ಗ್ರಾಮ ಪಂಚಾಯಿತಿ ಉಪಚುನಾವಣೆ! ಶಿವಮೊಗ್ಗ ಜಿಲ್ಲಾಧಿಕಾರಿಗಳ ಕಚೇರಿಯಿಂದ ಬಂದ ಪ್ರಕಟಣೆಯಲ್ಲಿ ಏನಿದೆ! ವಿವರ ಓದಿ

Gram panchayat by-election! What is in the announcement from the Shimoga Deputy Commissioner's office? Read Details

ಗ್ರಾಮ ಪಂಚಾಯಿತಿ ಉಪಚುನಾವಣೆ!  ಶಿವಮೊಗ್ಗ ಜಿಲ್ಲಾಧಿಕಾರಿಗಳ ಕಚೇರಿಯಿಂದ ಬಂದ  ಪ್ರಕಟಣೆಯಲ್ಲಿ ಏನಿದೆ! ವಿವರ ಓದಿ
ಗ್ರಾಮ ಪಂಚಾಯಿತಿ ಉಪಚುನಾವಣೆ! ಶಿವಮೊಗ್ಗ ಜಿಲ್ಲಾಧಿಕಾರಿಗಳ ಕಚೇರಿಯಿಂದ ಬಂದ ಪ್ರಕಟಣೆಯಲ್ಲಿ ಏನಿದೆ! ವಿವರ ಓದಿ

MALENADUTODAY.COM | SHIVAMOGGA NEWS

ರಾಜ್ಯ ಚುನಾವಣಾ ಆಯೋಗ, ಶಿವಮೊಗ್ಗ ಜಿಲ್ಲೆಯಲ್ಲಿ ಈ ಕೆಳಕಂಡ ಗ್ರಾಮ ಪಂಚಾಯತಿಗಳಲ್ಲಿ ವಿವಿಧ ಕಾರಣಗಳಿಂದ ತೆರವಾಗಿರುವ ಸದಸ್ಯ ಸ್ಥಾನಗಳಿಗೆ ಚುನಾವಣಾ ವೇಳಾಪಟ್ಟಿಯನ್ನು ಪ್ರಕಟಿಸಿದೆ. ಇದಕ್ಕೆ ಸಂಬಂಧಿಸಿದ ವಿವರಗಳು ಇಲ್ಲಿದೆ 

  • ಜಿಲ್ಲಾಧಿಕಾರಿಗಳು ಅಧಿಸೂಚನೆ ಹೊರಡಿಸುವ  ದಿನಾಂಕ ಮತ್ತು ದಿನ : 08-02-2023 (ಬುಧವಾರ)
  • ನಾಮಪತ್ರಗಳನ್ನು ಸಲ್ಲಿಸಲು ಕೊನೆಯ ದಿನಾಂಕ ಮತ್ತು ದಿನ : 14-02-2023 (ಮಂಗಳವಾರ)
  • ನಾಮಪತ್ರಗಳನ್ನು ಪರಿಶೀಲಿಸುವ ದಿನಾಂಕ ಮತ್ತು ದಿನ : 15-02-2023 (ಬುಧವಾರ)
  • ಉಮೇದುವಾರಿಕೆಗಳನ್ನು ಹಿಂತೆಗೆದುಕೊಳ್ಳಲು ಕೊನೆಯ ದಿನಾಂಕ ಮತ್ತು ದಿನ : 17-02-2023 (ಶುಕ್ರವಾರ)
  • ಮತದಾನ ಅವಶ್ಯವಿದ್ದರೆ, ಮತದಾನವನ್ನು ನಡೆಸಬೇಕಾದ ದಿನಾಂಕ ಮತ್ತು ದಿನ :  25-02-2023 (ಶನಿವಾರ)
  • ಮರು ಮತದಾನದ ಅವಶ್ಯವಿದ್ದರೆ, ಮತದಾನವನ್ನು ನಡೆಸಬೇಕಾದ ದಿನಾಂಕ ಮತ್ತು ದಿನ : 27-02-2023 (ಸೋಮವಾರ)
  • (ಮತದಾನದ ವೇಳೆ:- ಬೆಳಿಗ್ಗೆ 7-00 ಗಂಟೆಯಿಂದ ಸಾಯಂಕಾಲ 5-00 ಗಂಟೆಯವರೆಗೆ)
  • ಮತಗಳ ಎಣಿಕೆ ದಿನಾಂಕ ಮತ್ತು ದಿನ ಬೆಳಿಗ್ಗೆ 8-00  ಗಂಟೆಯಿಂದ ; (ತಾಲ್ಲೂಕು ಕೇಂದ್ರದಲ್ಲಿ) ; 28-02-2023 (ಮಂಗಳವಾರ)
  • ಚುನಾವಣೆಯನ್ನು ಯಾವ ದಿನಾಂಕಕ್ಕೆ ಮುಂಚೆ ಮುಕ್ತಾಯಗೊಳಿಸಬೇಕೋ  ಆ ದಿನಾಂಕ ಮತ್ತು ದಿನ : 28-02-2023 (ಮಂಗಳವಾರ)
  • ಈ ಚುನಾವಣೆಯನ್ನು ಮತಪೆಟ್ಟಿಗೆಗಳ (Ballot Box) ಮೂಲಕ ನಡೆಸಲಾಗುವುದು.
  • ಗ್ರಾಮ ಪಂಚಾಯತಿ ಚುನಾವಣೆಗಳ ಪತಪತ್ರದಲ್ಲಿ “NOTA” ಅವಕಾಶ ಇರುವುದಿಲ್ಲ.

SHIVAMOGGA AIRPORT ತೋರಿಸಿ 72 ಸಾವಿರ ರೂಪಾಯಿ ಗುಳುಂ! ಕೆಲಸದ ಕರೆ ನಂಬಿದ್ದಕ್ಕೆ ಮಹಾಮೋಸ ! ಏನಿದು ಫಸ್ಟ್​ ಕೇಸ್​

 ಮಾದರಿ ನೀತಿ ಸಂಹಿತೆ:

ಕರ್ನಾಟಕ ಗ್ರಾಮ ಸ್ವರಾಜ್ ಮತ್ತು ಪಂಚಾಯತ್ ರಾಜ್ ಅಧಿನಿಯಮ 1993 ರ ಪ್ರಕರಣ 308 ಎಸಿ ರಂತೆ ಚುನಾವಣಾ ನೀತಿ ಸಂಹಿತೆಯು ಚುನಾವಣೆ ನಡೆಯುವ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ದಿನಾಂಕಃ 08/02/2023 ರಿಂದ 28/02/2023 ರವರೆಗೆ ಜಾರಿಯಲ್ಲಿರುತ್ತದೆ.

ಮದ್ಯಮಾರಾಟ ವಿಚಾರ

ನೀತಿ ಸಂಹಿತೆ ಜಾರಿಯಲ್ಲಿರುವ ಅವಧಿಯಲ್ಲಿ ನೀತಿ ಸಂಹಿತೆಯು ಜಾರಿಯಲ್ಲಿರುವ ಪ್ರದೇಶಗಳಲ್ಲಿ ಎಲ್ಲಾ ಮದ್ಯದ ಅಂಗಡಿಗಳನ್ನು ಮತ್ತು ಮದ್ಯ ತಯಾರಿಕಾ ಘಟಕಗಳನ್ನು ಅದರ ಮಾಲೀಕರು, ಅಧೀಭೋಗದಾರರು ಮತ್ತು ಸಂದರ್ಭಾನುಸಾರ ವ್ಯವಸ್ಥಾಪಕರು ಮುಚ್ಚತಕ್ಕದ್ದು ಹಾಗೂ ಮಹರು ಮಾಡಿದ ಅದರ ಕೀಯನ್ನು ತಾಲ್ಲೂಕು ತಹಶೀಲ್ದಾರ್ ಹಾಗೂ ಮ್ಯಾಜಿಸ್ಟ್ರೇಟ್ ರವರಿಗೆ ಒಪ್ಪಿಸಲು ತಿಳಿಸಲಾಗಿದೆ.

ಎಲ್ಲೆಲ್ಲಿ ಚುನಾವಣೆ!

ಅರ್ಧಕೇಜಿಗೂ ಹೆಚ್ಚು ತೂಕದ ಅಮ್ಮನ ತಾಳಿಬೊಟ್ಟು! ಸಾಗರ ಮಾರಿಕಾಂಬೆಯ ವಿಶೇಷತೆ ಏನೇನು ಗೊತ್ತಾ? ಆಚಾರ-ವಿಚಾರಗಳ ಸ್ಪೆಷಲ್​ ರಿಪೋರ್ಟ್​

Facebook ನಲ್ಲಿ ನಮ್ಮ ಪೇಜ್​ ನೋಡಿ : Malenadutoday.com

Twitter ನಲ್ಲಿ ನಾವಿದ್ದೇವೆಫಾಲೋ ಮಾಡಿ : Malenadutoday.com

Instagram ನಲ್ಲಿ ಕ್ಲಿಕ್​ ಮಾಡಿ : Malenadutoday.com

Telegram ನಲ್ಲಿ ಸುದ್ದಿ ಪಡೆಯಲು ಲಿಂಕ್ ಒತ್ತಿ : Malenadutoday.com