ಮೂರು ದಿನ ಶಿವಮೊಗ್ಗ ಜಿಲ್ಲೆಯಲ್ಲಿ ಗೃಹಲಕ್ಷ್ಮೀ ಕ್ಯಾಂಪ್! ಮಹಿಳೆಯರಿಗೆ ಭಾರೀ ಉಪಯೋಗ!

Grihalakshmi camp in Shivamogga district for three days

ಮೂರು ದಿನ ಶಿವಮೊಗ್ಗ ಜಿಲ್ಲೆಯಲ್ಲಿ  ಗೃಹಲಕ್ಷ್ಮೀ ಕ್ಯಾಂಪ್! ಮಹಿಳೆಯರಿಗೆ ಭಾರೀ ಉಪಯೋಗ!

SHIVAMOGGA  |  Dec 26, 2023  |    ಗೃಹಲಕ್ಷ್ಮೀ ಯೋಜನೆಗೆ ಸಂಬಂಧಿಸಿದ ಕ್ಯಾಂಪ್ ಆಯೋಜನೆ

ಗೃಹಲಕ್ಷ್ಮೀ 

ಶಿವಮೊಗ್ಗ, :  ಜಿಲ್ಲಾ ಪಂಚಾಯಿತಿಯು ಗೃಹಲಕ್ಷ್ಮೀ ಯೋಜನೆಗೆ ಸಂಬಂಧಿಸಿದಂತೆ ಸಮಸ್ಯೆಗಳನ್ನು ಪರಿಹರಿಸಲು ಗ್ರಾಮ ಪಂಚಾಯತಿ ಕಚೇರಿಗಳಲ್ಲಿ  ಡಿ. 27 ರಿಂದ ಡಿ. 29 ರವರೆಗೆ ಬೆಳಗ್ಗೆ 9.00 ರಿಂದ ಸಂಜೆ 5.00 ರವರೆಗೆ ಕ್ಯಾಂಪ್‍ಗಳನ್ನು ಆಯೋಜಿಸಿದೆ.

ಈ ಕ್ಯಾಂಪ್‍ನಲ್ಲಿ ಸ್ಥಳೀಯ ಬಾಪೂಜಿ ಸೇವಾ ಕೇಂದ್ರದ ಸಿಬ್ಬಂದಿಗಳು, ಅಂಗನವಾಡಿ ಕಾರ್ಯಕರ್ತರು, ಇ.ಡಿ.ಸಿ.ಎಸ್. ತಂಡ ಹಾಗೂ ಇಂಡಿಯ ಪೋಸ್ಟ್ ಪೇಮಂಟ್ ಬ್ಯಾಂಕ್ ಪ್ರತಿನಿಧಿಗಳು ಮತ್ತು ಇತರೆ ಬ್ಯಾಂಕ್ ಪ್ರತಿನಿಧಿಗಳು ಭಾಗವಹಿಸಲಿದ್ದಾರೆ. 

READ: ಹೆಚ್ಚುತ್ತಿರುವ ಸೋಂಕು! ಕೋವಿಡ್​-19 ಕುರಿತು ಜಿಲ್ಲೆಯ ಜನರಿಗೆ ಜಿಲ್ಲಾಧಿಕಾರಿ ಮಹತ್ವದ ಐದು ಸೂಚನೆ

ಗೃಹಲಕ್ಷ್ಮೀ ಯೋಜನೆಗೆ ಸಂಬಂಧಿಸಿದಂತೆ ಬ್ಯಾಂಕ್ ಖಾತೆಗೆ ಆಧಾರ್ ಜೋಡಣೆ, ಹೊಸ ಖಾತೆ ತೆರೆಯುವುದು, ಇ-ಕೆವೈಸಿ ಅಪ್‍ಡೆಟ್ ಮಾಡುವುದು, ಗೃಹಲಕ್ಷ್ಮೀ ಅರ್ಜಿ ಸ್ಥಿತಿ ಪರಿಶೀಲಿಸುವುದು ಹಾಗೂ ಇದಕ್ಕೆ ಸಂಬಂಧಿಸಿದ ಇತರೆ ಸಮಸ್ಯೆಗಳನ್ನು ಪರಿಹರಿಸಲಿದ್ದಾರೆ.  

ಈ ಸಂಬಂಧ ಹೆಚ್ಚಿನ ಮಾಹಿತಿಗಾಗಿ ತಾಲೂಕು ಶಿಶು ಅಭಿವೃದ್ಧಿ ಯೋಜನಾ ಕಚೇರಿಗೆ ಹಾಗೂ ಕ್ಷೇತ್ರ ಮಟ್ಟದಲ್ಲಿ ಗ್ರಾಮ ಪಂಚಾಯಿತಿ ಮತ್ತು ಅಂಗನವಾಡಿ ಕಾರ್ಯಕರ್ತೆಯರನ್ನು ಸಂಪರ್ಕಿಸುವಂತೆ ಜಿಲ್ಲಾ ಪಂಚಾಯತಿ ಸಿಇಓ ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.