halke-Muppane launch service / ಹಲ್ಕೆ ಮುಪ್ಪಾನೆ ಲಾಂಚ್​ ಸೇವೆ ಜೂನ್ 4ರ ವರೆಗೆ ಸ್ಥಗಿತ!

halke-Muppane launch service temporarily suspended ಹಲ್ಕೆ-ಮುಪ್ಪಾನೆ ಲಾಂಚ್ ಸೇವೆ ತಾತ್ಕಾಲಿಕ ತಡೆ

ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ಕರೂರು ಹೋಬಳಿಯ ಹಲ್ಕೆ-ಮುಪ್ಪಾನೆ ಲಾಂಚ್ ಸೇವೆಯನ್ನು ಮುಂದಿನ ಜೂನ್ 4ರ ವರೆಗೆ ತಾತ್ಕಾಲಿಕವಾಗಿ ನಿಲ್ಲಿಸಲಾಗಿದೆ ಎಂದು ತಿಳಿದುಬಂದಿದೆ. ಸ್ಥಳೀಯ ವರದಿ ಪ್ರಕಾರ,  ಬಂದರು ಮತ್ತು ಒಳನಾಡು ಜಲಸಾರಿಗೆ ಇಲಾಖೆ ಮುಪ್ಪಾನೆ ಕಡವು ಬಳಿ ಕಾಂಕ್ರೀಟ್ ರಸ್ತೆ ಕಾಮಗಾರಿ ನಡೆಸಲು ಈ ನಿರ್ಧಾರ ಕೈಗೊಂಡಿದೆ. ತುಮರಿ ಗ್ರಾಮ ಪಂಚಾಯತಿಯ ಮನವಿಯನ್ನು ಪರಿಗಣಿಸಿ ಈ ಕ್ರಮ ಜಾರಿ ಮಾಡಲಾಗಿದೆ ಎನ್ನಲಾಗಿದೆ.

ಪರ್ಯಾಯ ಸಾರಿಗೆ ವ್ಯವಸ್ಥೆ halke-Muppane launch service

ರಸ್ತೆ ಕಾಮಗಾರಿಗೆ ಅಡ್ಡಿಯಾಗದಂತೆ ಸಾರ್ವಜನಿಕರ ಓಡಾಟಕ್ಕೆ ಸಂಪೂರ್ಣ ನಿರ್ಬಂಧ ವಿಧಿಸಲಾಗಿದೆ. ಕಡವು ನಿರೀಕ್ಷಕ ಧನೇಂದ್ರ ಕುಮಾರ್ ತಿಳಿಸಿರುವಂತೆ, ದ್ವೀಪ ಪ್ರದೇಶದ ಕುದರೂರು, ಚನ್ನಗೊಂಡ, ಎಸ್.ಎಸ್.ಭೋಗ್, ತುಮರಿ ಮತ್ತು ಕಾರ್ಗಲ್ ಜೋಗದ ನಿವಾಸಿಗಳು ಮತ್ತು ಪ್ರವಾಸಿಗರು ಜೂನ್ 4ರ ವರೆಗೆ ಹೊಳೆಬಾಗಿಲು ಕಡವು ಮಾರ್ಗದ ಸಿಗಂದೂರು ಲಾಂಚ್ ಸೇವೆಯನ್ನು ಬಳಸುವಂತೆ ತಿಳಿಸಲಾಗಿದೆ. ಕಾಂಕ್ರೀಟ್ ರಸ್ತೆ ಕಾಮಗಾರಿ ಮೇ 29ರಿಂದ ಜೂನ್ 4ರ ವರೆಗೆ ನಡೆಯಲಿದ್ದು, ಈ ಅವಧಿಯಲ್ಲಿ ಲಾಂಚ್ ಸೇವೆ ಸ್ಥಗಿತಗೊಳ್ಳಲಿದೆ. ಕಾಮಗಾರಿ ಪೂರ್ಣಗೊಂಡ ನಂತರ ಸೇವೆ ಪುನರಾರಂಭವಾಗುವ ನಿರೀಕ್ಷೆ ಇದೆ. ಸ್ಥಳೀಯರು ಮತ್ತು ಪ್ರಯಾಣಿಕರು ಪರ್ಯಾಯ ಮಾರ್ಗವನ್ನು ಬಳಸುವಂತೆ ಅಧಿಕಾರಿಗಳು ವಿನಂತಿಸಿದ್ದಾರೆ

halke-Muppane launch service
halke-Muppane launch service

 

Leave a Comment

ಶಿವಮೊಗ್ಗಕ್ಕೆ ಬಂದ ಅಲೋಕ್​ ಕುಮಾರ್​ ಮಲೆನಾಡಲ್ಲಿ ಇಷ್ಟೆಲ್ಲಾ ಆಯ್ತು