಾಮರಾದ ವಯರ್ ಕತ್ತರಿಸಿ ಕೃತ್ಯ!

ಶಿವಮೊಗ್ಗ :  ಹೊಸನಗರ ತಾಲೂಕಿನ ನಿಟ್ಟೂರು ಸಮೀಪದ ಗೌರಿಕೆರೆಯಲ್ಲಿ ಮನೆಯೊಂದರ ಬೀಗ ಮುರಿದು ಲಕ್ಷಾಂತರ ರೂಪಾಯಿ ಮೌಲ್ಯದ ಚಿನ್ನಾಭರಣ ಹಾಗೂ ನಗದು ಕಳವು ಮಾಡಿರುವ ಘಟನೆ ನಡೆದಿದೆ. ಗೌರಿಕೆರೆ ನಿವಾಸಿ ರಾಜೇಂದ್ರ ಶೆಟ್ಟಿ ಎಂಬುವವರು ಕೆಲಸದ ಉದ್ದೇಶದಿಂದ ಬೆಂಗಳೂರಿಗೆ ಪ್ರಯಾಣ ಬೆಳೆಸಿದ್ದರು ಮತ್ತು ಅವರ ಪತ್ನಿ ಸಂಬಂಧಿಕರ ಮನೆಗೆ ತೆರಳಿದ್ದರು.ಈ ವೇಳೆ ಮನೆಯಲ್ಲಿ ಕಳ್ಳತನ ನಡೆದಿದೆ.  ಮನೆಯ ಮುಂಭಾಗದಲ್ಲಿದ್ದ ಸಿಸಿ ಕ್ಯಾಮರಾ ವೈರ್‌ಗಳನ್ನು ಕತ್ತರಿಸಿದ್ದ ಕಳ್ಳರು ಮುಂಬಾಗಿಲನ್ನು ಮುರಿದು ಒಳನುಗ್ಗಿದ್ದಾರೆ. ಬೀರುವಿನಲ್ಲಿಟ್ಟಿದ್ದ ಸುಮಾರು 10.80 ಲಕ್ಷ ರೂಪಾಯಿ ಮೌಲ್ಯದ ಚಿನ್ನದ ಆಭರಣಗಳು 2 ಲಕ್ಷ ರೂಪಾಯಿ ಮೌಲ್ಯದ ಬೆಳ್ಳಿಯ ವಸ್ತುಗಳು ಹಾಗೂ ಅಲ್ಮೇರಾದಲ್ಲಿದ್ದ 1.75 ಲಕ್ಷ ರೂಪಾಯಿ ನಗದನ್ನು ದೋಚಿದ್ದಾರೆ. ಒಟ್ಟಾರೆಯಾಗಿ 14.55 ಲಕ್ಷ ರೂಪಾಯಿ ಮೌಲ್ಯದ ಸ್ವತ್ತುಗಳು ಕಳುವಾಗಿವೆ ಎಂದು ಪ್ರಾಥಮಿಕವಾಗಿ ಅಂದಾಜಿಸಲಾಗಿದೆ. ಈ ಕುರಿತು ಮಾಹಿತಿ ತಿಳಿದ ಕೂಡಲೇ ಹೊಸನಗರ ಸರ್ಕಲ್ ಇನ್ಸ್‌ಪೆಕ್ಟರ್ ಗೌಡಪ್ಪಗೌಡರ್ ನೇತೃತ್ವದಲ್ಲಿ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿದ್ದು ತನಿಖೆ ಚುರುಕುಗೊಳಿಸಿದ್ದಾರೆ. 

ಹೊಸನಗರ: ಮನೆಯಲ್ಲಿ ಯಾರೂ ಇಲ್ಲದ ವೇಳೆ 14.55 ಲಕ್ಷ ರೂ. ಮೌಲ್ಯದ ನಗದು ಚಿನ್ನಾಭರಣ ಕಳವು Hosanagara Burglary: 14.55 Lakh Worth Gold and Cash Stolen Near Nittur
ಹೊಸನಗರ: ಮನೆಯಲ್ಲಿ ಯಾರೂ ಇಲ್ಲದ ವೇಳೆ 14.55 ಲಕ್ಷ ರೂ. ಮೌಲ್ಯದ ನಗದು ಚಿನ್ನಾಭರಣ ಕಳವು Hosanagara Burglary: 14.55 Lakh Worth Gold and Cash Stolen Near Nittur

 ಶಿವಮೊಗ್ಗ : ಮನೆಯಂಗಳದಲ್ಲಿ ನಿಲ್ಲಿಸಿದ್ದ 18 ಲಕ್ಷದ ಎಕ್ಸ್‌ಯುವಿ 700 ನಾಪತ್ತೆ!

ಮಲೆನಾಡು ಟುಡೆ ಡಿಜಿಟಲ್ ನ್ಯೂಸ್ ಮೀಡಿಯಾ ಶಿವಮೊಗ್ಗವನ್ನೂ ಕೇಂದ್ರಿಕರಿಸಿಕೊಂಡು ಸ್ಥಳೀಯ ವಿಷಯಗಳಿಂದ ಸಕಲ ವಿಚಾರಗಳನ್ನು ಜನರಿಗೆ ಮುಟ್ಟಿಸುವ ಮಾಹಿತಿ ಸಂಸ್ಥೆಯಾಗಿದೆ. ನೀವು ನಮ್ಮನ್ನು Facebook whatsapp whatsapp chanel  instagram youtube telegram  google business   malenadu today epaper malenadutoday web ನಲ್ಲಿ ಬೆಂಬಲಿಸಬಹುದು.. ಸಾದ್ಯವಾದಷ್ಟು ನಮ್ಮ ಪ್ರಯತ್ನಕ್ಕೆ ನಿಮ್ಮ ಬೆಂಬಲವನ್ನು ನೀಡಿ..ಇಲ್ಲಿ ನಿಮ್ಮ ಸಹಕಾರವೇ ಮುಖ್ಯ!