ನಾಳೆ ಶಿವಮೊಗ್ಗಕ್ಕೆ ಕೇಂದ್ರ ಸಚಿವ ಹೆಚ್ ಡಿ ಕುಮಾರಸ್ವಾಮಿ ಭೇಟಿ | ಏನಿದೆ ವಿಶೇಷ
hd Kumaraswamy visit Shivamogga , ಕೇಂದ್ರ ಉಕ್ಕು ಸಚಿವ ಹೆಚ್‌ಡಿ ಕುಮಾರಸ್ವಾಮಿಯವರು ನಾಳೆ ಶಿವಮೊಗ್ಗಕ್ಕೆ ಭೇಟಿ ನೀಡಲಿದ್ದಾರೆ
SHIVAMOGGA | MALENADUTODAY NEWS | Sep 4, 2024
ಕೇಂದ್ರ ಸಚಿವ ಹೆಚ್ ಡಿ ಕುಮಾರಸ್ವಾಮಿ ಮತ್ತೊಮ್ಮೆ ಶಿವಮೊಗ್ಗಕ್ಕೆ ಬರಲಿದ್ದಾರೆ. ಇದೇ ಸೆಪ್ಟೆಂಬರ್ ಐದರಂದು ಅವರ ಕಾರ್ಯಕ್ರಮ ಶಿವಮೊಗ್ಗದಲ್ಲಿ ನಿಕ್ಕಿಯಾಗಿದೆ.
ಕೇಂದ್ರ ಉಕ್ಕು ಮತ್ತು ಕೈಗಾರಿಕೆ ಸಚಿವ ಹೆಚ್.ಡಿ.ಕುಮಾರಸ್ವಾಮಿ, ಶಿವಮೊಗ್ಗಕ್ಕೆ ಬರಲಿದ್ದು, ಅಂದು ಮಧ್ಯಾಹ್ನ 2 ಗಂಟೆಗೆ ಶುಭಮಂಗಳ ಸಮುದಾಯ ಭವನದಲ್ಲಿ ಜೆಡಿಎಸ್ ಕಾರ್ಯಕರ್ತರ ಬೃಹತ್ ಸಭೆ ಉದ್ಘಾಟಿಸಲಿದ್ದಾರೆ
ಹೆಚ್ ಡಿ ಕುಮಾರಸ್ವಾಮಿ
ಈ ಬಗ್ಗೆ ಜೆಡಿಎಸ್ ಜಿಲ್ಲಾ ಘಟಕದ ಅಧ್ಯಕ್ಷ ಕಡಿದಾಳ್ ಗೋಪಾಲ್ ಮಾಹಿತಿ ನೀಡಿದ್ದು ಕಾರ್ಯಕರ್ತರ ಸಭೆಯಲ್ಲಿ ಭಾಗವಹಿಸಲಿರುವ ಹೆಚ್‌ಡಿಕೆ ಖಾಸಗಿ ಕಾರ್ಯಕ್ರಮಗಳಲ್ಲಿಯು ಸಹ ಪಾಲ್ಗೊಳ್ಳುವರು ಎಂದು ತಿಳಿಸಿದ್ದಾರೆ.
ಇನ್ನೂ ಹೆಚ್‌ಡಿಕೆ ಶಿವಮೊಗ್ಗಕ್ಕೆ ಆಗಮಿಸುತ್ತಿರುವುದು ಜೆಡಿಎಸ್ ಕಾರ್ಯಕರ್ತರಲ್ಲಿ ಹೊಸ ಹುಮ್ಮಸ್ಸು ಮೂಡಿಸಿದ್ದು, ಸ್ಥಳೀಯವಾಗಿ ನಡೆಯುತ್ತಿರುವ ಸದಸ್ಯತ್ವ ಅಭಿಯಾನಕ್ಕೆ ಮತ್ತೊಂದಿಷ್ಟು ಚುರುಕು ಮೂಡಿಸಿದೆ.
ಇನ್ನಷ್ಟು ಸುದ್ದಿಗಳು
ಆನ್ ಲೈನ್ ಮನಿ ಟ್ರೇಡಿಂಗ್ ದಂಧೆಗೆ ಸಿಲುಕಿ ಆತ್ಮಹತ್ಯೆಗೆ ಶರಣಾದನೇ ತೀರ್ಥಹಳ್ಳಿಯ ರ್ಯಾಂಕ್ ವಿದ್ಯಾರ್ಥಿ,ಕಿಚ್ಚ ?
ಅಗ್ನಿವೀರ್ | ಒಂದೇ ಕಾರಣಕ್ಕೆ ನೂರಾರು ವಿದ್ಯಾರ್ಥಿಗಳು ಕೆಲಸ ಕಳೆದುಕೊಳ್ಳಬೇಕಾಯಿತು | ನಡೆದಿದ್ದೇನು?
Bhadra dam | ಮತ್ತೆ ಬರುತ್ತಿದೆ ಮಳೆ | ತುಂಗಾ ಡ್ಯಾಂ ಭರ್ತಿ, ಭದ್ರಾ ಡ್ಯಾಂನಲ್ಲಿ ಎಷ್ಟಿದೆ ನೀರಿನ ಮಟ್ಟ!?