ಡಿಸಿ ಭೇಟಿ ವೇಳೆ, ಮಹಿಳೆ ಹೇಳಿದ ಸತ್ಯ/ ಹುಟ್ಟುವ ಮಗು ಗಂಡು ತಿಳಿಸಿದ ಆಸ್ಪತ್ರೆ ವಿರುದ್ಧ ಆರೋಗ್ಯ ಇಲಾಖೆ ಕ್ರಮ!
Health department to take action against hospital for revealing the gender of baby to a pregnant woman

MALENADUTODAY.COM |SHIVAMOGGA| #KANNADANEWSWEB
SAGARA/ SHIVAMOGGA/ ಜಿಲ್ಲಾಧಿಕಾರಿ ಗ್ರಾಮವಾಸ್ತವ್ಯದ ವೇಳೆಯಲ್ಲಿ ಮಹಿಳೆಯೊಬ್ಬಳು ತನಗೆ ಗಂಡು ಮಗುವೇ ಆಗುತ್ತೆ ಎಂದು ವೈದ್ಯರು ಹೇಳಿದ ಪ್ರಕರಣ ಸಂಬಂಧ ಜಿಲ್ಲಾಧಿಕಾರಿಗಳು ತನಿಖೆಗೆ ಆದೇಶಿಸಿದ್ದರು. ಬ್ರೂಣಪತ್ತೆ ಆರೋಪದ ಸಂಬಂಧ ತನಿಖೆ ನಡೆಸಿದ್ದ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಡಿ.ಐ.ಎಂ.ಸಿ ತಂಡವು ಪಿ.ಸಿ & ಪಿ.ಎನ್.ಡಿ.ಟಿ ಕಾಯಿದೆಯ ಅನ್ವಯ ಸಾಗರದ ಚಾಮರಾಜಪೇಟೆ ಸಂಜೀವಿನಿ ಆಸ್ಪತ್ರೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಅಲ್ಲದೆ ಸ್ಕ್ಯಾನಿಂಗ್‌ಗೆ ಸಂಬಂಧಿಸಿದ ದಾಖಲೆಗಳನ್ನು ವಶಪಡಿಸಿಕೊಂಡು ಹಾಗೂ ಸ್ಕ್ಯಾನಿಂಗ್ ಯಂತ್ರವನ್ನು ಸೀಜ್ & ಸೀಲ್ ಮಾಡಿದ್ದಾರೆ. ಅಲ್ಲದೆ ಈ ಬಗ್ಗೆ ಪಿ.ಸಿ & ಪಿ.ಎನ್.ಡಿ.ಟಿ ಸಲಹಾ ಸಮತಿಯಲ್ಲಿ ಈ ವಿಚಾರವನ್ನು ಮಂಡಿಸಿ ಮುಂದಿನ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದೆ.
ಮಣಿಪುರದಲ್ಲಿ ರಿಪ್ಪನ್ಪೇಟೆ ಯೋಧ ಗುಂಡಿಗೆ ಬಲಿ! ಸಾವಿನ ಬಗ್ಗೆ ಮೂಡಿತು ಅನುಮಾನ?
ನಡೆದಿದ್ದೇನು?
18-03-2023 ರಂದು ಸಾಗರ ತಾಲ್ಲೂಕಿನ ಸೈದೂರು ಗ್ರಾಮ ಪಂಚಾಯಿತಿಯಲ್ಲಿ "ಜಿಲ್ಲಾಧಿಕಾರಿಗಳ ನಡೆ ಹಳ್ಳಿಯ ಕಡೆ" ಕಾರ್ಯಕ್ರಮ ನಡೆದಿತ್ತು. ಈ ವೇಳೆ ಜಿಲ್ಲಾಧಿಕಾರಿ ಡಾ.ಸೆಲ್ವಮಣಿ ತಡಗಳಲೆಯ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಭೇಟಿ ನೀಡಿದ್ದರು. ಈ ವೇಳೆ ಅಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಗರ್ಭಿಣಿಯೊಬ್ಬರ ಆರೋಗ್ಯ ವಿಚಾರಿಸಿದ್ದಾರೆ. ಈ ವೇಳೆ ಮಹಿಳೆ ಡಿಸಿ ಕೇಳಿದ ಪ್ರಶ್ನೆಗಳಿಗೆ ಸಹಜವಾಗಿಯೇ ಉತ್ತರಿಸಿದ್ದಾರೆ. ಅಲ್ಲದೆ, ಸಂಜೀವಿನಿ ಆಸ್ಪತ್ರೆಯಲ್ಲಿ ತಪಾಸಣೆ ಮಾಡಲಾಗಿತ್ತು, ಅಲ್ಲಿ ನನಗೆ ಗಂಡು ಮಗು ಆಗುತ್ತೆ ಎಂದು ತಿಳಿಸಿದ್ದಾರೆ ಎಂದು ಮಹಿಳೆ ಹೇಳಿದ್ದಳು. ಇದು ಜಿಲ್ಲಾಧಿಕಾರಿಯವರಿಗೆ ಅನುಮಾನ ಮೂಡಿಸಿತ್ತು. ಹೀಗಾಗಿ ತನಿಖೆಗೆ ಸೂಚಿಸಿದ್ದರು. ಇದೀಗ ಡಿಸಿ ಸೂಚನೆ ಅನ್ವಯ ಜಿಲ್ಲಾ ಆರೋಗ್ಯ ಇಲಾಖೆ ಕ್ರಮ ಕೈಗೊಂಡು ಪ್ರಕಟಣೆ ಹೊರಡಿಸಿದೆ.
ನಮ್ಮ ವಾಟ್ಸ್ಯಾಪ್ ಗ್ರೂಪ್ ಲಿಂಕ್ ಇದು ಕ್ಲಿಕ್ ಮಾಡಿ
Twitter ನಲ್ಲಿ ನಾವಿದ್ದೇವೆ, ಫಾಲೋ ಮಾಡಿ : Malenadutoday.com
Instagram ನಲ್ಲಿ ಕ್ಲಿಕ್ ಮಾಡಿ : Malenadutoday.com
Telegram ನಲ್ಲಿ ಸುದ್ದಿ ಪಡೆಯಲು ಲಿಂಕ್ ಒತ್ತಿ : Malenadutoday.com
HASHTAGS| sagar karnataka Bhadravathi Latest News, #shivamogga live news #karnatakalocalnews, #karnataka assembly elections 2023shivamogga today news,shivamogga latest news#Shivamogga #ShivamoggaNews #Shimoga #MalnadNews #LocalNews #KannadaNewsWebsite #LatestNewsKannada #ಮಲೆನಾಡು_ಸುದ್ಧಿ #ಶಿವಮೊಗ್ಗ_ನ್ಯೂಸ್ #malenadutodaynews, #todaynewsChilsagar karnataka Bhadravathi Latest News, #shivamogga live news #karnatakalocalnews, #karnataka assembly elections 2023shivamogga today news,shivamogga latest news#Shivamogga #ShivamoggaNews #Shimoga #MalnadNews Sagar Taluk News, Sagar News, Deputy Commissioner's Village Stay, DC Dr. Selvamani, Tadagale Health Centre, Saidur Grama Panchayath, Foetal Detection Allegations, Sanjeevini Hospital ,ಸಾಗರ ತಾಲ್ಲೂಕು ಸುದ್ದಿ, ಸಾಗರ ನ್ಯೂಸ್, ಜಿಲ್ಲಾಧಿಕಾರಿ ಗ್ರಾಮ ವಾಸ್ತವ್ಯ, ಡಿಸಿ ಡಾ.ಸೆಲ್ವಮಣಿ, ತಡಗಳಲೆ ಆರೋಗ್ಯ ಕೇಂದ್ರ, ಸೈದೂರು ಗ್ರಾಮ ಪಂಚಾಯಿತಿ, ಭ್ರೂಣ ಪತ್ತೆ ಆರೋಪ, ಸಂಜೀವಿನಿ ಆಸ್ಪತ್ರೆ