government Employees : ರಾಜ್ಯ ಸರ್ಕಾರಿ ನೌಕರರ ಸಂಘದ ರಾಜ್ಯಮಟ್ಟದ ಕ್ರೀಡಾಕೂಟ ಮತ್ತು ಸಾಂಸ್ಕೃತಿಕ ಸ್ಪರ್ಧೆಗಳು ಮೇ 18ರಿಂದ 20ರ ವರೆಗೆ ನೆಹರು ಕ್ರೀಡಾಂಗಣದಲ್ಲಿ ನಡೆಯಲಿದೆ ಎಂದು ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷ ಸಿ.ಎಸ್.ಷಡಾಕ್ಷರಿ ತಿಳಿಸಿದರು.
ಮಂಗಳವಾರ ಪತ್ರಿಕಾ ಭವನದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು ಮೇ 18 ರಂದು ಸಂಜೆ 05 ಗಂಟೆಗೆ ಈ ಕಾರ್ಯಕ್ರಮದ ಉದ್ಘಾಟನೆಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯರವರು ನೆರವೇರಿಸಲಿದ್ದಾರೆ. ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಕ್ರೀಡಾ ಧ್ವಜಾರೋಹಣ ನೆರವೇರಿಸಲಿದ್ದು. ಈವೇಳೆ ಸಚಿವ ಮಧು ಬಂಗಾರಪ್ಪ ಕ್ರೀಡಾ ಜ್ಯೋತಿ ಸ್ವೀಕರಿಸಲಿದ್ದಾರೆ ಎಂದು ತಿಳಿಸಿದರು.
ಈ ಹಿಂದೆ 2017ರಲ್ಲಿ ಶಿವಮೊಗ್ಗದಲ್ಲಿ ಸರ್ಕಾರಿ ನೌಕರರ ರಾಜ್ಯಮಟ್ಟದ ಕ್ರೀಡಾಕೂಟ ಶಿವಮೊಗ್ಗದಲ್ಲಿ 2 ವರೆ ಕೋಟಿ ವೆಚ್ಚದಲ್ಲಿ ನಡೆಸಿದ್ದೆವು. ಕಳೆದ ಬಾರಿಗಿಂತಲು ಈ ಬಾರಿ ರಾಜ್ಯಮಟ್ಟದ ಕ್ರೀಡಾಕೂಟವನ್ನು ವಿಭಿನ್ನವಾಗಿ ನಡೆಸುತ್ತಿದ್ದೇವೆ ಎಂದರು.

government Employees : ಹೇಗಿರುತ್ತೆ ಕ್ರೀಡಾ ಕೂಟ
ಹಾಗೆಯೇ ಕ್ರೀಡಾಕೂಟದ ಬಗ್ಗೆ ಮಾಹಿತಿ ನೀಡಿದ ಅಧ್ಯಕ್ಷರು ಪ್ರತಿ ಜಿಲ್ಲೆಯಲ್ಲಿ ಸುಮಾರು 400 ನೌಕರರು ಕ್ರೀಡಾಕೂಟದಲ್ಲಿ ಭಾಗವಹಿಸಲಿದ್ದಾರೆ. ಒಟ್ಟು 15 ಸಾವಿರಕ್ಕು ಹೆಚ್ಚು ನೌಕರರು ಕ್ರೀಡೆ ಮತ್ತು ಸಾಂಸ್ಕೃತಿಕ ಸ್ಪರ್ಧೆಗಳಲ್ಲಿ ಪಾಲ್ಗೊಳ್ಳಲಿದ್ದಾರೆ. ಒಟ್ಟು 144 ವಿವಿಧ ಸ್ಪರ್ಧೆಗಳು ನಡೆಯಲಿದ್ದು, ಕ್ರೀಡೆಯಲ್ಲಿ ವೈಯಕ್ತಿಕ 97, ಹಾಗೂ 16 ಗುಂಪು ಕ್ರೀಡೆಗಳು ಇರಲಿವೆ. ಸಾಂಸ್ಕೃತಿಕ ಸ್ಪರ್ಧೆಗಳಲ್ಲಿ 15 ವೈಯಕ್ತಿಕ, 16 ಗುಂಪು ಸ್ಪರ್ಧೆಗಳು ಇರಲಿವೆ ಎಂದರು.
ಮೇ 18ರಂದು ಸಂಜೆ 7 ಗಂಟೆಗೆ ಗಾಯಕ ರಾಜೇಶ್ ಕೃಷ್ಣನ್ ಅವರಿಂದ ಸಂಗೀತ ಸಂಜೆ ಕಾರ್ಯಕ್ರಮ ಇರಲಿದೆ. ಮೇ 19ರಂದು ಸಂಜೆ 7 ಗಂಟೆಗೆ ಗಾಯಕರಿಂದ ಜನಪದ ದಿಬ್ಬಣ ಕಾರ್ಯಕ್ರಮ ಇರಲಿದೆ.ಮೇ 20ರಂದು ಮಧ್ಯಾಹ್ನ 3 ಗಂಟೆಗೆ ಕುವೆಂಪು ರಂಗಮಂದಿರದಲ್ಲಿ ಸಮಾರೋಪ ಸಮಾರಂಭ ನಡೆಯಲಿದೆ. ಕ್ರೀಡೆ ಮತ್ತು ಸಾಂಸ್ಕೃತಿಕ ಸ್ಪರ್ಧೆಗಳಲ್ಲಿ ವಿಜೇತರಾದವರಿಗೆ ಟ್ರೋಫಿ ಮತ್ತು ನೆನಪಿನ ಕಾಣಿಕೆ ನೀಡಲಾಗುತ್ತದೆ. ನಗರದ ಎನ್.ಇ.ಎಸ್ ಮೈದಾನದಲ್ಲಿ ಪ್ರತಿದಿನ 50 ಸಾವಿರ ಜನರಿಗೆ ಊಟ, ಉಪಹಾರದ ವ್ಯವಸ್ಥೆ ಮಾಡಲಾಗಿದೆ.. ಸ್ಪರ್ಧೆಗಳಲ್ಲಿ ಭಾಗವಹಿಸುವವರಿಗೆ ಸರ್ಕಾರ ಸಾಂದರ್ಭಿಕ ರಜೆ ಮಂಜೂರು ಮಾಡಿದೆ.