SHIVAMOGGA | MALENADUTODAY NEWS | ಮಲೆನಾಡು ಟುಡೆ
Oct 4, 2024 |GRUHA LAKSHMI | ಬಾಕಿ ಇರುವ ಜುಲೈ ಹಾಗೂ ಆಗಸ್ಟ್ ತಿಂಗಳ ಗೃಹಲಕ್ಷ್ಮೀ ಯೋಜನೆಯ ಹಣ ಪಾವತಿ ಯಾವಾಗ ಪಾವತಿ ಆಗಲಿದೆ ಎನ್ನುವ ನಿರೀಕ್ಷೆಗೆ ಇದೀಗ ಉತ್ತರ ಸಿಗುತ್ತಿದೆ.
ಈ ಸಂಬಂಧ ಮಾತನಾಡಿರುವ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ತಾಂತ್ರಿಕ ಕಾರಣಗಳಿಂದ ಗೃಹ ಲಕ್ಷ್ಮಿ ಯೋಜನೆಯ ಜುಲೈ ಮತ್ತು ಆಗಸ್ಟ್ ತಿಂಗಳ ಕಂತಿನ ಹಣ ಬಿಡುಗಡೆ ವಿಳಂಬವಾಗಿತ್ತು.
ಇದೇ ಅಕ್ಟೋಬರ್ 7 ಮತ್ತು 9ರಂದು ಫಲಾನುಭವಿಗಳ ಖಾತೆಗೆ ಈ ಹಣ ಜಮೆ ಆಗಲಿದೆ ಎಂದು ತಿಳಿಸಿದ್ದಾರೆ. ದಸರಾ ಹಬ್ಬದ ವೇಳೆ, ಎರಡು ಕಂತಿನ ಹಣ ನಿಮಗೆಲ್ಲ ಸಿಗಲಿದೆ. ಭರ್ಜರಿಯಾಗಿ ಹೋಳಿಗೆ ಊಟ ಮಾಡಿ. ಅದೇ ನನಗೆ ಸಂತೋಷ ಎಂದು ಅವರು ತಿಳಿಸಿದ್ದಾರೆ.