ಸಾಗರ ತಾಲ್ಲೂಕಿನಲ್ಲಿ ಪಶ್ಚಿಮ ಬಂಗಾಳದ ಹದೀದ್ ಎಂಬಾತ ಅರೆಸ್ಟ್ ! ಕಾರಣವೇನು ಗೊತ್ತಾ?
Hadid of West Bengal arrested in Sagar taluk!ಸಾಗರ ತಾಲ್ಲೂಕಿನಲ್ಲಿ ಪಶ್ಚಿಮ ಬಂಗಾಳದ ಹದೀದ್ ಎಂಬಾತ ಅರೆಸ್ಟ್ !

KARNATAKA NEWS/ ONLINE / Malenadu today/ Sep 17, 2023 SHIVAMOGGA NEWS
ಶಿವಮೊಗ್ಗ ಜಿಲ್ಲೆ ಸಾಗರ ತಾಲ್ಲೂಕಿನ ಸಾಗರ ಗ್ರಾಮಾಂತರ ಪೊಲೀಸ್ ಸ್ಟೇಷನ್ ಪೊಲೀಸರು ಪ್ರಕರಣವೊಂದರಲ್ಲಿ ಪಶ್ಚಿಮ ಬಂಗಾಳ ಮೂಲದ ವ್ಯಕ್ತಿಯೊಬ್ಬನನ್ನ ಬಂಧಿಸಿದ್ದಾರೆ.
ಏನಿದು ಘಟನೆ
ಸಾಗರ ತಾಲ್ಲೂಕಿನ ಅಂಬಾರಗೋಡ್ಲು ಗ್ರಾಮದಲ್ಲಿ ಒಂಟಿ ಮನೆಯೊಂದರ ಮಹಿಳೆಯ ಮೇಲೆ ನಡೆದಿದ್ದ ಮಾರಣಾಂತಿಕ ಹಲ್ಲೆ ಪ್ರಕರಣ , ಕಳೆದ ಕೆಲವು ತಿಂಗಳಿಂದ ಈ ಭಾಗದಲ್ಲಿ ಆತಂಕ ಮೂಡಿಸಿತ್ತು. ಈ ಪ್ರಕರಣವನ್ನು ಇದೀಗ ಪೊಲೀಸರು ಬೇದಿಸಿದ್ದಾರೆ.
ಅಂಬಾರಗೋಡ್ಲು ಗ್ರಾಮದ ನಿವಾಸಿ ಸುಜಾತಾ ಎಂಬವರ ಮೇಲೆ ನಡೆದಿದ್ದ ಮಾರಣಾಂತಿಕ ಹಲ್ಲೆ ಸಂಬಂಧ ವರ್ಷದ ಆರಂಭದಲ್ಲಿಯೇ ಕೇಸ್ ದಾಖಲಾಗಿತ್ತು. ಆನಂತರ ಕಳೆದ 10 ನೇ ತಾರೀಖು ಸಂತ್ರಸ್ತೆಯ ಮನೆಯ ಸಿಸಿ ಕ್ಯಾಮರಾಗಳ ವಯರ್ ಕಟ್ ಮಾಡಿ ಭಯ ಸೃಷ್ಟಿಸುವ ಪ್ರಯತ್ನ ನಡೆಸಿದ್ದ ಆರೋಪ ಸಂಬಂಧ ಕೇಸ್ ದಾಖಲಾಗಿತ್ತು. ಈ ಪ್ರಕರಣವನ್ನು ಭೇದಿಸಿದ ಪೊಲೀಸರು ಡಿಬಿಎಲ್ ಶೆಡ್ನಲ್ಲಿ ಕೆಲಸ ಮಾಡುತ್ತಿದ್ದ ಪಶ್ಚಿಮ ಬಂಗಾಳದ ಹದೀದ್ ಎಂಬವವನನ್ನು ಬಂಧಿಸಿದ್ದಾರೆ.
ಈ ವೇಳೆ ಆತನಿಂದ ಕಬ್ಬಿಣದ ರಾಡ್ ಹಾಗೂ ಕತ್ತರಿ ಮತ್ತು ಕೃತ್ಯಕ್ಕೆ ಬಳಸಿದ ಇತರೇ ಸಾಮಗ್ರಿಗಳನ್ನು ವಶಕ್ಕೆ ಪಡೆಯಲಾಗಿದ್ದು, ಆರೋಪಿಯ ಕೃತ್ಯದ ಉದ್ದೇಶ ಹಾಗೂ ಆತನ ಹಿನ್ನೆಲೆ ಬಗ್ಗೆ ಪೊಲೀಸರು ತನಿಖೆ ಮುಂದುವರಿಸಿದ್ದಾರೆ.
ಇನ್ನಷ್ಟು ಸುದ್ದಿಗಳು
-
ಶಿವಮೊಗ್ಗ-ಬೆಂಗಳೂರು ವಂದೇ ಭಾರತ್ ಎಕ್ಸ್ಪ್ರೆಸ್ ! ಯಾವಾಗ ಸಂಚರಿಸಲಿದೆ ಬಹುನಿರೀಕ್ಷಿತ ಟ್ರೈನ್?
-
ಗಣೇಶೋತ್ಸವ ಹಾಗೂ ಈದ್ ಮಿಲಾದ್ ! ಸೌಹಾರ್ದ ಸಭೆಯಲ್ಲಿ ಸಚಿವರು & ಶಾಸಕರ ಒಂದೇ ಮಾತು! ಏನೇನು ನಡೀತು ವಿವರ ಇಲ್ಲಿದೆ