ಗೃಹಲಕ್ಷ್ಮಿ ಯೋಜನೆಗೆ ಇ-ಕೆವೈಸಿ ಬಗ್ಗೆ ಚಂದ್ರಭೂಪಾಲ್​​ ಕೊಟ್ರು ಕ್ಲಾರಿಟಿ, ಏನದು.

ಹಂಚಿಕೊಳ್ಳಿ
WhatsApp Facebook X Telegram
Gruhalakshmi e-KYC Chandrabhupal Denies Rumors
Gruhalakshmi e-KYC Chandrabhupal Denies Rumors

Gruhalakshmi e-KYC ಶಿವಮೊಗ್ಗ : ಗೃಹಲಕ್ಷ್ಮಿ ಯೋಜನೆಯ ಫಲಾನುಭವಿಗಳು ಕಡ್ಡಾಯವಾಗಿ ಇ-ಕೆವೈಸಿ ಅಪ್ಡೇಟ್ ಮಾಡಿಸಬೇಕು ಎಂಬ ವದಂತಿಗಳು ಸುಳ್ಳಾಗಿದ್ದು ಸಾರ್ವಜನಿಕರು ಇವುಗಳಿಗೆ ಕಿವಿಗೊಡಬಾರದು ಎಂದು ಜಿಲ್ಲಾ ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷರಾದ ಸಿ.ಎಸ್. ಚಂದ್ರಭೂಪಾಲ ಅವರು ಸ್ಪಷ್ಟಪಡಿಸಿದ್ದಾರೆ.

ಶಿವಮೊಗ್ಗದಲ್ಲಿ ಇವತ್ತು ಏನೆಲ್ಲಾ ನಡೀತು, ಇ-ಪೇಪರ್​​​ ಓದಿ

ಈ ಕುರಿತು ಮಾತನಾಡಿದ ಅವರು ಇತ್ತೀಚೆಗೆ ಯೂಟ್ಯೂಬ್ ಸೇರಿದಂತೆ ವಿವಿಧ ಸಾಮಾಜಿಕ ಜಾಲತಾಣಗಳಲ್ಲಿ  ಗೃಹಲಕ್ಷ್ಮಿ ಯೋಜನೆಯ ಫಲಾನುಭವಿಗಳು ಕಡ್ಡಾಯವಾಗಿ ಇ-ಕೆವೈಸಿ ಅಪ್ಡೇಟ್ ಮಾಡಿಸಬೇಕು ಎಂಬ ವದಂತಿಗಳು ಹರಡುತ್ತಿದೆ,  ಈ ತಪ್ಪು ಮಾಹಿತಿಯನ್ನು ನಂಬಿ, ಯೋಜನೆಯ ಲಾಭವನ್ನು ಮುಂದುವರೆಸಲು ಫಲಾನುಭವಿಗಳು ಖಾಸಗಿ ಸೈಬರ್ ಕೇಂದ್ರಗಳು, ಗ್ರಾಮ್ ಒನ್ ಹಾಗೂ ಕರ್ನಾಟಕ ಒನ್ ಕೇಂದ್ರಗಳಿಗೆ ಮುಗಿಬೀಳುತ್ತಿರುವುದು ಪ್ರಾಧಿಕಾರದ ಗಮನಕ್ಕೆ ಬಂದಿದೆ. ಈ ಹಿನ್ನೆಲೆಯಲ್ಲಿ ಸಾರ್ವಜನಿಕರು ವಿನಾಕಾರಣ ಸೈಬರ್ ಕೇಂದ್ರಗಳಿಗೆ ಅಲೆದಾಡಿ ತೊಂದರೆಗೆ ಒಳಗಾಗಬಾರದು ಎಂದು ಅವರು ಮನವಿ ಮಾಡಿದ್ದಾರೆ.

Gruhalakshmi e-KYC ಅಧಿಕೃತ ಆದೇಶ ಬಂದಿಲ್ಲ

ಗೃಹಲಕ್ಷ್ಮಿ ಯೋಜನೆಯ ಫಲಾನುಭವಿಗಳ ಪರಿಷ್ಕರಣೆ ಮಾಡುವುದು ರಾಜ್ಯ ಸರ್ಕಾರದ ಉದ್ದೇಶವಾಗಿದ್ದರೂ ಸಹ, ಈ ಪರಿಷ್ಕರಣೆ ಯಾವ ಮಟ್ಟದಲ್ಲಿ ನಡೆಯಬೇಕು ಮತ್ತು ಯಾವ ಮಾರ್ಗಸೂಚಿಗಳನ್ನು ಅನುಸರಿಸಬೇಕು ಎಂಬ ಬಗ್ಗೆ ಯಾವುದೇ ರೀತಿಯ ಅಧಿಕೃತ ಮಾರ್ಗದರ್ಶನ ಅಥವಾ ಸೂಚನೆಗಳು ಸರ್ಕಾರದಿಂದ ಇನ್ನು ಹೊರಬಿದ್ದಿಲ್ಲ.

ರಾಜ್ಯದಲ್ಲಿ ಮಹಿಳೆಯರ ಆರ್ಥಿಕ ಸಬಲೀಕರಣದ ಉದ್ದೇಶದಿಂದ ಎ.ಪಿ.ಎಲ್, ಬಿ.ಪಿ.ಎಲ್ ಮತ್ತು ಅಂತ್ಯೋದಯ ಕಾರ್ಡ್ ಹೊಂದಿರುವ ಕುಟುಂಬದ ಯಜಮಾನಿ ಮಹಿಳೆಯರಿಗೆ ಪ್ರತಿ ತಿಂಗಳು 2,000 ರೂಪಾಯಿಗಳನ್ನು ನೀಡಲಾಗುತ್ತಿದೆ. ಯೋಜನೆ ಆರಂಭವಾದಾಗಿನಿಂದ ಇದುವರೆಗೆ ಒಟ್ಟು 30 ಕಂತುಗಳಲ್ಲಿ ಹಣವನ್ನು ಫಲಾನುಭವಿಗಳ ಖಾತೆಗೆ ಡಿ.ಬಿ.ಟಿ ಮೂಲಕ ಯಶಸ್ವಿಯಾಗಿ ಜಮೆ ಮಾಡಲಾಗಿದೆ. ಪ್ರಸ್ತುತ ಯಾವುದೇ ಅಡಚಣೆಯಿಲ್ಲದೆ ಹಣ ಪಾವತಿಯಾಗುತ್ತಿದ್ದು, ಇ-ಕೆವೈಸಿ ನೆಪದಲ್ಲಿ ಸಾರ್ವಜನಿಕರು ಗೊಂದಲಕ್ಕೀಡಾಗಬಾರದು ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ಹಂಚಿಕೊಳ್ಳಿ
WhatsApp Facebook X Telegram
Prathapa thirthahalli
ಲೇಖಕರ ಬಗ್ಗೆ

Prathapa thirthahalli

Malenadu Today Contributor