ಹಸಿರುಮಕ್ಕಿ ಸೇತುವೆ ಕಾಮಗಾರಿ ವಿಳಂಬಕ್ಕೆ ಕಾರಣ ಯಾರು! ಆಣೆ ಮಾಡಿ ಹೇಳುವೆ ಎಂದಿದ್ದೇಕೆ ಹರತಾಳು ಹಾಲಪ್ಪ

ಹಂಚಿಕೊಳ್ಳಿ
WhatsApp Facebook X Telegram
Haratalu Halappa Blames Beluru Gopalakrishna for Hasirumakki Bridge Delay
Haratalu Halappa Blames Beluru Gopalakrishna for Hasirumakki Bridge Delay

ಮಲೆನಾಡು ಟುಡೆ ಸುದ್ದಿ / ಸಾಗರ /ಶರಾವತಿ ಹಿನ್ನೀರಿನ ಹಸಿರುಮಕ್ಕಿ ಸೇತುವೆ ನಿರ್ಮಾಣ ಕಾಮಗಾರಿ ವಿಳಂಬಕ್ಕೆ ಶಾಸಕ ಗೋಪಾಲಕೃಷ್ಣ ಬೇಳೂರು ಅವರ ಅದಕ್ಷತೆಯೇ ಕಾರಣ ಎಂದು ಬಿಜೆಪಿ ರಾಜ್ಯ ಘಟಕದ ಉಪಾಧ್ಯಕ್ಷ, ಮಾಜಿ ಸಚಿವ ಹರತಾಳು ಹಾಲಪ್ಪ ಆರೋಪಿಸಿದ್ದಾರೆ. ಹಸಿರುಮಕ್ಕಿ ಸೇತುವೆ ನಿರ್ಮಾಣ ವಿಳಂಬ ಖಂಡಿಸಿ ಸೇತುವೆಯ ಮೇಲೆ ಸೋಮವಾರ ಬಿಜೆಪಿ ಕಾರ್ಯಕರ್ತರು ಹಮ್ಮಿಕೊಂಡಿದ್ದ ಪ್ರತಿಭಟನಾ ಸಭೆಯಲ್ಲಿ ಮಾತನಾಡಿದ ಅವರು, ತಮ್ಮ ತಪ್ಪನ್ನು ಮುಚ್ಚಿಕೊಳ್ಳಲು ಬೇಳೂರು ಮತ್ತೊಬ್ಬರ ಮೇಲೆ ಗೂಬೆ ಕೂರಿಸುತ್ತಿದ್ದಾರೆ ಎಂದು ಟೀಕಿಸಿದರು.

ಹರತಾಳು ಹಾಲಪ್ಪ ಹೇಳಿದ್ದೇನು?

  • 2017ರಲ್ಲಿ ಕಾಂಗ್ರೆಸ್ ಆಡಳಿತಾವಧಿಯಲ್ಲಿ ತಮ್ಮ ಶಾಸಕರಾಗಿದ್ದ ಸಂದರ್ಭದಲ್ಲಿ ₹87 ಕೋಟಿ ವೆಚ್ಚದಲ್ಲಿ ಸೇತುವೆ ಕಾಮಗಾರಿಗೆ ಮಂಜೂರಾತಿ ದೊರೆತಿತ್ತು.
  • 2018ರಲ್ಲಿ ಟೆಂಡರ್ ಆದ ಯೋಜನೆಯ ಮೊತ್ತ ₹115 ಕೋಟಿಗೇರಿತು. 2018ರಲ್ಲಿ ತಾವು ಶಾಸಕರಾದ ನಂತರ ಕಾಮಗಾರಿಗೆ ಅಗತ್ಯವಿದ್ದ ಭೂಸ್ವಾಧೀನ ಕಾಮಗಾರಿಯನ್ನು ಸ್ಪೀಡ್ ಅಪ್​ ಮಾಡಲಾಗಿತ್ತು.
  • ಶಾಸಕರಾಗಿದ್ದ ಅವಧಿಯಲ್ಲಿ ಸೇತುವೆ ನಿರ್ಮಾಣಕ್ಕೆ ಸಂಬಂಧಿಸಿದ 28 ಬಿಲ್ಲುಗಳ ಹಣ ಬಿಡುಗಡೆ ಮಾಡಿಸಲಾಗಿತ್ತು. ಕಳೆದ ಮೂರೂವರೆ ವರ್ಷಗಳಲ್ಲಿ ಸೇತುವೆಗೆ ಹೆಚ್ಚಿನ ಪ್ರಗತಿಯಾಗಿಲ್ಲ.
  • 4 ಬಿಲ್ಲುಗಳ ಹಣ ಬಿಡುಗಡೆಯಾಗಿರುವುದನ್ನು ಹೊರತುಪಡಿಸಿದರೆ ಕಾಮಗಾರಿ ನಿರೀಕ್ಷಿತ ಮಟ್ಟದಲ್ಲಿ ನಡೆದಿಲ್ಲ ಎಂದು ಆರೋಪಿಸಿದರು.

ಹಸಿರುಮಕ್ಕಿ ಸೇತುವೆ ಕಾಮಗಾರಿ ವಿಳಂಬಕ್ಕೆ ಹಾಲಪ್ಪ ಕಾರಣ ಎಂದು ಶಾಸಕ ಗೋಪಾಲಕೃಷ್ಣ ಬೇಳೂರು ಹೇಳುತ್ತಿದ್ದಾರೆ. ಇದಕ್ಕೆ ನಾನೇ ಕಾರಣ ಎನ್ನುವುದಾದರೆ ಸಿಗಂದೂರು ದೇವಸ್ಥಾನದಲ್ಲಿ ಪ್ರಮಾಣ ಮಾಡಲು ಸಿದ್ಧ . ಹಸಿರುಮಕ್ಕಿ ಸೇತುವೆಯ ಗುತ್ತಿಗೆದಾರರಿಗೆ ₹13 ಕೋಟಿ ಬಾಕಿ ಪಾವತಿಸಬೇಕಿದೆ. ಶಕ್ತಿಯಿದ್ದರೆ ಬೇಳೂರು ಸರ್ಕಾರದಿಂದ ಅದನ್ನು ಕೊಡಿಸಲಿ

ಮಾಜಿ ಸಚಿವ ಹರತಾಳು ಹಾಲಪ್ಪ

ಪ್ರತಿಭಟನೆಯಲ್ಲಿ ತಾಲೂಕು ಪಂಚಾಯಿತಿ ಮಾಜಿ ಅಧ್ಯಕ್ಷ ಮಲ್ಲಿಕಾರ್ಜುನ ಹಕ್ಕೆ, ಟಿ.ಡಿ. ಮೇಘರಾಜ್, ಕೆ.ವಿ. ಕೃಷ್ಣಮೂರ್ತಿ ಸೇರಿದಂತೆ ಬಿಜೆಪಿ ಮುಖಂಡರು ಹಾಗೂ ಕಾರ್ಯಕರ್ತರು ಭಾಗವಹಿಸಿದ್ದರು.

ಹಂಚಿಕೊಳ್ಳಿ
WhatsApp Facebook X Telegram
Ajjimane Ganesh
ಲೇಖಕರ ಬಗ್ಗೆ

Ajjimane Ganesh

Malenadu Today Contributor