ಭದ್ರಾ ಜಲಾಶಯದ ಅಚ್ಚುಕಟ್ಟುದಾರರಿಗೆ ಗುಡ್​ ನ್ಯೂಸ್​! 10 ನೇ ತಾರೀಖಿನಿಂದ ಹರಿಯಲಿದೆ ನಾಲೆಗಳಿಗೆ ನೀರು! ಪೂರ್ತಿ ವಿವರ ಇಲ್ಲಿದೆ

Good news for the people of bhadra reservoir catchment area! Water will flow into the canals from 10th! Here's the full detailsಭದ್ರಾ ಜಲಾಶಯದ ಜಲಾನಯನ ಪ್ರದೇಶದ ಜನರಿಗೆ ಗುಡ್​ ನ್ಯೂಸ್​! 10 ನೇ ತಾರೀಖಿನಿಂದ ಹರಿಯಲಿದೆ ನಾಲೆಗಳಿಗೆ ನೀರು! ಪೂರ್ತಿ ವಿವರ ಇಲ್ಲಿದೆ

ಭದ್ರಾ ಜಲಾಶಯದ ಅಚ್ಚುಕಟ್ಟುದಾರರಿಗೆ ಗುಡ್​ ನ್ಯೂಸ್​! 10 ನೇ ತಾರೀಖಿನಿಂದ ಹರಿಯಲಿದೆ ನಾಲೆಗಳಿಗೆ ನೀರು! ಪೂರ್ತಿ ವಿವರ ಇಲ್ಲಿದೆ

KARNATAKA NEWS/ ONLINE / Malenadu today/ Aug 9, 2023 SHIVAMOGGA NEWS’

ಭದ್ರಾ ಜಲಾಶಯದ ಅಚ್ಚುಕಟ್ಟುದಾರರಿಗೆ ಮುಂಗಾರು ಹಂಗಾಮಿನ ಬೆಳೆಗಳಿಗೆ ಭದ್ರಾ ಜಲಾಶಯದ ಎಡದಂಡೆ ಮತ್ತು ಬಲದಂಡೆ ನಾಲೆ, ಆನವೇರಿ ಶಾಖಾನಾಲೆ, ದಾವಣಗೆರೆ ಶಾಖಾನಾಲೆ, ಮಲೇಬೆನ್ನೂರು ಶಾಖಾನಾಲೆ ಹರಿಹರ ಶಾಖಾನಾಲೆ ಮತ್ತು ಗೋಂದಿ ನಾಲೆಗಳಿಗೆ ನೀರು ಹರಿಸುವ ಸಂಬಂಧ ಕರ್ನಾಟಕ ನೀರಾವರಿ ನಿಗಮ ಪ್ರಕಟಣೆಯನ್ನ ಹೊರಡಿಸಿದೆ. 

ಪ್ರಕಟಣೆಯಲ್ಲಿ ಏನಿದೆ. ?

2023-24ನೇ ಸಾಲಿನ ಭದ್ರಾ ಯೋಜನೆಯ ಅಚ್ಚುಕಟ್ಟು ವ್ಯಾಪ್ತಿಯ ಮುಂಗಾರು ಬೆಳೆಗಳಿಗೆ ಸತತವಾಗಿ ಭದ್ರಾ ಎಡದಂಡೆ ನಾಲೆ ಮತ್ತು ಬಲದಂಡೆ ನಾಲೆಗಳಿಗೆ ಜಲಾಶಯದಿಂದ ಈ ಕೆಳಕಂಡ ವೇಳಾಪಟ್ಟಿಯ ಅನುಗುಣವಾಗಿ ನಾಲೆಗಳಲ್ಲಿ ನೀರನ್ನು ಹರಿಸಲಾಗುವುದು

ಭದ್ರಾ ಜಲಾಶಯದ ಮುಖ್ಯನಾಲೆ ಮತ್ತು ಶಾಖಾ ನಾಲೆಗಳಲ್ಲಿ ಮೇಲೆ ತಿಳಿಸಿದಂತೆ ನೀರನ್ನು ಹರಿಸಲಾಗುವುದು. ವಿತರಣಾ ನಾಲೆಗಳಲ್ಲಿ ಅನುಸರಿಸಬೇಕಾದ ಆಂತರಿಕ ಸರದಿಯನ್ನು ಕಾರ್ಯಪಾಲಕ ಇಂಜಿನಿಯರ್‌ರವರು ನಿರ್ಧರಿಸುತ್ತಾರೆ. ನೀರಾವರಿಯಾಗಲಿರುವ ಸವಿಸ್ತಾರ ಸರ್ವೆ ನಂಬರುಗಳು ಹಾಗೂ ಬೆಳೆಯಬೇಕಾದ ಬೆಳೆಗಳ ವಿವರಗಳನ್ನು ಸಂಬಂಧಪಟ್ಟ ಕಾರ್ಯಪಾಲಕ ಇಂಜಿನಿಯರ್‌ರವರು ಪ್ರಕಟಿಸುತ್ತಾರೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ. 

ಕಾನೂನು ಉಲ್ಲಂಘಿಸುವವರಿಗೆ ಎಚ್ಚರಿಕೆ 

ಕರ್ನಾಟಕ ನೀರಾವರಿ ಕಾಯ್ದೆ 1965ರ ಅನ್ವಯ ಬೆಳೆ ಮಾದರಿಯನ್ನು ಉಲ್ಲಂಘಿಸುವವರು, ನೀರಾವರಿ ಕಾಲುವೆ ಹಾಗೂ ಕಟ್ಟಡಗಳನ್ನು ಜಖಂಗೊಳಿಸುವವರು, ನಿಗಧಿತ ಪ್ರಮಾಣಕ್ಕಿಂತ ಹೆಚ್ಚು ನೀರನ್ನು ಬಳಸುವವರು ಮತ್ತು ಅನಧಿಕೃತ ನೀರಾವರಿ ಬೆಳೆಗಾರರು ವಿವಿಧ ನಿಯಮಗಳ ಪ್ರಕಾರ ಕಾನೂನು ಕ್ರಮಕ್ಕೆ ಒಳಗಾಗುತ್ತಾರೆ. ಹಾಲಿ ಜಲಾಶಯದಲ್ಲಿ ಇರುವ ನೀರಿನ ಪ್ರಮಾಣವನ್ನು ಗಣನೆಗೆ ತೆಗೆದುಕೊಂಡು ಅನುಸೂಚಿಯಲ್ಲಿ ನಮೂದಿಸಿದ ಕ್ಷೇತ್ರ ಹಾಗೂ ಬೆಳೆಗಳಿಗೆ ಮಾತ್ರ ನೀರು ಒದಗಿಸಲು ಉದ್ದೇಶಿಸಲಾಗಿರುತ್ತದೆ. ಪ್ರಕಟಿತ ಬೆಳೆಗಳನ್ನು ಬೆಳೆಯದೇ, ಬೇರೆ ಬೆಳೆಯನ್ನು ಬೆಳೆದು ಬೆಳೆ ಉಲ್ಲಂಘನೆ ಮಾಡಿ ನಷ್ಟ ಅನುಭವಿಸಿದಲ್ಲಿ ಇದಕ್ಕೆ ಸಂಬಂಧಪಟ್ಟ ರೈತರೇ ಹೊಣೆಗಾರರಾಗಿದ್ದು, ಜಲಸಂಪನ್ಮೂಲ ಇಲಾಖೆಯು ಯಾವುದೇ ರೀತಿಯಲ್ಲಿ ಜವಾಬ್ದಾರಿಯಾಗುವುದಿಲ್ಲ. ರೈತ ಬಾಂಧವರು ನೀರಿನ ಸದ್ಬಳಕೆಗೆ ಸಹಕಾರ ನೀಡುವುದು ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ. 

ಹರಿಸುವ ನೀರಿನ ಪ್ರಮಾಣ!

ಪ್ರಸಕ್ತ ಸಾಲಿನ ಮುಂಗಾರು ಹಂಗಾಮಿನ ಬೆಳೆಗಳಿಗೆ ದಿನಾಂಕ:10.08.2023 ರಿಂದ ಎಡದಂಡೆ ನಾಲೆಯಲ್ಲಿ 380 ಹಾಗೂ ಬಲದಂಡೆ ನಾಲೆಯಲ್ಲಿ 2650 ಕ್ಯೂಸೆಕ್ಸ್ ಮುಂಗಾರು ಬೆಳೆಗಳಿಗೆ ನಾಲೆಗಳಲ್ಲಿ 100 ದಿನಗಳ ಅವಧಿಗೆ ನೀರನ್ನು ಹರಿಸಲು ಕ್ರಮ ಕೈಗೊಳ್ಳಲಾಗಿದೆ.

ಪ್ರಮುಖ ಸೂಚನೆಗಳು

1. ಪ್ರಸಕ್ತ ಸಾಲಿನಲ್ಲಿ ಭದ್ರಾ ಜಲಾಶಯದ ನೀರಿನ ಸಂಗ್ರಹಣೆ ಹಾಗೂ ನೀರಿನ ಒಳಹರಿವನ್ನು ಆಧರಿಸಿ ನಾಲೆಗಳಲ್ಲಿ ನೀರನ್ನು ಹರಿಸಲಾಗುವುದು. ಕಾರ್ಯಪಾಲಕ ಇಂಜಿನಿಯರ್‌ರವರು ನಿರ್ಧರಿಸುವ ಆಂತರಿಕ ಸರದಿಯನ್ವಯ ಹರಿಸಲಾಗುವ ನೀರನ್ನು ಉಪಯೋಗಿಸಿಕೊಂಡು ಪ್ರಕಟಿತ ಅಚ್ಚುಕಟ್ಟು ಪ್ರದೇಶದಲ್ಲಿ ಬೆಳೆಯನ್ನು ಬೆಳೆಯಬೇಕು. ನೀರಿನ ಕೊರತೆಯಿಂದ ಬೆಳೆ ನಷ್ಟವುಂಟಾದಲ್ಲಿ ಇಲಾಖೆಯು ಜವಾಬ್ದಾರಿಯಾಗುವುದಿಲ್ಲ.

2. ಚೌಗು ಪ್ರದೇಶದಲ್ಲಿ ಆಂತರಿಕ ಸರದಿಯಂತೆ ನೀರು ಬಿಟ್ಟಾಗ್ಯೂ ಉಳಿದ ಸಮಯದಲ್ಲಿ ಬರುವ ಚೌಗು ಹಾಗೂ ಬಸಿ ನೀರಿನಿಂದ ಬೆಳೆಯನ್ನು ಬೆಳೆಯುವುದಾದರೆ, ಅಂತಹ ಕ್ಷೇತ್ರಗಳನ್ನು ಮಾತ್ರ ನೀರಾವರಿ ಕಾಯ್ದೆ ಮೇರೆಗೆ ಉಲ್ಲಂಘನೆ ಎಂದು ಪರಿಗಣಿಸುವುದಿಲ್ಲ ಹಾಗೂ ಇಂತಹ ಯಾವುದೇ ಪ್ರಕರಣವನ್ನು ನಿರ್ಧರಿಸುವಲ್ಲಿ ನೀರಾವರಿ ಅಧಿಕಾರಿಗಳ ತೀರ್ಮಾನವೇ ಅಂತಿಮವಾಗಿರುತ್ತದೆ.

3. ನಿಗಧಿಪಡಿಸಿದ ಕ್ಷೇತ್ರಗಳಲ್ಲಿ ಸೂಚಿತ ಬೆಳೆಗಳನ್ನು ಬೆಳೆದರೆ ಮಾತ್ರ ಪೂರ್ಣ ಪ್ರಮಾಣದಲ್ಲಿ 1,07,104 ಹೆಕ್ಟೇರ್ ಪ್ರದೇಶಕ್ಕೆ ನೀರು ಒದಗಿಸಬಹುದು. ಒಂದು ವೇಳೆ ಪ್ರಕಟಿತ ಬೆಳೆಗಳಿಗೆ ಬದಲಾಗಿ ಹೆಚ್ಚು ನೀರುಣ್ಣುವ ಭತ್ತ ಹಾಗು ಕಬ್ಬು ಬೆಳೆದರೆ ಪ್ರಕಟಿತ ಬೆಳೆಗಳಿಗೆ ಮತ್ತು ಪ್ರಕಟಿತ ಅಚ್ಚುಕಟ್ಟು ಪ್ರದೇಶದ ವಿಸ್ತೀರ್ಣಕ್ಕೆ ಪೂರ್ಣ ಪ್ರಮಾಣದಲ್ಲಿ ನೀರು ಒದಗಿಸಲು ಸಾಧ್ಯವಾಗುವುದಿಲ್ಲ. ಆದ್ದರಿಂದ, ರೈತರು ಅಧಿಸೂಚಿತ ಬೆಳೆಗಳನ್ನು ನಿಗದಿತ ವಿಸ್ತೀರ್ಣಕ್ಕೆ ಮಾತ್ರ ಬೆಳೆದು ಇಲಾಖೆಯೊಂದಿಗೆ ಸಹಕರಿಸಬೇಕಾಗಿ ಕೋರಲಾಗಿದೆ.

4. ಭದ್ರಾ ಜಲಾಶಯದ ಮುಖ್ಯ ನಾಲೆ ಮತ್ತು ಶಾಖಾ ನಾಲೆಗಳಲ್ಲಿ ಅಧಿಸೂಚನೆಯಂತೆ ವಿತರಣಾ ನಾಲೆಗಳಲ್ಲಿ ಆಂತರಿಕ ಸರದಿಯ ಮೇರೆಗೆ ಜಲಾಶಯದಲ್ಲಿ ನೀರಿನ ಲಭ್ಯತೆಯನುಗುಣವಾಗಿ ನಿರ್ವಹಣೆಯನ್ನು ಮಾಡಲಾಗುವುದು.

5. ಭದ್ರಾ ಕಾಲುವೆಯಲ್ಲಿ ಹರಿಯಬಿಡುವ ನೀರಿನಲ್ಲಿ ಕುಡಿಯುವ ನೀರಿನ ಅವಲಂಬಿತ ನಗರಗಳ ಹಾಗೂ ಪಟ್ಟಣಗಳ ನೀರಿನ ಬೇಡಿಕೆಯೂ ಸಹ ಸೇರಿಕೊಂಡಿರುತ್ತದೆ.

 

 ನೈರುತ್ಯ ಶಿಕ್ಷಕರ ಕ್ಷೇತ್ರದಿಂದ ಸ್ಪರ್ಧಿಸ ಬಯಸಿರುವ  ಕಾಂಗ್ರೆಸ್​ ಪಕ್ಷದ ಆಕಾಂಕ್ಷಿ  ನಂಜೇಶ್ ಬೆಣ್ಣೂರು