Hassan Youth Missing ಶಿವಮೊಗ್ಗ; ಹಾಸನ ಜಿಲ್ಲೆಯ ಅರಕಲಗೂಡ ತಾಲ್ಲೂಕಿನ ಬ್ಯಾಡರಹಳ್ಳಿ ಗ್ರಾಮದ ಧನಂಜಯ ಕುಮಾರ್, 30 ವರ್ಷ, ಮಾನಸಿಕ ಅಸ್ವಸ್ಥನಾಗಿದ್ದು, ಜೂ. 26 ರಂದು ಶಿವಮೊಗ್ಗದ ಮಾನಸ ಆಸ್ಪತ್ರೆಯಲ್ಲಿ ಚಿಕಿತ್ಸೆಗೆಂದು ಕರೆದುಕೊಂಡು ಬಂದಿದ್ದ ವೇಳೆ ಆತ ಆಸ್ಪತ್ರೆಯಿಂದ ಕಾಣೆಯಾಗಿರುತ್ತಾರೆ.
5.2 ಅಡಿ ಎತ್ತರ, ಕೋಲು ಮುಖ, ಕಪ್ಪು ಮೈಬಣ್ಣ ಹೊಂದಿದ್ದು, ಎಡಗೈ ಮೇಲೆ ಹಳೆಯ ಗಾಯದ ಗುರುತು ಇರುತ್ತದೆ. ಕಾಣೆಯಾದ ವೇಳೆ ಬೂದು ಬಣ್ಣದ ತುಂಬುತೋಳಿನ ಶರ್ಟ್ ಹಾಗೂ ಕಪ್ಪು ಬಣ್ಣದ ಪ್ಯಾಂಟ್ ಧರಿಸಿರುತ್ತಾರೆ.
ಈ ವ್ಯಕ್ತಿಯ ಬಗ್ಗೆ ಯಾರಿಗಾದರೂ ಸುಳಿವು ಪತ್ತೆಯಾದಲ್ಲಿ ಶಿವಮೊಗ್ಗ ದೊಡ್ಡಪೇಟೆ ಪೊಲೀಸ್ ಠಾಣೆ ದೂ.ಸಂ.: 08182-261414/ 9480803345 /7349604078 ಗಳನ್ನು ಸಂಪರ್ಕಿಸಿ ಮಾಹಿತಿ ನೀಡುವಂತೆ ಪ್ರಕಟಣೆ ತಿಳಿಸಿದೆ.
Related News
🔔 Breaking News Alerts
ತಾಜಾ ಸುದ್ದಿಗಳನ್ನು ಮೊದಲು ಪಡೆಯಲು ನಮ್ಮ ನೋಟಿಫಿಕೇಶನ್ ಸೇವೆಯನ್ನು ಸಬ್‌ಸ್ಕ್ರೈಬ್ ಮಾಡಿ.
