ಭದ್ರಾವತಿಗೆ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಭೇಟಿ, ಯಾವಾಗ, ಕಾರಣವೇನು.?

ಶಿವಮೊಗ್ಗ :  ಕೇಂದ್ರ ಭಾರಿ ಕೈಗಾರಿಕೆ ಮತ್ತು ಉಕ್ಕು ಸಚಿವ ಹೆಚ್.ಡಿ. ಕುಮಾರಸ್ವಾಮಿ ಅವರು ಇಂದು ಶಿವಮೊಗ್ಗ ಜಿಲ್ಲೆಯ ಭದ್ರಾವತಿಗೆ ಭೇಟಿ ನೀಡುತ್ತಿದ್ದಾರೆ. ಹಾಸನದಲ್ಲಿ ನಡೆಯಲಿರುವ ಜೆಡಿಎಸ್ ಪಕ್ಷದ ಬೃಹತ್ ಸಮಾವೇಶದ ನಂತರ ಅವರು ರಸ್ತೆ ಮಾರ್ಗದ ಮೂಲಕ ಭದ್ರಾವತಿಗೆ ಆಗಮಿಸಲಿದ್ದಾರೆ. ಸಂಜೆ 6:00 ಗಂಟೆಗೆ ಭದ್ರಾವತಿಗೆ ತಲುಪಲಿರುವ ಸಚಿವರು, ರಾತ್ರಿ 8:00 ಗಂಟೆಯವರೆಗೆ ಅಲ್ಲಿ ನಡೆಯಲಿರುವ ಪ್ರತಿಷ್ಠಿತ ತರಳಬಾಳು ಹುಣ್ಣಿಮೆ ಮಹೋತ್ಸವದಲ್ಲಿ ಪಾಲ್ಗೊಳ್ಳಲಿದ್ದಾರೆ.

ಸಚಿವರು ಕೇಂದ್ರ ಗೃಹ ಸಚಿವಾಲಯದ Z ಕೆಟಗರಿ ಭದ್ರತೆ ಮತ್ತು ಮಾಜಿ ಪ್ರಧಾನ ಮಂತ್ರಿಗಳ ಕುಟುಂಬದ ಭದ್ರತಾ ವಿಭಾಗದ ಅಡಿಯಲ್ಲಿ ರಕ್ಷಣೆ ಹೊಂದಿದ್ದು, ಭೇಟಿಯ ಹಿನ್ನೆಲೆಯಲ್ಲಿ ಶಿವಮೊಗ್ಗ ಜಿಲ್ಲಾಧಿಕಾರಿಗಳು ಹಾಗೂ ಪೊಲೀಸ್ ವರಿಷ್ಠಾಧಿಕಾರಿಗಳಿಗೆ ಸೂಕ್ತ ಬಂದೋಬಸ್ತ್ ಮತ್ತು ಪೈಲಟ್ ವ್ಯವಸ್ಥೆ ಕಲ್ಪಿಸಲು ಸೂಚಿಸಲಾಗಿದೆ. ಭದ್ರಾವತಿಯ ಕಾರ್ಯಕ್ರಮ ಮುಗಿದ ನಂತರ ರಾತ್ರಿ 8:00 ಗಂಟೆಗೆ ಅವರು ರಸ್ತೆ ಮಾರ್ಗದ ಮೂಲಕ ಬೆಂಗಳೂರಿನ ಜೆ.ಪಿ. ನಗರದ ನಿವಾಸಕ್ಕೆ ಪ್ರಯಾಣ ಬೆಳೆಸಲಿದ್ದಾರೆ.

HD Kumaraswamy Bhadravathi Visit

HD Kumaraswamy Bhadravathi Visit
HD Kumaraswamy Bhadravathi Visit
shivamogga car decor sun control house
shivamogga car decor sun control house