ಶಿವಮೊಗ್ಗ :  ಗೃಹಲಕ್ಷ್ಮಿ ಯೋಜನೆ ಫಲಾನುಭವಿಗಳಿಗೆ ದೀಪಾವಳಿ ಹಬ್ಬಕ್ಕೆ ಭರ್ಜರಿ ಕೊಡುಗೆ : ಏನದು ?

ಹಂಚಿಕೊಳ್ಳಿ
WhatsApp Facebook X Telegram
Gruhalakshmi Scheme Won't Stop, Confirms Chief
Gruhalakshmi Scheme Won't Stop, Confirms Chief

ಸುದ್ದಿಯ ಸ್ಥಳ: Shivamogga district, Karnataka

ಮಲೆನಾಡು ಟುಡೆ ಸುದ್ದಿ / ಶಿವಮೊಗ್ಗ : ಗೃಹಲಕ್ಷ್ಮಿ ಯೋಜನೆಯ ಎಲ್ಲಾ ಅರ್ಹ ಫಲಾನುಭವಿಗಳಿಗೆ ತಲಾ 2000 ರೂಪಾಯಿಯಂತೆ 3 ಕಂತಿನ ಹಣ ಒಟ್ಟು 6000 ರೂಪಾಯಿಗಳು ರಾಜ್ಯ ಸರ್ಕಾರದಿಂದ ಬಿಡುಗಡೆಯಾಗಿದ್ದು, ದೀಪಾವಳಿ ಹಬ್ಬದ ಈ ಸಂದರ್ಭದಲ್ಲಿ ಗೃಹಲಕ್ಷ್ಮಿಯ ಹಣ ಫಲಾನುಭವಿ ಮಹಿಳೆಯರಿಗೆ ಆರ್ಥಿಕ ಶಕ್ತಿ ತುಂಬಿ ದೀಪಾವಳಿ ಹಬ್ಬವನ್ನು ಸಂಭ್ರಮದಿಂದ ಆಚರಿಸಲು ಸಹಕಾರಿಯಾಗಿದೆ ಎಂದು ಜಿಲ್ಲಾ ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಜಿಲ್ಲಾಧ್ಯಕ್ಷರಾದ ಸಿ.ಎಸ್. ಚಂದ್ರಭೂಪಾಲ್ ತಿಳಿಸಿದ್ದಾರೆ. 

ಗೃಹಲಕ್ಷ್ಮಿ ಯೋಜನೆಯಡಿ ಇದುವರೆಗೆ 33 ಕಂತುಗಳಲ್ಲಿ ಹಣ ಫಲಾನುಭವಿಗಳ ಅವರ ಬ್ಯಾಂಕ್ ಖಾತೆಗೆ ಜಮೆಯಾಗಿದ್ದು, ಈಗ 34, 35, 36ನೇ ಕಂತಿನ ಹಣ ಒಂದೇ ಸಲ ಸರ್ಕಾರದಿಂದ ಬಿಡುಗಡೆಯಾಗಿದೆ. ಈ ವರೆಗೆ ಪ್ರತಿ ಫಲಾನುಭವಿಗೆ 33 ಕಂತುಗಳಲ್ಲಿ, ಒಬ್ಬರಿಗೆ ಎರಡು ಸಾವಿರ ರೂಪಾಯಿಗಳಂತೆ ಒಟ್ಟು 66 ಸಾವಿರ ರೂಪಾಯಿ ಸೇರಿದಂತೆ ಈ ವರೆಗೆ ಒಬ್ಬ ಮಹಿಳಾ ಫಲಾನುಭವಿಗೆ 72 ಸಾವಿರ ತಲುಪಿದಂತಾಗಿದೆ ಎಂದು ಸಿ.ಎಸ್. ಚಂದ್ರಭೂಪಾಲ್ ಅವರು ತಿಳಿಸಿದ್ದಾರೆ. 

ಮುಖ್ಯಮಂತ್ರಿಗಳಾದ ಡಿ.ಕೆ. ಶಿವಕುಮಾರ್ ಅವರು ಗೃಹಲಕ್ಷ್ಮಿ ಯೋಜನೆಯ 3 ಕಂತುಗಳ ಒಟ್ಟಿಗೆ ಹಣವನ್ನು ಬಿಡುಗಡೆ ಮಾಡುವಂತೆ ಆದೇಶ ನೀಡಿದ್ದಾರೆ. ಇದಕ್ಕಾಗಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರಿಗೆ ಧನ್ಯವಾದ ಸಲ್ಲಿಸುತ್ತೇನೆ. 

ಕರ್ನಾಟಕ ಸರ್ಕಾರದ ಮಹತ್ವಾಕಾಂಕ್ಷೆಯ ಪಂಚ ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಗೃಹಲಕ್ಷ್ಮಿ ಯೋಜನೆಯು ಪರಿಣಾಮಕಾರಿಯಾಗಿ ಅನುಷ್ಠಾನಗೊಂಡಿದೆ. ಶಿವಮೊಗ್ಗ ಜಿಲ್ಲೆಯಲ್ಲಿ 3,79,538 ಅರ್ಹ ಮಹಿಳಾ ಫಲಾನುಭವಿಗಳಿಗೆ ಇಲ್ಲಿಯವರೆಗೆ ಒಟ್ಟು ರೂ. 2714,03,36,000 ಕೋಟಿ ರೂಪಾಯಿ ಸಂದಾಯವಾಗಿದ್ದು, ಕರ್ನಾಟಕ ಸರ್ಕಾರದ ಸಾಧನೆಯಿಂದಾಗಿ ಗೃಹಲಕ್ಷ್ಮಿ ಫಲಾನುಭವಿ ಮನೆ ಒಡತಿಗೆ ನೀಡುತ್ತಿರುವ ಗೃಹಲಕ್ಷ್ಮಿ ಹಣ ಅವರಿಗೆ ವಿವಿಧ ರೀತಿಯಲ್ಲಿ ಆರ್ಥಿಕ ಸ್ವಾತಂತ್ರ್ಯ ಮತ್ತು ಸಬಲೀಕರಣವನ್ನು ಉತ್ತೇಜಿಸಿದೆ ಎಂದು ಅವರು ತಿಳಿಸಿದ್ದಾರೆ. 

ವಿಷಯಗಳು:
ಹಂಚಿಕೊಳ್ಳಿ
WhatsApp Facebook X Telegram
Prathapa thirthahalli
ಲೇಖಕರ ಬಗ್ಗೆ

Prathapa thirthahalli

Malenadu Today Contributor