ಶಿವಮೊಗ್ಗ: ನವೆಂಬರ್ 9 ರಂದು ಕಾನೂನು ಸೇವೆಗಳ ದಿನಾಚರಣೆ ಅಂಗವಾಗಿ ಬೃಹತ್ ಸೈಕಲ್ ಜಾಥಾ 

ಹಂಚಿಕೊಳ್ಳಿ
WhatsApp Facebook X Telegram
Grand Cycle Rally in Shivamogga on November 9
Grand Cycle Rally in Shivamogga on November 9
dasrara add shivamogga

ಸುದ್ದಿಯ ಸ್ಥಳ: Shivamogga district, Karnataka

ಮಲೆನಾಡುಟುಡೆ ಸುದ್ದಿ / ಶಿವಮೊಗ್ಗ : ಸಾರ್ವಜನಿಕರಲ್ಲಿ ಕಾನೂನು ಅರಿವು ಮೂಡಿಸುವ ಉದ್ದೇಶದಿಂದ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಹಾಗೂ ನಗರದ ವಿವಿಧ ಸಂಘ-ಸಂಸ್ಥೆಗಳ ಜಂಟಿ ಆಶ್ರಯದಲ್ಲಿ ನವೆಂಬರ್ 9 ರಂದು ಉಚಿತ ಸೈಕಲ್ ಜಾಥಾವನ್ನು ಹಮ್ಮಿಕೊಳ್ಳಲಾಗಿದೆ. ನವೆಂಬರ್ 9ರಂದು ಬೆಳಿಗ್ಗೆ 7.00 ಗಂಟೆಗೆ ಶಿವಮೊಗ್ಗ ಜಿಲ್ಲಾ ನ್ಯಾಯಾಲಯದ ಆವರಣದಿಂದ ಈ ಬೃಹತ್ ಜಾಥಾಗೆ ಚಾಲನೆ ದೊರೆಯಲಿದೆ. 

shivamogga dasara add
dasrara add shivamogga
dasrara add shivamogga

ಜಿಲ್ಲಾ ವಕೀಲರ ಸಂಘ, ಪೊಲೀಸ್ ಇಲಾಖೆ, ಶಿವಮೊಗ್ಗ ಮಹಾನಗರ ಪಾಲಿಕೆ, ಸೈಕಲ್ ಕ್ಲಬ್, ಯೂತ್ ಹಾಸ್ಟೆಲ್ ಅಸೋಸಿಯೇಷನ್ ಇಂಡಿಯಾ, ವಿವಿಧ ರೋಟರಿ ಕ್ಲಬ್‌ಗಳು, ಜೆ.ಸಿ.ಐ., ಪದವಿ ಪೂರ್ವ ಶಿಕ್ಷಣ ಇಲಾಖೆ ಹಾಗೂ ರಾಷ್ಟ್ರೀಯ ಶಿಕ್ಷಣ ಸಮಿತಿ ಸಹಯೋಗದೊಂದಿಗೆ ಈ ಕಾರ್ಯಕ್ರಮವನ್ನು ಸಂಘಟಿಸಲಾಗಿದೆ. ಕಾನೂನು ಸಾಕ್ಷರತೆಯನ್ನು ಪ್ರಚುರಪಡಿಸಲು ರೂಪಿಸಲಾಗಿರುವ ಈ ಸೈಕಲ್ ರ‍್ಯಾಲಿಯಲ್ಲಿ ಶಿವಮೊಗ್ಗದ ನಾಗರಿಕರು, ಯುವಕರು ಹಾಗೂ ವಿದ್ಯಾರ್ಥಿಗಳು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕಾಗಿ ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಸಂತೋಷ್ ಎಂ.ಎಸ್. ಕೋರಿದ್ದಾರೆ.

shivamogga dasara add
ವಿಷಯಗಳು:
ಹಂಚಿಕೊಳ್ಳಿ
WhatsApp Facebook X Telegram
Prathapa thirthahalli
ಲೇಖಕರ ಬಗ್ಗೆ

Prathapa thirthahalli

Malenadu Today Contributor