ಸುದ್ದಿಯ ಸ್ಥಳ: Bhadravati, Shivamogga, Karnataka
ಮಲೆನಾಡು ಟುಡೆ ಸುದ್ದಿ / ಭದ್ರಾವತಿ / ವಿಐಎಸ್‌ಎಲ್ ಕಾರ್ಖಾನೆಯ ಮುಖ್ಯ ಪ್ರವೇಶದ್ವಾರದ ಬಳಿ ಕಳೆದ ಗುರುವಾರ ರಾತ್ರಿ ಯಾರಿಗೂ ತಿಳಿಸದೆ ಆಂಜನೇಯಸ್ವಾಮಿ ಮೂರ್ತಿಯನ್ನು ಇರಿಸಿರುವ ವಿಚಾರ ಈಗ ಆಕ್ಷೇಪಕ್ಕೆ ಕಾರಣವಾಗಿದೆ. ಪೂಜೆ ಪುನಸ್ಕಾರ ಏನನ್ನೂ ಮಾಡದೇ ಮೂರ್ತಿಯನ್ನು ಇರಿಸಲಾಗಿದೆ ಎಂಬುದು ಇಲ್ಲಿನ ಕಾರ್ಮಿಕರ ಆರೋಪ ಈ ಸಮಂಧ ಕ್ರಮ ತೆಗೆದುಕೊಳ್ಳಬೇಕು ಎಂಬುದು ಅವರ ಆಗ್ರಹ
ವಿಐಎಸ್‌ಎಲ್ ಕಾರ್ಖಾನೆಯ ಮುಖ್ಯ ಪ್ರವೇಶದ್ವಾರದ ಬಳಿ ಈಗಾಗಲೇ ಗಣೇಶನ ಮೂರ್ತಿಯಿದೆ. ದಿನಾ ಕೆಲಸಕ್ಕೆ ಬರುವ ಕಾರ್ಮಿಕರು ಗಣಪತಿಗೆ ಕೈ ಮುಗಿದು ತೆರಳುತ್ತಾರೆ. ಗುರುವಾರದ ರಾತ್ರಿ ಭದ್ರತಾ ಸಿಬ್ಬಂದಿ ಕಚೇರಿ ಹತ್ರ ಆಂಜನೇಯಸ್ವಾಮಿ ಮೂರ್ತಿಯನ್ನ ಇರಿಸಿ ದೀಪ ಬೆಳಗಲಾಗಿದೆ. ಇದು ಕಾರ್ಮಿಕರ ಆಕ್ಷೇಪಕ್ಕೆ ಕಾರಣವಾಗಿದ್ದು, ಈ ಕೆಲಸ ಮಾಡಿದವರ ವಿರುದ್ದ ಕ್ರಮ ತೆಗೆದುಕೊಳ್ಳಬೇಕು ಎಂಬುದು ಅವರ ಆಗ್ರಹ. ಈ ಕಾರಣಕ್ಕೆ ಧಾರ್ಮಿಕ ಮೂರ್ತಿಯನ್ನು ಪ್ರತಿಷ್ಠಾಪಿಸುವ ಸಂದರ್ಭದಲ್ಲಿ ಅನುಸರಿಸಬೇಕಾದ ಪೂಜಾ ವಿಧಿವಿಧಾನಗಳನ್ನು ನೆರವೇರಿಸದೆ ಮೂರ್ತಿಯನ್ನು ಇರಿಸಿರುವುದು ಸರಿಯಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿ ಪ್ರತಿಭಟನೆಯನ್ನ ಸಹ ನಡೆಸಿದ್ದಾರೆ.ಈ ಕುರಿತು ಸ್ಥಳೀಯ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಕಾರ್ಖಾನೆಯ ಅಧಿಕಾರಿಗಳು, ನಡೆದ ವಿಚಾರದ ಬಗ್ಗೆ ಪರಿಶೀಲಿಸಿ ಕ್ರಮಕೈಗೊಳ್ಳುವುದಾಗಿ ತಿಳಿಸಿದ್ದಾರೆ
