ಮಳೆ ಸುದ್ದಿ | ಶಿವಮೊಗ್ಗ ಸೇರಿದಂತೆ ರಾಜ್ಯದ ಹಲವೆಡೆ ಆರೆಂಜ್ ಅಲರ್ಟ್! ಮುಂದುವರಿಯಲಿದೆ ವರ್ಷಧಾರೆ

ajjimane ganesh

ಮಲೆನಾಡು ಟುಡೆ ಸುದ್ದಿ, ಅಕ್ಟೋಬರ್ 23 2025 : ಹಿಂಗಾರು ಮತ್ತಷ್ಟು ಮುಂದುವರಿಯುವ ಸೂಚನೆ ಇದೆ ಎಂದು ಹವಾಮಾನ ಇಲಾಖೆ ಮನ್ಸೂಚನೆ ನೀಡಿದೆ. ಈ ಸಲ ಮಲೆನಾಡಲ್ಲಿ ಜೋಳದ ಬೆಳೆಗೆ ಮಳೆಯಿಂದಲೇ ಸಾಕಷ್ಟು ಅಡ್ಡಿಯಾಗಿತ್ತು. ಇದೀಗ ಕೊಯಿಲಿನ ಸಂದರ್ಭದಲ್ಲಿಯು ಮಳೆ ಆರ್ಭಟಿಸ್ತಿದೆ. ಇದರ ನಡುವೆ ಅಕ್ಟೋಬರ್ 25ರವರೆಗೆ ಮಳೆಯ ಅಬ್ಬರ ಮುಂದುವರಿಯಲಿದೆ ಎಂದು ಭಾರತೀಯ ಹವಾಮಾನ ಇಲಾಖೆ(IMD) ಮುನ್ಸೂಚನೆ ನೀಡಿದೆ. 

ಗುರು ರಾಯರ ವಾರ! ಇವತ್ತಿನ ದಿನವಿಶೇಷ! ದಿನಭವಿಷ್ಯ!

- Advertisement -

ಮುನ್ಸೂಚನೆಯ ಪ್ರಕಾರ, ಬಂಗಾಳ ಕೊಲ್ಲಿಯಲ್ಲಿ ಚಂಡಮಾರುತ (ಸೈಕ್ಲೋನ್) ರೂಪುಗೊಳ್ಳುವ  ಸಾಧ್ಯತೆ ಇದೆ ಎನ್ನಲಾಗಿದೆ. ಪರಿಣಾಮ ರಾಜಧಾನಿ ಬೆಂಗಳೂರು ಸೇರಿದಂತೆ ಹಳೇ ಮೈಸೂರು ಪ್ರಾಂತ್ಯದಲ್ಲಿ ಮಳೆಯಾಗಲಿದೆ.

ಕರಾವಳಿಯಲ್ಲಿ ಎರಡು ದಿನ ಉತ್ತಮ ಮಳೆಯಾಗುವ ಸೂಚನೆ ಇದ್ದು, ಕರಾವಳಿ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ನೀಡಲಾಗಿದೆ. 

ಶಿವಮೊಗ್ಗ, ದಕ್ಷಿಣ ಕನ್ನಡ, ಉಡುಪಿ, ಚಿಕ್ಕಮಗಳೂರು, ಹಾಸನ, ಕೊಡಗು ಮತ್ತು ಚಾಮರಾಜನಗರ ಜಿಲ್ಲೆಗಳಿಗೂ ಇಂದು ಆರೆಂಜ್​ ಅಲರ್ಟ್ ನೀಡಲಾಗಿದೆ. 

ಬೆಂಗಳೂರು, ಬೆಂಗಳೂರು ಗ್ರಾಮಾಂತರ, ಮೈಸೂರು, ಮಂಡ್ಯ ಸೇರಿದಂತೆ ದಕ್ಷಿಣ ಒಳನಾಡು ಮತ್ತು ಉತ್ತರ ಒಳನಾಡಿನ ಬಹುತೇಕ ಜಿಲ್ಲೆಗಳಿಗೆ ಮುಂದಿನ ನಾಲ್ಕು ದಿನಗಳ ಕಾಲ ಯೆಲ್ಲೋ ಅಲರ್ಟ್ ನೀಡಲಾಗಿದೆ. 

Heavy Rain Alert in Karnataka Till October 25: IMD Issues Orange and Yellow Warnings
Heavy Rain Alert in Karnataka Till October 25: IMD Issues Orange and Yellow Warnings

ಖಾಸಗಿ ವಿಡಿಯೋ, ಫೋಟೋ ವೈರಲ್ ಬೆದರಿಕೆ: ಶಿವಮೊಗ್ಗದಲ್ಲಿ ₹2 ಲಕ್ಷಕ್ಕೆ ಬೇಡಿಕೆ, ಏನಿದು ಪ್ರಕರಣ

ಹವಾಮಾನ ಇಲಾಖೆಯು ಮುನ್ನೆಚ್ಚರಿಕೆಯಾಗಿ, ಸಮುದ್ರದಲ್ಲಿ ಗಂಟೆಗೆ 30-40 ಕಿ.ಮೀ. ವೇಗದಲ್ಲಿ ಗಾಳಿ ಬೀಸುವ ಸಂಭವವಿರುವುದರಿಂದ ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಸೂಚಿಸಿದೆ. 

ಕಳೆದ 24 ಗಂಟೆಗಳಲ್ಲಿ ರಾಜ್ಯದ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆಯಾಗಿದೆ. ಇನ್ನೂ ಮುಂದಿನ 10 ದಿನಗಳ ಕಾಲ ನೆರೆಯ ರಾಜ್ಯಗಳಾದ ತಮಿಳುನಾಡು, ಪುದುಚೇರಿ, ಆಂಧ್ರಪ್ರದೇಶ, ಕೇರಳ, ಲಕ್ಷದ್ವೀಪ ಹಾಗೂ ಒಡಿಶಾ ರಾಜ್ಯಗಳಲ್ಲೂ ಮಳೆಯಾಗುವ ನಿರೀಕ್ಷೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. Heavy Rain Alert in Karnataka 

ಮಲೆನಾಡು ಟುಡೆ ಡಿಜಿಟಲ್ ನ್ಯೂಸ್ ಮೀಡಿಯಾ ಶಿವಮೊಗ್ಗವನ್ನೂ ಕೇಂದ್ರಿಕರಿಸಿಕೊಂಡು ಸ್ಥಳೀಯ ವಿಷಯಗಳಿಂದ ಸಕಲ ವಿಚಾರಗಳನ್ನು ಜನರಿಗೆ ಮುಟ್ಟಿಸುವ ಮಾಹಿತಿ ಸಂಸ್ಥೆಯಾಗಿದೆ. ನೀವು ನಮ್ಮನ್ನು Facebook whatsapp whatsapp chanel  instagram youtube telegram  google business   malenadu today epaper malenadutoday web ನಲ್ಲಿ ಬೆಂಬಲಿಸಬಹುದು.. ಸಾದ್ಯವಾದಷ್ಟು ನಮ್ಮ ಪ್ರಯತ್ನಕ್ಕೆ ನಿಮ್ಮ ಬೆಂಬಲವನ್ನು ನೀಡಿ..ಇಲ್ಲಿ ನಿಮ್ಮ ಸಹಕಾರವೇ ಮುಖ್ಯ!

Heavy Rain Alert in Karnataka Till October 25: IMD Issues Orange and Yellow Warnings
Heavy Rain Alert in Karnataka Till October 25: IMD Issues Orange and Yellow Warnings

ಆನೆ ಕಾರ್ಯಾಚರಣೆಯಲ್ಲಿ ಮಂಚೂಣಿಯಲ್ಲಿದ್ದ ಬಾಲಣ್ಣ ,ದಸರಾ ಅಂಬಾರಿ ಹೊತ್ತ ಸಾಗರ್, , ಸೆರೆಯಾದ ಅಡ್ಕಬಡ್ಕ, ಅನಾರೋಗ್ಯದಿಂದ ಬಳಲುತ್ತಿರುವುದೇಕೆ? ಜೆಪಿ ಬರೆಯುತ್ತಾರೆ.

Heavy Rain Alert in Karnataka

 

Share This Article
Leave a Comment

Leave a Reply

Your email address will not be published. Required fields are marked *