THIRTHAHALLI

ತೀರ್ಥಹಳ್ಳಿ: ಬಿರುಗಾಳಿ ಸಹಿತ ಮಳೆಗೆ ಹಾರಿ ಹೋದ ಮನೆಯ ಹಂಚು, ಮರಿದು ಬಿತ್ತು ಹತ್ತಾರು ಅಡಿಕೆ ಮರಗಳು

Prathapa thirthahalli ಅಥಾರಿಟಿ: ಮಲೆನಾಡು ಟುಡೆ ಡೆಸ್ಕ್

ತೀರ್ಥಹಳ್ಳಿ: ಮಲೆನಾಡಿನಲ್ಲಿ ವರುಣನ ಆರ್ಭಟ ಶುರುವಾಗಿದ್ದು, ನಿನ್ನೆ ರಾತ್ರಿ ಸುರಿದ ಬಿರುಗಾಳಿ ಸಹಿತ ಸಿಡಿಲು ಗುಡುಗಿನ ಮಳೆಗೆ ತೀರ್ಥಹಳ್ಳಿ ತಾಲೂಕಿನ ಬೆಜ್ಜವಳ್ಳಿ ಸಮೀಪದ ಗಬಡಿಯಲ್ಲಿ ಅಪಾರ ಪ್ರಮಾಣದ ಹಾನಿ ಸಂಭವಿಸಿದೆ.

ಶಿವಮೊಗ್ಗ ಗ್ರಾಮಾಂತರ : ರಾಗಿ ಗುಡ್ಡದ ವೈನ್​ಶಾಪ್​ನಲ್ಲಿ ಜಗಳ ಬಿಡಿಸಲು ಹೋದ ಯುವಕನಿಗೆ ಚಾಕು ಇರಿತ

ನಿನ್ನೆ ರಾತ್ರಿ ಸುಮಾರು 10 ಗಂಟೆಯ ವೇಳೆಗೆ ಗಬಡಿ ಸೇರಿದಂತೆ ಸುತ್ತಮುತ್ತಲಿನ ಪ್ರದೇಶಗಳಲ್ಲಿ ರಭಸದ ಗಾಳಿಯೊಂದಿಗೆ ಮಳೆ ಸುರಿದಿದೆ. ಈ ವೇಳೆ ಗಬಡಿಯ ಪ್ರಶಾಂತ್ ಎಂಬುವವರ ತೋಟದಲ್ಲಿದ್ದ 10ಕ್ಕೂ ಹೆಚ್ಚು ಅಡಿಕೆ ಮರಗಳು ಗಾಳಿಯ ರಭಸಕ್ಕೆ ತುಂಡಾಗಿ ಮುರಿದು ಬಿದ್ದಿವೆ. ವರ್ಷಾನುಗಟ್ಟಲೆ ಕಷ್ಟಪಟ್ಟು ಬೆಳೆಸಿದ ಅಡಿಕೆ ಮರಗಳು ನೆಲಸಮವಾಗಿರುವುದು ರೈತರಲ್ಲಿ ಆತಂಕ ಮೂಡಿಸಿದೆ.

ಗಾಳಿಯ ವೇಗ ಎಷ್ಟಿತ್ತೆಂದರೆ ಪ್ರಶಾಂತ್ ಅವರ ಮನೆಯ ಶೀಟ್ ಹಾರಿ ಹೋಗಿದ್ದು, ಮನೆಯೊಳಗೆ ಮಳೆ ನೀರು ನುಗ್ಗಿ ಅವಾಂತರ ಸೃಷ್ಟಿಸಿದೆ. ಹಾಗೆಯೇ ಗ್ರಾಮದ ಪ್ರದೀಪ್ ಎಂಬುವವರ ಮನೆಯ ಹಂಚುಗಳು ಸಹ ಗಾಳಿಯ ರಭಸಕ್ಕೆ ಹಾರಿ ಹೋಗಿವೆ. ಇದರಿಂದಾಗಿ ಮನೆಯೊಳಗಿದ್ದ ವಸ್ತುಗಳೆಲ್ಲವೂ ಮಳೆಗೆ ಸಿಲುಕಿ ಹಾನಿಗೊಳಗಾಗಿವೆ.

ಅಷ್ಟೇ ಅಲ್ಲದೆ ಬಿರುಗಾಳಿಯ ಅಬ್ಬರಕ್ಕೆ ಸಿಲುಕಿ ವಿದ್ಯುತ್ ತಂತಿಗಳ ಮೇಲೆ ಮರಗಳು ಬಿದ್ದ ಪರಿಣಾಮ, ಲೈನ್‍ಗಳು ತುಂಡಾಗಿ ಗ್ರಾಮದಲ್ಲಿ ವಿದ್ಯುತ್ ಸಂಪರ್ಕ ಸ್ಥಗಿತಗೊಂಡಿದೆ.

ಕಳೆದ ಕೆಲವು ದಿನಗಳಿಂದ ಸೆಕೆಯ ಬೇಗೆಯಿಂದ ಕಂಗೆಟ್ಟಿದ್ದ ಜನರು, ಒಂಚೂರು ಮಳೆ ಬಂದು ಭೂಮಿ ತಂಪಾದರೆ ಸಾಕು ಎಂದುಕೊಳ್ಳುತ್ತಿದ್ದರು. ಆದರೆ ಬಂದ ಮಳೆ ತಂಪೆರೆಯುವ ಬದಲು ಹೀಗೆ ಅನಾಹುತ ಸೃಷ್ಟಿಸಿರುವುದು ಜನರ ಮನದಲ್ಲಿ ಯಾಕಾದರೂ ಮಳೆ ಬಂತೋ” ಎಂಬ ಆತಂಕ ಮೂಡಿಸುವಂತೆ ಮಾಡಿದೆ.

Heavy Rain and Wind Storm Hits Thirthahalli

Heavy Rain and Wind Storm Hits Thirthahalli
Heavy Rain and Wind Storm Hits Thirthahalli
shivamogga car decor sun control house
shivamogga car decor sun control house

Related News

🔔 Breaking News Alerts

ತಾಜಾ ಸುದ್ದಿಗಳನ್ನು ಮೊದಲು ಪಡೆಯಲು ನಮ್ಮ ನೋಟಿಫಿಕೇಶನ್ ಸೇವೆಯನ್ನು ಸಬ್‌ಸ್ಕ್ರೈಬ್ ಮಾಡಿ.

END OF STORY
ಮಲೆನಾಡು ಟುಡೆ ಫಾಲೋ ಮಾಡಿ

ತಾಜಾ ಸ್ಥಳೀಯ ಸುದ್ದಿಗಳಿಗಾಗಿ ನಮ್ಮ ಅಧಿಕೃತ ಚಾನೆಲ್‌ಗಳಿಗೆ ಸೇರಿ.

Prathapa thirthahalli

Prathapa thirthahalli - Malenadu Today : ತೀರ್ಥಹಳ್ಳಿ ತಾಲ್ಲೂಕು ಗಬಡಿ ಮೂಲದ ಪತ್ರಕರ್ತ ಪ್ರತಾಪ್ ತೀರ್ಥಹಳ್ಳಿ ಕಳೆದ ಮೂರು ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಸದ್ಯ ಮಲೆನಾಡು ಟುಡೆಯಲ್ಲಿ content producer ಆಗಿ ಕಾರ್ಯ ನಿರ್ವಹಿಸುತ್ತಿದ್ದಾರೆ.