ನಾಳೆ ಶಿವಮೊಗ್ಗದಲ್ಲಿ ಗೃಹಲಕ್ಷ್ಮಿ ಯೋಜನೆಯ ಅನುಷ್ಟಾನ !

Grihalakshmi scheme to be implemented in Shivamogga tomorrowನಾಳೆ ಶಿವಮೊಗ್ಗದಲ್ಲಿ ಗೃಹಲಕ್ಷ್ಮಿ ಯೋಜನೆಯ ಅನುಷ್ಟಾನ !

ನಾಳೆ ಶಿವಮೊಗ್ಗದಲ್ಲಿ  ಗೃಹಲಕ್ಷ್ಮಿ ಯೋಜನೆಯ ಅನುಷ್ಟಾನ !

KARNATAKA NEWS/ ONLINE / Malenadu today/ Aug 29, 2023 SHIVAMOGGA NEWS  

ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ ಹಾಗೂ ಮಹಾನಗರಪಾಲಿಕೆ ಶಿವಮೊಗ್ಗ ಇವರ ಸಂಯುಕ್ತಾಶ್ರಯದಲ್ಲಿ ಆ.30 ರಂದು ಬೆಳಿಗ್ಗೆ 11 ಗಂಟೆಗೆ ಡಾ.ಬಿ.ಆರ್.ಅಂಬೇಡ್ಕರ್ ಭವನದಲ್ಲಿ ಗೃಹಲಕ್ಷ್ಮಿ ಯೋಜನೆಯ ಅನುಷ್ಟಾನ ಕಾರ್ಯಕ್ರಮ ಏರ್ಪಡಿಸಲಾಗಿದೆ.

ಕಾರ್ಯಕ್ರಮದ ಉದ್ಘಾಟನೆಯನ್ನು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್. ಮಧು ಬಂಗಾರಪ್ಪನವರು ನೆರವೇರಿಸುವರು. ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಹಾಗೂ ವಿಕಲಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ಸಚಿವರಾದ ಲಕ್ಷ್ಮೀ ಆರ್ ಹೆಬ್ಬಾಳ್ಕರ್ ಹಾಗೂ ಯೋಜನೆ ಮತ್ತು ಸಾಂಖ್ಯಿಕ ಇಲಾಖೆ ಸಚಿವರು ಮತ್ತು ಮಲೆನಾಡು ಪ್ರದೇಶಾಭಿವೃದ್ದಿ ಮಂಡಳಿ ಅಧ್ಯಕ್ಷರಾದ ಡಿ.ಸುಧಾಕರ್ ವಿಶೇಷ ಆಹ್ವಾನಿತರಾಗಿ ಪಾಲ್ಗೊಳ್ಳುವರು.

 ಶಿವಮೊಗ್ಗ ವಿಧಾನಸಭಾ ಕ್ಷೇತ್ರದ ಶಾಸಕರಾದ ಎಸ್.ಎನ್.ಚನ್ನಬಸಪ್ಪ(ಚೆನ್ನಿ) ಅವರು ಅಧ್ಯಕ್ಷತೆ ವಹಿಸುವರು. ಸಂಸದರು, ವಿಧಾನಸಭಾ ಮತ್ತು ವಿಧಾನ ಪರಿಷತ್ ಶಾಸಕರು, ಮಹಾನಗರಪಾಲಿಕೆ ಮಹಾಪೌರರು ಮುಖ್ಯ ಅತಿಥಿಗಳಾಗಿ ಪಾಲ್ಗೊಳ್ಳುವರು. ಜಿಲ್ಲಾಧಿಕಾರಿಗಳು, ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿಗಳು, ಜಿ.ಪಂ.ಸಿಇಓ, ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ ಉಪನಿರ್ದೇಶಕರು, ಅಧಿಕಾರಿಗಳು ಪಾಲ್ಗೊಳ್ಳುವರು.

ಕಾಂಗ್ರೇಸ್ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಗಳಲ್ಲಿ ಒಂದಾದ ಶಕ್ತಿ ಯೋಜನೆ ಮಲೆನಾಡಿನ ಬಹುತೇಕ ಜನತೆಗೆ ಲಭ್ಯವೇ ಇಲ್ಲದಂತಾಗಿದೆ. ಜಿಲ್ಲೆಯ 431 ಹಳ್ಳಿಗಳಿಗೆ ಬಸ್ ಸೌಲಭ್ಯವಿಲ್ಲದೆ ವಿದ್ಯಾರ್ಥಿಗಳು ಹಾಗು ಮಹಿಳೆಯರು ನಿತ್ಯ ಪರದಾಡುವಂತ ಸ್ಥಿತಿ ನಿರ್ಮಾಣವಾಗಿದೆ. ಸರ್ಕಾರಿ ಬಸ್ ಸೇವೆ ಇಲ್ಲದ ಹಳ್ಳಿಗಳಲ್ಲಿ ಜನರು ದುಡ್ಡು ಕೊಟ್ಟು ಪ್ರಯಾಣಿಸಬೇಕಿದೆ. ಇನ್ನು ಸರ್ಕಾರದ ಉಚಿತ ಬಸ್ ಪಯಾಣದಲ್ಲಿ ಶಾಲಾ ವಿದ್ಯಾರ್ಥಿಗಳು ಪುರುಷರು ಸೀಟಿಲ್ಲದೆ ನಿಂತುಕೊಂಡೇ ಪ್ರಯಾಣಿಸುವ ಪರಿಸ್ಥಿತಿ ಎದುರಾಗಿದೆ.


ಇನ್ನಷ್ಟು ಸುದ್ದಿಗಳು