ದ್ವಿಚಕ್ರ ವಾಹನದಲ್ಲಿ ಸಂಚರಿಸುತ್ತಿದ್ದ ಯುವಕ ಹೃದಯಾಘಾತದಿಂದ ಸಾವು

This Article Written by / Prathapa thirthahalli / ಆಗಷ್ಟ್ 5, 2025

Lightning Strike Trading advertisement Current shock : Rippon pete Dasara Sports cyber crimeThreat case

Heart attack ದ್ವಿಚಕ್ರ ವಾಹನದಲ್ಲಿ ಸಂಚರಿಸುತ್ತಿದ್ದ ಯುವಕ ಹೃದಯಾಘಾತದಿಂದ ಸಾವು

ಸಾಗರ: ದಾವಣಗೆರೆಯಿಂದ ಸಾಗರದ ಸಿಗಂದೂರು ದೇವಸ್ಥಾನಕ್ಕೆ ತನ್ನ ಸ್ನೇಹಿತನ ಜೊತೆ ದ್ವಿಚಕ್ರ ವಾಹನದಲ್ಲಿ ಪ್ರಯಾಣಿಸುತ್ತಿದ್ದ 29 ವರ್ಷದ ಯುವಕನೊಬ್ಬ ಹೃದಯಾಘಾತದಿಂದ ಸಾವನ್ನಪ್ಪಿದ್ದಾನೆ. ಈ ಘಟನೆ ತಾಲ್ಲೂಕಿನ ಬಲಸಗೋಡು ಗ್ರಾಮದ ಬಳಿ ನಡೆದಿದೆ.

ದಾವಣಗೆರೆ ಜಿಲ್ಲೆಯ ಬಸಾಪುರ ಗ್ರಾಮದ ಕೆಂಪನಹಳ್ಳಿ ರವೀಂದ್ರ ಅವರ ಹಿರಿಯ ಪುತ್ರ ಕೆ.ಆಕರ್ಷ್ (29) ಮೃತಪಟ್ಟ ಯುವಕ. ಆಕರ್ಷ್ ಅವರು ದಾವಣಗೆರೆ ಲೋಕಸಭಾ ಕ್ಷೇತ್ರದ ಸಂಸದೆ ಪ್ರಭಾ ಮಲ್ಲಿಕಾರ್ಜುನ್ ಅವರ ಆಪ್ತ ಸಹಾಯಕ ಹರೀಶ್ ಬಸಾಪುರ ಅವರ ಸಹೋದರನ ಮಗ ಎಂದು ತಿಳಿದುಬಂದಿದೆ.

ಘಟನೆ ಆನಂದಪುರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದ್ದು, ಪೊಲೀಸರು ಪ್ರಕರಣ ದಾಖಲಿಸಿಕೊಂಡು, ಸಾಗರ ಉಪ ವಿಭಾಗೀಯ ಆಸ್ಪತ್ರೆಯಲ್ಲಿ ಮರಣೋತ್ತರ ಪರೀಕ್ಷೆ ನಡೆಸಿದ್ದಾರೆ.

This Article Written by / Prathapa thirthahalli - Malenadu Today : ತೀರ್ಥಹಳ್ಳಿ ತಾಲ್ಲೂಕು ಗಬಡಿ ಮೂಲದ ಪತ್ರಕರ್ತ ಪ್ರತಾಪ್ ತೀರ್ಥಹಳ್ಳಿ ಕಳೆದ ಮೂರು ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಸದ್ಯ ಮಲೆನಾಡು ಟುಡೆಯಲ್ಲಿ content producer ಆಗಿ ಕಾರ್ಯ ನಿರ್ವಹಿಸುತ್ತಿದ್ದಾರೆ.

ಮುಂದಿನ ಸುದ್ದಿ ಒದಿ

Leave a Comment