ಶಿವಮೊಗ್ಗ: ಬೆಂಗಳೂರು ಹೆಚ್‌ಎಎಲ್‌ನಲ್ಲಿ ಉಚಿತ ಅಪ್ರೆಂಟಿಸ್ ತರಬೇತಿ – ಐಟಿಐ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ!

ಹಂಚಿಕೊಳ್ಳಿ
WhatsApp Facebook X Telegram
HAL Bangalore Invites ITI Apprentice Applications ಎಐ ಕಾಲ್ಪನಿಕ ಚಿತ್ರ
HAL Bangalore Invites ITI Apprentice Applications ಎಐ ಕಾಲ್ಪನಿಕ ಚಿತ್ರ

ಮಲೆನಾಡು ಟುಡೆ ಸುದ್ದಿ/ ಶಿವಮೊಗ್ಗ: ಹಿಂದೂಸ್ಥಾನ್ ಏರೋನಾಟಿಕ್ಸ್ ಲಿಮಿಟೆಡ್ (ಹೆಚ್‌ಎಎಲ್) ಬೆಂಗಳೂರು ಇಲ್ಲಿ ಐಟಿಐ ತೇರ್ಗಡೆ ಹೊಂದಿದ ಅಭ್ಯರ್ಥಿಗಳಿಗೆ ಒಂದು ವರ್ಷದ ಅಪ್ರೆಂಟಿಸ್ ತರಬೇತಿಗೆ ಅರ್ಜಿ ಆಹ್ವಾನಿಸಲಾಗಿದೆ.

ಎಸ್‌ಎಸ್‌ಎಲ್‌ಸಿ ಮತ್ತು ಐಟಿಐ ಪಾಸಾದವರು ಫಿಟ್ಟರ್, ಟರ್ನರ್, ಮಷಿನಿಸ್ಟ್, ಎಲೆಕ್ಟ್ರೀಷಿಯನ್, ವೆಲ್ಡರ್, ಸಿಒಪಿಎ, ಕಾರ್ಪೆಂಟರ್, ಫೌಂಡ್ರಿಮನ್, ಶೀಟ್ ಮೆಟಲ್ ವರ್ಕರ್, ಟೂಲ್ ಆಂಡ್ ಡೈ ಮೇಕರ್, ಸಿಎನ್‌ಸಿ ಪ್ರೋಗ್ರಾಮರ್ ಕಂ ಆಪರೇಟರ್, ಮೆಕಾನಿಕ್ ರೆಫ್ರಿಜಿರೇಟರ್ ಮತ್ತು ಏರ್ ಕಂಡೀಷನಿಂಗ್ ತರಬೇತಿ ಪಡೆಯಲು ಅರ್ಜಿ ಸಲ್ಲಿಸಬಹುದು.

 ಆಸಕ್ತರು ತಮ್ಮ ಎಸ್‌ಎಸ್‌ಎಲ್‌ಸಿ ಮತ್ತು ಐಟಿಐ ಅಂಕಪಟ್ಟಿ, ಜಾತಿ /ಪಿಡಬ್ಲ್ಯೂಡಿ ಪ್ರಮಾಣ ಪತ್ರ, ನ್ಯಾಷನಲ್ ಟ್ರೇಡ್ ಸರ್ಟಿಫಿಕೇಟ್, ಆಧಾರ್ ಕಾರ್ಡ್ ಮತ್ತು ಪಾನ್ ಕಾರ್ಡ್ ಈ ಎಲ್ಲಾ ದಾಖಲೆಗಳ ಮೂಲ ಪ್ರತಿ ಹಾಗೂ 2 ಸೆಟ್ ಜೆರಾಕ್ಸ್ ಪ್ರತಿಯನ್ನು ತೆಗೆದುಕೊಂಡು ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ, ಶಿವಮೊಗ್ಗ, ಗುತ್ಯಪ್ಪ ಕಾಲೋನಿ, ಪಂಪಾ ನಗರ, 2ನೇ ಕ್ರಾಸ್, ಸಾಗರ ರಸ್ತೆ, ಶಿವಮೊಗ್ಗ ಇಲ್ಲಿಗೆ ದಿ:29/08/2025 ರೊಳಗಾಗಿ ಅರ್ಜಿ ಸಲ್ಲಿಸಬಹುದು. 

ಹೆಚ್ಚಿನ ಮಾಹಿತಿ ಮತ್ತು ಅರ್ಜಿ ನಮೂನೆಗಾಗಿ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ, ಶಿವಮೊಗ್ಗ, ದೂ.ಸಂ: 08182-255293, 9380663606/ 9901914601 ನ್ನು ಸಂಪರ್ಕಿಸುವಂತೆ ಉದ್ಯೋಗಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಹಂಚಿಕೊಳ್ಳಿ
WhatsApp Facebook X Telegram
Prathapa thirthahalli
ಲೇಖಕರ ಬಗ್ಗೆ

Prathapa thirthahalli

Malenadu Today Contributor